ಕಾರ್ಪೊರೇಟರ್‌ ಇಮ್ರಾನ್‌ ಪಾಷಾ ಬಂಧನ


Team Udayavani, Jun 8, 2020, 6:33 AM IST

corporater-arrest

ಬೆಂಗಳೂರು: ಕೋವಿಡ್‌ 19 ಸೋಂಕಿನಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಪಾದರಾಯನಪುರ ವಾರ್ಡ್‌ನ ಜೆಡಿಎಸ್‌ ಕಾರ್ಪೊರೇಟರ್‌ ಇಮ್ರಾನ್‌ ಪಾಷಾ ರೋಡ್‌ ಶೋ  ನಡೆಸಿ ನಿಯಮ ಉಲ್ಲಂಘಿಸಿದ್ದರಿಂದ ಖುದ್ದು ಪೊಲೀಸ್‌ ಆಯುಕ್ತರೇ ಸ್ಥಳಕ್ಕೆ ಹೋಗಿ ಬಂಧಿಸಲು ಸೂಚನೆ ನೀಡಿ ಮತ್ತೆ ವಿಕ್ಟೋರಿಯಾ ಆಸ್ಪತ್ರೆ ಜೈಲು ವಾರ್ಡ್‌ನಲ್ಲಿರಿಸಿದ್ದಾರೆ. ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಇಮ್ರಾನ್‌ ಪಾಷಾ ಬೆಂಬಲಿಗರ ಜತೆ ಅದ್ದೂರಿಯಾಗಿ ಬಹಿರಂಗ ಮೆರವಣಿಗೆ ಮೂಲಕ ತೆರಳಿದರು.

ಈವೇಳೆ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವ ಮೂಲಕ ನಿಯಮ ಉಲ್ಲಂ ಸಿದ್ದರು. ಸಾರ್ವಜನಿಕವಾಗಿ ಇದಕ್ಕೆ  ಸಾಕಷ್ಟು ಆಕ್ಷೇಪವೂ ವ್ಕಕ್ತವಾಯಿತು. ಸರ್ಕಾರ ಹೊರಡಿಸಿರುವ ಆದೇಶವನ್ನು ಉಲ್ಲಂ ಸಿ, ತೆರೆದ ಕಾರಿನಲ್ಲಿ ರೋಡ್‌ ಶೋ ನಡೆಸಿದ ಇಮ್ರಾನ್‌ ಪಾಷಾನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿ, ವಿಕ್ಟೋರಿಯಾ ಆಸ್ಪತ್ರೆಯ  ಜೈಲು  ವಾರ್ಡ್‌ನಲ್ಲಿ ಇರಿಸಿದ್ದಾರೆ. ಘಟನೆ ಸಂಬಂಧ ಜೆ.ಜೆ.ನಗರ ಪೊಲೀಸರು ಇಮ್ರಾನ್‌ ಪಾಷಾ ಹಾಗೂ ಮತ್ತಿತರರ ವಿರುದಟಛಿ ಎನ್‌ಡಿಎಂಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ಪಾದರಾಯನಪುರ  ವಾರ್ಡ್‌ ನಲ್ಲಿ ಕೋವಿಡ್‌ 19 ತಗುಲಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಇಡೀ ಪ್ರದೇಶವನ್ನು ಸೀಲ್‌ಡೌನ್‌ ಮಾಡಿತ್ತು. ಅದರ ನಡುವೆಯೂ ಕಾರ್ಪೊರೇಟರ್‌ ಇಮ್ರಾನ್‌ ಪಾಷಾ  ಯಾವುದೇ  ಮುನ್ನೆಚ್ಚರಿಕೆ ಕ್ರಮಕೈಗೊಳ್ಳದೆ ಬೇಕಾಬಿಟ್ಟಿ ಓಡಾಡುತ್ತಿದ್ದರು. ಮೇ 30ರಂದು ಇಮ್ರಾನ್‌ ಪಾಷಾಗೂ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸತತ ಎಂಟು ದಿನಗಳ ಕಾಲ  ಚಿಕಿತ್ಸೆ ಪಡೆದುಕೊಂಡ ಬಳಿಕ ಇದೀಗ ನೆಗೆಟಿವ್‌ ರಿಪೋರ್ಟ್‌ ಬಂದ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ 11 ಗಂಟೆಯಲ್ಲಿ ಆಸ್ಪತ್ರೆಯಿಂದ ಡಿಸಾcರ್ಜ್‌ ಮಾಡಲಾಗಿತ್ತು.

