3 ತಿಂಗಳ ಬಳಿಕ ಹೋಟೆಲ್, ದೇಗುಲ ಆರಂಭ
Team Udayavani, Jun 8, 2020, 8:04 AM IST
ಚಿಕ್ಕಬಳ್ಳಾಪುರ: ಕೋವಿಡ್ 19 ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದರ ಪರಿಣಾಮ 3 ತಿಂಗಳಿಂದ ಬಾಗಿಲು ಬಂದ್ ಮಾಡಿದ್ದ ಹೋಟೆಲ್, ರೆಸ್ಟೋರೆಂಟ್‌ಗಳು ಹಾಗೂ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎ,ಬಿ ಮತ್ತು ಸಿ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಕ್ಷಣಗಣನೆ.
ಸೋಂಕು ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಳೆದ ಮಾ.22 ರಿಂದ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ಹೋಟೆಲ್ ಹಾಗೂ ದೇವಾಲಯಗಳು ಬಾಗಿಲು ಮುಚ್ಚಿದ್ದವು. ಆದರೆ ಕೇಂದ್ರ ಸರ್ಕಾರ ಜೂನ್. 8 ರಿಂದ ದೇವಾಲಯಗಳಲ್ಲಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಿದ್ದು, ಅದೇ ರೀತಿ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳ ಪುನಾರಂಭಕ್ಕೂ ಅನುಮತಿ ನೀಡಿದೆ.
ಗ್ರಾಹಕರ ಸೇವೆಗೆ ಸಿದ್ಧತೆ: ಸೋಮವಾರದಿಂದ ಹೋಟೆಲ್‌ಗಳು ಕಾರ್ಯಾರಂಭ ಮಾಡಲಿರುವ ಹಿನ್ನೆಲೆಯಲ್ಲಿ ಭಾನುವಾರವೇ ಜಿಲ್ಲೆಯ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಸೇವೆ ನೀಡಲು ಅಗತ್ಯ ಸಿದ್ಧತೆ ನಡೆಸಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು.
ಮಾಸ್ಕ್ ಧರಿಸಿರಬೇಕು: ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿ ಅನ್ವಯ ಗ್ರಾಹಕರಿಗೆ ಸೇವೆ ಒದಗಿಸಲು ಹೋಟೆಲ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಗ್ರಾಹಕರು ಮಾಸ್ಕ್ ಧರಿಸಿರಬೇಕು, ಹೋಟೆಲ್ ಒಳಗೆ ಪ್ರವೇಶಿಸುವ ಮುನ್ನ ಗ್ರಾಹಕರ ಉಷ್ಣಾಂಶ ಪರೀಕ್ಷೆಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಸ್ಯಾನಿಟೈಸರ್ ವ್ಯವಸ್ಥೆ ಸಹ ಕಲ್ಪಿಸಲಾಗುವುದು ಎಂದು ನಗರದ ಎಂಜಿ ರಸ್ತೆಯಲ್ಲಿರುವ ಅಂಭಾ ಭವಾನಿ ಹೋಟೆಲ್ ಮಾಲೀಕ ಶ್ರೀಧರ್ ಮೂರ್ತಿ ‘ಉದಯವಾಣಿ’ ಗೆ ತಿಳಿಸಿದರು.
ಹೋಟೆಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 6 ಮಂದಿ ಕೂರುವ ಕಡೆ 4 ಮಂದಿ, ನಾಲ್ವರು ಕೂರುವ ಕಡೆ ಇಬ್ಬರಿಗೆ ಅವಕಾಶ ಕಲ್ಪಿಸಲಾಗುವುದು. ಹೋಟೆಲ್‌ನಲ್ಲಿ ಕೆಲಸ ಮಾಡುವ ಬಾಣಸಿಗರ ಹಾಗೂ ಊಟ, ತಿಂಡಿ ನೀಡುವ ಸಹಾಯಕರಿಗೂ ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾಗಿದೆ ಎಂದರು.
ದೇವಾಲಯಗಳ ಸ್ವಚ್ಛತೆ: ದೇವಾಲಯಗಳಿಗೆ ದರ್ಶನಕ್ಕೆ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ದೇವಾಲಯ ಸಮಿತಿಗಳು ದೇವಾಲಯಗಳಲ್ಲಿ ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಿವೆ. ಜನಸಂ ದಣಿ ಸೇರುವ ಉತ್ಸವಗಳಾದ ಬ್ರಹ್ಮರಥೋತ್ಸವ, ಜಾತ್ರೆ ಮತ್ತಿತರ ವಿಶೇಷ ಪೂಜೆ, ಇತರೆ ಉತ್ಸವ ನಡೆಯುವ ಸೇವೆ ಗಳನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.
ಭಕ್ತಾದಿಗಳು ಮಾಸ್ಕ್ ಧರಿಸಿದರೆ ಮಾತ್ರ ದೇವಾಲಯಕ್ಕೆ ಪ್ರವೇಶವಿರುತ್ತದೆ. ಭಕ್ತರು ಪಾದರಕ್ಷೆಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ಬಿಡಬೇಕು. ದರ್ಶನಕ್ಕೆ ಮುಂದಿನ ಆದೇಶದವರೆಗೆ 65 ವಯಸ್ಸಿನ ವೃದ್ಧರು ಹಾಗೂ 10 ವರ್ಷದ ಒಳಗಿನ ಮಕ್ಕಳು, ಗರ್ಭಿಣಿ ಸ್ತ್ರೀಯರಿಗೆ ಅವಕಾಶವಿಲ್ಲ.
-ಆರ್.ಲತಾ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.