ಕೋವಿಡ್ ತಂಡ ಪರಿಶೀಲನೆ
Team Udayavani, Jun 8, 2020, 7:43 AM IST
ದೇವನಹಳ್ಳಿ: ಬೆಂಗಳೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರ ತಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮ ಪರಿಶೀಲಿಸಿತು.
ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್ ಅವರನ್ನು ಒಳಗೊಂಡ 5 ತಜ್ಞ ವೈದ್ಯರ ತಂಡ ಮೊದಲಿಗೆ ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆಯಿತು.
ಜಿಪಂ ಸಿಇಒ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ದೇವಿ, ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಮತ್ತಿತರರಿದ್ದರು. ಬಳಿಕ ತಜ್ಞ ವೈದ್ಯರ ತಂಡ ದೊಡ್ಡಬಳ್ಳಾಪುರ ತಾಲೂಕಿನ ಬಚ್ಚಹಳ್ಳಿಯ ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯದ ಕ್ವಾರಂಟೈನ್ ಕೇಂದ್ರ, ಇಸ್ತೂರು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕ್ವಾರಂಟೈನ್ ಕೇಂದ್ರ,
ಹನುಮಂತರಾಯನಪಾಳ್ಯ ಕಂಟೈನ್ಮೆಂಟ್ ವಲಯ, ದೊಡ್ಡಬಳ್ಳಾಪರ ನಗರ ಸಮುದಾಯ ಆರೋಗ್ಯ ಕೇಂದ್ರ, ದೊಡ್ಡಬಳ್ಳಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಫೀವರ್ ಕ್ಲಿನಿಕ್, ದೇವನಹಳ್ಳಿ ತಾಲೂಕು ಸಾರ್ವಜನಿಕ ಆಸ್ಪತ್ರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರಿಗೆ ನಡೆಸುತ್ತಿರುವ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣಾ ವ್ಯವಸ್ಥೆ ಪರಿಶೀಲಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.