ಬಹಿರಂಗ ಮೆರವಣಿಗೆ: ಇಮ್ರಾನ್‌ ಪಾಷಾ ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ಅವರ ನೂರಾರು ಬೆಂಬಲಿಗರು, ಇಮ್ರಾನ್‌ ಪಾಷಾಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಬರಮಾಡಿಕೊಂಡರು. ಬಳಿಕ ಮೈಸೂರು ರಸ್ತೆ,  ಬಿನ್ನಿಮಿಲ್‌ ರೋಡ್‌ ಮಾರ್ಗವಾಗಿ ಪಾದರಾಯನಪುರದವರೆಗೂ ತೆರೆದ ಕಾರಿನಲ್ಲಿ ಅದೂರಿಯಾಗಿ ಬಹಿರಂಗ ಮೆರವಣಿಗೆ ನಡೆಸಿದರು. ಕೆಲ ಯುವಕರು ಬೈಕ್‌ರ್ಯಾಲಿ ನಡೆಸಿ, ಮಾರ್ಗದುದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿಯಮ ಉಲ್ಲಂ ಸಿದ್ದಾರೆ. ಸಂಚಾರ ದಟ್ಟಣೆ- ಭಾರೀ ಮೆರವಣೆಗೆ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮೈಸೂರು ರಸ್ತೆ, ಕೆ.ಆರ್‌.ಮಾರ್ಕೆಟ್‌, ಬಿನ್ನಿಮಿಲ್‌  ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ವಾಹನ ಸವಾರರು ಸಂಚಾರ ದಟ್ಟಣೆಯಲ್ಲೇ ಸಿಲುಕಬೇಕಾಯಿತು.

ಈ ಹಿಂದೆಯೂ ಪಾಷಾ ಎಡವಟ್ಟು: ಈ ಮೊದಲು ಕೋವಿಡ್‌ 19 ದೃಢಪಟ್ಟ ಬಳಿಕ ಮೇ 31ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಲು ನಿರಾಕರಿಸಿ ನೂರಾರು ಜನರನ್ನು ಸೇರಿಸಿ ಮನೆಗೆ ಹೋಗಿದ್ದ ಬಿಬಿಎಂಪಿ ಸಿಬ್ಬಂದಿ ಹಾಗೂ ಆರೋಗ್ಯ  ಇಲಾಖೆಯ ಅಧಿಕಾರಿಗಳಿಗೆ 4-5 ಗಂಟೆ ಸತಾಯಿಸಿದ್ದರು. ಇದೀಗ ಅದೇ ತಪ್ಪು ಮಾಡುವ ಮೂಲಕ ನಿಯಮ ಉಲ್ಲಂಘನೆ ಮಾಡಿದ್ದಾರೆ.

ನಿಷೇಧಾಜ್ಞೆ: ಪಾದರಾಯನಪುರ ವಾರ್ಡ್‌ನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್‌ ವಲಯವಾಗಿ ಘೋಷಿಸಲಾಗಿದೆ. ಆದರೂ ಕೆಲ ಕಿಡಿಗೇಡಿಗಳು ಗುಂಪುಗಾರಿಕೆ ಮಾಡುತ್ತಿದ್ದಾರೆ. ಅದರಿಂದ ಅಮಾಯಕ  ಜನರಿಗೂ ಸೋಂಕು ತಗುಲುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಜೂನ್‌ 12ರವರೆಗೆ ಈ ಭಾಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಆದೇಶ ಹೊರಡಿಸಿದ್ದಾರೆ.

