ಕೋವಿಡ್ ವಿರುದ್ದದ ಸೇನಾನಿಗಳಿಗೆ ಸನ್ಮಾನ
Team Udayavani, Jun 8, 2020, 11:41 AM IST
ಹುಬ್ಬಳ್ಳಿ: ಕೋವಿಡ್ ವಾರಿಯರ್ಸ್ ಗಳಾದ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾಗಿದೆ ಎಂದು ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಹೇಳಿದರು.
ವಾರ್ಡ್ 52ರಲ್ಲಿ ಮಾಜಿ ಮಹಾಪೌರ ಸುಧಿಧೀರ ಸರಾಫ್ ಅವರ ಜನ ಸಂಪರ್ಕ ಕಚೇರಿಯಲ್ಲಿ ನಡೆದ ಕೋವಿಡ್ ವಾರಿಯರ್ಸ್ಗಳ ಸನ್ಮಾನ ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದರು. ಪೊಲೀಸ್, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರಿಗೆ ಪ್ರೋತ್ಸಾಹ ತುಂಬುವ ಕಾರ್ಯ ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ, ಅವರ ಈ ಕಾರ್ಯಕ್ಕೆ ನಾವೆಲ್ಲರೂ ಕೈ ಜೋಡಿಸೋಣ ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆಯಿಂದ ಕೋವಿಡ್ ವಾರಿಯರ್ಸ್ಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ ಅವರ ಆಪ್ತ ಸಹಾಯಕ ಮಲ್ಲಿಕಾರ್ಜುನಗೌಡ ಪಾಟೀಲ, ಬಹಳಷ್ಟು ಸಾರ್ವಜನಿಕರು, ಜನಪ್ರತಿನಿಧಿ ಗಳು ಕೋವಿಡ್ ವಾರಿರ್ಯಸ್ಗೆ ಬೆಂಬಲ ನೀಡುತ್ತಿದ್ದಾರೆ. ಎಲ್ಲಿಯೂ ಸಹ ಅವರ ಕಾರ್ಯಕ್ಕೆ ಅಡ್ಡಿಯಾಗಲಿ, ತೊಂದರೆಯಾಗಲಿ ನೀಡದೆ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರೂ ಸಹ ಮುಂದೆ ಬಂದು ಬಡವರಿಗೆ ಉಚಿತ ಆಹಾರ ಧಾನ್ಯ ವಿತರಿಸಬೇಕು ಎಂದರಲ್ಲದೇ, ಕೋವಿಡ್- 19ರ ವಿರುದ್ಧದ ಹೋರಾಟದಲ್ಲಿ ಇವರುಗಳು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದರು.
ಮಾಜಿ ಮಹಾಪೌರ ಸುಧಿಧೀರ ಸರಾಫ್, ಪ್ರಭು ನವಲಗುಂದಮಠ, ಶಿವು ಮೆಣಸಿನಕಾಯಿ, ಸತೀಶ ಶೇಜವಾಡಕರ, ಚಂದ್ರಶೇಖರ ಬೆಳವಾಡಿ, ರೋಹಿತ ಹುದ್ದಾರ, ವಾಸು ಸುಳ್ಳದ, ಸಂತೋಷ ಬೋಜಗಾರ, ಚಂದ್ರು ಗಾಯಕವಾಡ, ನಾಗರಾಜ್ ಗರಗೆ, ಮಹೇಶ ಶೇಠ, ನಾಗರಾಜ ಟಗರಗುಂಟೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.