ದಿಲ್ಲಿಯವರಿಗೇ ಆಸ್ಪತ್ರೆ ಮೀಸಲು ; ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈ ಕ್ರಮ
ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ; ಇತರ ರಾಜ್ಯಗಳ ಜತೆಗೆ ಇರುವ ಗಡಿ ಇಂದಿನಿಂದ ತೆರವು
Team Udayavani, Jun 8, 2020, 8:45 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಸ್ಥಳೀಯರಿಗೆ ಚಿಕಿತ್ಸೆಗೆ ಆದ್ಯತೆ ನೀಡಬೇಕು. ಹೀಗೆಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವಿವಾರ ತಿಳಿಸಿದ್ದಾರೆ. ಇದರ ಜತೆಗೆ ಇತರ ರಾಜ್ಯಗಳ ಜತೆಗೆ ಹೊಂದಿಕೊಂಡು ಇರುವ ಗಡಿಯನ್ನು ಸೋಮ ವಾರದಿಂದ ತೆರೆಯಲಿರುವುದಾಗಿ ಕೇಜ್ರಿವಾಲ್ ಆನ್‌ಲೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸೋಂಕಿನ ಸ್ಥಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಭಾರಿ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಶೇ.90ರಷ್ಟು ಮಂದಿ ದಿಲ್ಲಿಯ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ದಿಲ್ಲಿ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ರಾಜಧಾನಿಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರಿಗೇ ಚಿಕಿತ್ಸೆ ಆದ್ಯತೆ ನೀಡಬೇಕು ಎಂದಿದ್ದಾರೆ ಸಿಎಂ ಕೇಜ್ರಿವಾಲ್. ದಿಲ್ಲಿ ಸರಕಾರಿ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ 10 ಸಾವಿರ ಹಾಸಿಗೆಗಳ ಸಾಮರ್ಥ್ಯವಿದೆ. ಸೋಮವಾರದಿಂದ ದಿಲ್ಲಿ ಇತರ ರಾಜ್ಯಗಳ ಜತೆಗೆ ಹೊಂದಿರುವ ಗಡಿಯನ್ನೂ ತೆರವು ಗೊಳಿಸುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.
ವಿಶೇಷ ಶುಲ್ಕ ವಾಪಸ್; ಮದ್ಯಕ್ಕೆ ವ್ಯಾಟ್ ಹೆಚ್ಚಳ ಮದ್ಯದ ಮೇಲೆ ದಿಲ್ಲಿ ಸರಕಾರ ವಿಧಿಸಿದ್ದ ಶೇ.70ರಷ್ಟು “ಕೋವಿಡ್ ವಿಶೇಷ ಶುಲ್ಕ’ ವಾಪಸ್ ಪಡೆದಿದೆ. ಆದರೆ ವ್ಯಾಟ್ ಪ್ರಮಾಣವನ್ನು ಶೇ.20-ಶೇ.25ರಷ್ಟು ಏರಿಕೆ ಮಾಡಿದೆ. ಹೀಗಾದರೂ, ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ “ಗುಂಡಿ’ನ ಬೆಲೆ ಕಡಿಮೆಯಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.