ಕಾನೂನು ಕ್ರಮಕ್ಕೆ ಜಮೀರ್‌ ಆಗ್ರಹ: ಪಾದರಾಯನಪುರ ವಾರ್ಡ್‌ ಪಾಲಿಕೆ ಸದಸ್ಯ ಇಮ್ರಾನ್‌ ಪಾಷಾ ಕ್ವಾರಂಟೈನ್‌ ನಿಂದ ಹೊರ ಬರುವಾಗ ಮೆರವಣಿಗೆ ಮಾಡಿರುವುದು ಖಂಡನೀಯ ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌  ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೋವಿಡ್‌ 19 ಸಂದಿಗ್ಧ ಪರಿಸ್ಥಿತಿಯಲ್ಲಿ ಜನರನ್ನು ಸೇರಿಸಿ ಮೆರವಣಿಗೆ ಮಾಡಿರುವುದು ಬೇಜವಾಬ್ದಾರಿ ನಡವಳಿಕೆಯಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದವರೆ  ಈ ರೀತಿ ಮಾಡಿದರೆ ಹೇಗೆ? ಇಮ್ರಾನ್‌ ಪಾಷಾ ಗುಣಮುಖರಾಗಿ ಬಂದಿದ್ದು ಸಂತೋಷವಾಗಿತ್ತು. ಆದರೆ, ಯುದಟಛಿ ಗೆದ್ದು ಬಂದಂತೆ ಮೆರವಣಿಗೆ ಮಾಡಿರುವುದು ಖಂಡನೀಯ. ಅವರ ವಿರುದಟಛಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇಮ್ರಾನ್‌ ಪಾಷಾ ಬೇಜವಾಬ್ದಾರಿ ವರ್ತನೆಯಿಂದ ಸೋಂಕು ಭೀತಿ: ಇಮ್ರಾನ್‌ ಪಾಷಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೇ 30ರಿಂದ ಕೋವಿಡ್‌ 19 ಸೋಂಕು ಪರೀಕ್ಷೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿನಿಂದ ಗುಣಮುಖರಾದ  ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಕಡ್ಡಾಯವಾಗಿ 14 ದಿನ ಹೋಂಕ್ವಾರಂಟೈನ್‌ಗೆ ಒಳಗಾಗುವಂತೆ ಹಾಗೂ ಯಾರೊಂದಿಗೂ ಸೇರದಂತೆ ಆರೋಗ್ಯಾಧಿಕಾರಿಗಳು ಸೂಚನೆ ನೀಡಿದ್ದರು. ಆದರೆ, ಆರೋಗ್ಯ  ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಇಮ್ರಾನ್‌ಪಾಷಾ ಬೆಂಬಲಿಗರೊಂದಿಗೆ ಮೆರವಣಿಗೆ ಮಾಡಿದ್ದು, ಕೋವಿಡ್‌ 19 ಸೋಂಕು ಹರಡುವ ಆತಂಕ ಎದುರಾಗಿದೆ.

ಪಾದರಾಯನಪುರದಲ್ಲಿ ಈಗಾಗಲೇ ನಗರದಲ್ಲೇ ಅತೀ ಹೆಚ್ಚು ಸೋಂಕು  ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಪಾದರಾಯನಪುರದಲ್ಲಿ 67 ಜನರಿಗೆ ಕೋವಿಡ್‌ 19 ದೃಢಪಟ್ಟಿದ್ದು, ಈ ಭಾಗದಲ್ಲಿ ಸೋಂಕಿಗೆ ಕಡಿವಾಣ ಹಾಕಲು ಬಿಬಿಎಂಪಿ, ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ. ಆದರೆ, ಜವಾಬ್ದಾರಿಯುತ  ಸ್ಥಾನದಲ್ಲಿರುವ ಜನಪ್ರತಿನಿಧಿ ಪದೇ ಪದೆ ಈ ರೀತಿ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದಕ್ಕೆ ಬಿಬಿಎಂಪಿಯ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮೇ 29 ರಂದು ಇಮ್ರಾನ್‌ಪಾಷಾಗೆ ಸೋಂಕು ದೃಢಪಟ್ಟಿತ್ತು. ಆಯುಕ್ತ  ಭಾಸ್ಕರ್‌ ರಾವ್‌ ಅವರು ಎಚ್ಚರಿಕೆ ನೀಡಿದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.