ಮಾರಕಾಸ್ತ್ರದಿಂದ ರೌಡಿಶೀಟರ್ ಕೊಲೆ
Team Udayavani, Jun 8, 2020, 6:24 AM IST
ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಎಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಚ್‌ಎಎಲ್‌ನ ಎಲ್‌ಬಿಎಸ್ ನಗರದ ಅರವಿಂದ್ ಅಲಿಯಾಸ್ ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನ (27) ಕೊಲೆಯಾದ ರೌಡಿಶೀಟರ್.
ಕೃತ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಎಲ್‌ಬಿಎಸ್ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅರವಿಂದ್ ವಿರುದ್ಧ ಜೆ.ಪಿ.ನಗರ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದೆ. ಈತನ ವಿರುದ ಕುಮಾರಸ್ವಾಮಿ ಲೇಔಟ್, ಬನಶಂಕರಿ, ಸಿದ್ದಾಪುರ ಠಾಣೆಗಳಲ್ಲಿ ಕೊಲೆ, ಹಲ್ಲೆ, ಕೊಲೆ ಯತ್ನ, ಡಕಾಯಿತಿ ಸೇರಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿವೆ.
ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಅರವಿಂದ್, ಎರಡು ವಾರಗಳ ಹಿಂದಷ್ಟೇ ಬಿಡುಗಡೆಯಾಗಿದ್ದ. ಶನಿವಾರ ರಾತ್ರಿ ಮನೆಯಲ್ಲಿ ಸ್ನೇಹಿತರ ಜತೆ ಪಾರ್ಟಿ ಮಾಡಿದ್ದಾನೆ. ಈ ವೇಳೆ ಆತನ ಸ್ನೇಹಿತರ ನಡುವೆ ಪರಸ್ಪರ ಗಲಾಟೆಯಾಗಿದ್ದು, ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದರು. ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.