ವೃತ್ತಿ ಪರರಿಗೆ ಸ್ಟುಡಿಯೋ ಕ್ವಾರಂಟೈನ್‌ ಕಲಾಶಿಬಿರ


Team Udayavani, Jun 8, 2020, 6:40 AM IST

shibirakala

ಬೆಂಗಳೂರು: ಕರ್ನಾಟಕ ಲಲಿತ ಕಲಾ ಅಕಾಡೆಮಿ ಹೊಸ ಆಲೋಚನೆಗೆ ಕೈ ಹಾಕಿದ್ದು ವೃತ್ತಿಪರ ಕಲಾವಿದರಿಗಾಗಿಯೇ “ಸ್ಟುಡಿಯೋ ಕ್ವಾರಂಟೈನ್‌ ಕಲಾಶಿಬಿರ”ಕ್ಕೆ ಮುಂದಾಗಿದೆ. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ  ಮನೆಯಲ್ಲಿಯೇ ವೃತ್ತಿಪರ ಕಲಾವಿದರಿಗೆ ಚಿತ್ರಕಲಾ ಶಿಬಿರವನ್ನು ಆಯೋಜಿಸಲು ತೀರ್ಮಾನಿಸಿದೆ. ಈಗಾಗಲೇ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸ್ಥಾಯಿ ಸಮಿತಿಯ  ಸಭೆ ನಡೆಸಿದ್ದು ಈ ಬಗ್ಗೆ ಅಕಾಡಮಿ ಸದಸ್ಯರುಗಳಲ್ಲಿ ವಿಸ್ತೃತ ಚರ್ಚೆ ನಡೆಸಿದ್ದಾರೆ.

ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದು, ಸಮ್ಮತಿಸಿದರೆ ಶೀಘ್ರದಲ್ಲೇ ಕಲಾಶಿಬಿರ ನಡೆಯಲಿದೆ. ಸ್ಟುಡಿಯೋ ಕ್ವಾರೆಂಟೈನ್‌ ಕಲಾಶಿಬಿರದ ಆಯೋಜನೆ  ಹಾಗೂ ಕಾರ್ಯಕ್ರಮಕ್ಕೆ ಬೇಕಾಗುವ ಅನುದಾನ ಸೇರಿದಂತೆ ಹಲವು ವಿಷಯಗಳ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ. ಸ್ಥಾಯಿ ಸಮಿತಿಯಲ್ಲೂ ಈ ಬಗ್ಗೆ ಒಪ್ಪಿಗೆ ದೊರೆತಿದ್ದು ಇದರ ಜತಗೆ ಯುವ ಕಲಾವಿದರಿಗಾಗಿಯೇ ಹೊಸ  ಕಾರ್ಯಕ್ರಮ ರೂಪಿಸುವ ಕುರಿತಂತೆ ಸಮಾಲೋಚನೆಯೂ ನಡೆದಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಮೂವತ್ತೆ„ದು ವರ್ಷ ಮೇಲ್ಪಟ್ಟ ವೃತ್ತಿಪರ ಕಲಾವಿದರಿದ್ದಾರೆ. ಅವರಲ್ಲಿ ಕೆಲವರನ್ನು  ಮಾತ್ರ ಕಲಾಶಿಬಿರಕ್ಕೆ ಆಯ್ಕೆ  ಮಾಡಲಾಗುವುದು. ಜಿಲ್ಲಾಮಟ್ಟದಲ್ಲಿ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಶಿಬಿರಕ್ಕೆ ಆಯ್ದೆಯಾದವರು ಮನೆಯಲ್ಲಿಯೇ ಚಿತ್ರವನ್ನು ಬಿಡಿಸಬೇಕಾಗುತ್ತದೆ. ಸಾಮಾನ್ಯವಾಗಿ ಅಕಾಡೆಮಿ ಹಮ್ಮಿಕೊಳ್ಳುವ ಕಲಾಶಿಬಿರಗಳು 4-5  ದಿನಗಳು ನಡೆಯುತ್ತವೆ. ಈ ಶಿಬಿರ ಭಿನ್ನವಾಗಿದ್ದು, ಒಂದುವಾರ ನಡೆಯಲಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಡಿ.ಮಹೇಂದ್ರ ಹೇಳಿದ್ದಾರೆ.

ಶಿಬಿರಕ್ಕೆ ಆಯ್ಕೆಯಾದ ಕಲಾವಿದರಿಗೆ ಆರಂಭ ದಲ್ಲಿಯೇ ಅರ್ಧದಷ್ಟು  ಗೌರವ ಧನ ನೀಡಲಾಗುವುದು. ಉತ್ತಮ ಚಿತ್ರಬಿಡಿಸಿದ ಕಲಾವಿದರಿಗೆ ನಗದು ನೀಡುವ ಆಲೋಚನೆ ಇದೆ. ಜಿಲ್ಲೆಗೆ ಇಬ್ಬರು ವೃತ್ತಿ ಪರ ಕಲಾವಿದರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಲಲಿತ ಕಲಾ  ಅಕಾಡೆಮಿಯ ಬಳಕೆ ಆಗದೆ ಇರುವ ಅನುದಾನ ಈ ಕಲಾಶಿಬಿರಕ್ಕೆ ಬಳಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದು ಸರ್ಕಾರದ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ ಎಂದು ಅಕಾಡೆಮಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಲಾಕ್‌ಡೌನ್‌ ಸಡಿಲಿಕೆಯ ಹಿನ್ನೆಲೆಯಲ್ಲಿ ಲಲಿತಕಲಾ ಅಕಾಡೆಮಿ ಹೊಸ ರೂಪದ ಯೋಜನೆಗಳನ್ನು ರೂಪಿಸುತ್ತಿದೆ. ವೃತ್ತಿಪರ ಕಲಾವಿದರಿಗಾಗಿಯೇ ಸ್ಟುಡಿಯೋ ಕ್ವಾರಂಟೈನ್‌ ಕಲಾ ಶಿಬಿರ ಆಯೋಜಿಸಿದ್ದು, ಕಲಾವಿದರು ಅವರ  ಮನೆಯಲ್ಲಿಯೇ ಚಿತ್ರ ಬರೆಯುವ ಶಿಬಿರ ಇದಾಗಿದೆ. 
-ಡಿ.ಮಹೇಂದ್ರ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.