ಜಮ್ಮು-ಕಾಶ್ಮೀರ: 24ಗಂಟೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ 9 ಉಗ್ರರು ಬಲಿ
ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು.
Team Udayavani, Jun 8, 2020, 10:10 AM IST
ಶ್ರೀನಗರ್: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದ್ದು, ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ಉಗ್ರರು ಹತ್ಯೆಗೀಡಾಗಿರುವ ಘಟನೆ ಸೋಮವಾರ ಶೋಪಿಯಾನ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಕಳೆದ 24ಗಂಟೆಯಲ್ಲಿ ನಡೆದ ಎರಡನೇ ಎನ್ ಕೌಂಟರ್ ಇದಾಗಿದ್ದು, ಒಟ್ಟು ಒಂಬತ್ತು ಉಗ್ರರು ಬಲಿಯಾದಂತಾಗಿದೆ.
ದಕ್ಷಿಣ ಕಾಶ್ಮೀರದ ಪಿನ್ಜೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ಪಡೆದ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಗೆ ಇಳಿದಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಏತನ್ಮಧ್ಯೆ ಭದ್ರತಾ ಪಡೆ ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಆದರೆ ಯುವಕರು ಉಗ್ರ ಸಂಘಟನೆಗೆ ಸೇರಬಾರದು ಎಂಬ ಹೊಸ ನೀತಿಯನ್ವಯ ಪೊಲೀಸರು ಸಾವನ್ನಪ್ಪಿರುವ ಉಗ್ರರ ಗುರುತನ್ನು ಬಹಿರಂಗಪಡಿಸಿಲ್ಲ, ಅಲ್ಲದೇ ಅವರು ಯಾವ ಸಂಘಟನೆಗೆ ಸೇರಿದ್ದಾರೆಂಬ ಮಾಹಿತಿಯನ್ನು ಬಹಿರಂಗಗೊಳಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.