ಹೋಂ ಕ್ವಾರಂಟೈನ್: ರಸ್ತೆಗಿಳಿದರೆ ಕೇಸು ದಾಖಲು : ಜಿಲ್ಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್
Team Udayavani, Jun 8, 2020, 7:40 AM IST
ಉಡುಪಿ: ಮನೆಗಳಲ್ಲಿ ಕ್ವಾರಂಟೈನ್‌ನಲ್ಲಿರುವವರು ನಿಯಮ ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿದ್ದು, ಅಂಥವರನ್ನು ಗುರುತಿಸಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಜಿಲ್ಲೆಯಲ್ಲಿ ಪ್ರತ್ಯೇಕ ಫ್ಲೈಯಿಂಗ್ ಸ್ಕ್ವಾಡ್ ಅನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ರಚಿಸಿದ್ದಾರೆ.
ಕೋವಿಡ್ ಹರಡುವುದನ್ನು ತಡೆಯಲು ವಿಧಿಸಿದ್ದ ಲಾಕ್‌ಡೌನ್ ಆದೇಶ ಸಡಿಲವಾದ ಅನಂತರ ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ಸಾರ್ವಜನಿಕರಿಗೆ ತಮ್ಮ ರಾಜ್ಯಗಳಿಗೆ ತೆರಳಲು ಅನುಮತಿ ನೀಡಿದ್ದು, ಅದರಂತೆ ಉಡುಪಿ ಜಿಲ್ಲೆಗೆ ಸಹ ವಿವಿಧ ರಾಜ್ಯಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಅವರನ್ನು ಕ್ವಾರಂಟೈನ್ ಮಾಡುವಂತೆ ಸರಕಾರದ ಸೂಚನೆಯಿದೆ. ಆದರೆ ಕ್ವಾರಂಟೈನ್‌ನಲ್ಲಿರುವವರು ನಿಯಮ ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಚುನಾವಣೆ ಸಂದರ್ಭ ಯಾವುದೇ ಅಕ್ರಮಗಳು, ನೀತಿ ಸಂಹಿತೆ ಉಲ್ಲಂಘನೆ ಮಾಹಿತಿ ಬಂದಲ್ಲಿ ತತ್‌ಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುತ್ತಿದ್ದ ಮಾದರಿಯಲ್ಲಿಯೇ ಈ ಸ್ಕ್ವಾಡ್ ಕಾರ್ಯಾಚರಿಸಲಿದೆ.
ಹೊರರಾಜ್ಯದಿಂದ ಬಂದು ಹೋಂ ಕ್ವಾರಂಟೈನ್‌ನಲ್ಲಿದ್ದು ನಿಯಮ ಮೀರಿ ಹೊರಗಡೆ ತಿರುಗಾಡುತ್ತಿರುವವರ ಕುರಿತು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವುದರ ಜತೆಗೆ ಅವರನ್ನು ಪುನಃ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸುವ ಕಾರ್ಯವನ್ನು ಈ ತಂಡದ ಅಧಿಕಾರಿಗಳು ಮಾಡಲಿದ್ದಾರೆ. ಪ್ರತಿ ದಿನ ತಮ್ಮ ವ್ಯಾಪ್ತಿಯಲ್ಲಿ ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳು ಮನೆಯಲ್ಲಿರುವ ಕುರಿತು ಪರಿಶೀಲನೆ ಮಾಡುವುದರ ಜತೆಗೆ ತಮ್ಮ ವ್ಯಾಪ್ತಿಯಲ್ಲಿನ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿಗೆ ಸಹ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಪ್ರತ್ಯೇಕ ತಂಡ
ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಪ್ರತ್ಯೇಕ ತಂಡವನ್ನು ರಚಿಸಲಾಗಿದ್ದು ಉಡುಪಿ ನಗರಸಭೆ, ಉಡುಪಿ ತಾ.ಪಂ. ವ್ಯಾಪ್ತಿಯ ಗ್ರಾಮಗಳು, ಕಾಪು ತಾಲೂಕು, ಬ್ರಹ್ಮಾವರ ತಾಲೂಕು, ಕಾರ್ಕಳ ತಾಲೂಕು, ಹೆಬ್ರಿ ತಾಲೂಕು, ಬೈಂದೂರು ಹೋಬಳಿ, ಕುಂದಾಪುರ ಹೋಬಳಿ, ವಂಡ್ಸೆ ಹೋಬಳಿ ವ್ಯಾಪ್ತಿಗೆ ಅಧಿಕಾರಿಗಳು ಮತ್ತು ಸಹಾಯಕ ಸಿಬಂದಿಯನ್ನು ನೇಮಿಸಲಾಗಿದೆ.
ಅಧಿಕಾರಿಗಳಿಂದ ಪರಿಶೀಲನೆ
ಪಿಡಿಒ, ಗ್ರಾಮ ಕರಣಿಕರು ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳ ಮನೆಗೆ ಪ್ರತಿದಿನ ಭೇಟಿ ನೀಡಿ, ಮೊಬೈಲ್‌ನಲ್ಲಿ ಫೋಟೋ ತೆಗೆದು ಕ್ವಾರಂಟೈನ್ ಮೊಬೈಲ್ ವಾಚ್ ಆ್ಯಪ್ ಮೂಲಕ ಅಪ್‌ಲೋಡ್ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.