ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮಕ್ಕೆ ಸಕಲ ಸಿದ್ಧತೆ

ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಪೂರೈಕೆ ನಕಲು ತಡೆಗೆ ಕಟ್ಟುನಿಟ್ಟಿನ ಕ್ರಮ: ಸುರೇಶ ಕುಮಾರ್‌

Team Udayavani, Jun 8, 2020, 12:22 PM IST

08-June-07

ಸಾಂದರ್ಭಿಕ ಚಿತ್ರ

ರಾಯಚೂರು: ಹೈಕೋರ್ಟ್‌ ನಿರ್ದೇಶನದ ಮೇರೆಗೆ ಜೂ.25ರಿಂದ ಜು.4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶಕುಮಾರ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮಾರ್ಚ್‌ ಅಂತ್ಯಕ್ಕೆ ನಡೆಯಬೇಕಿದ್ದ ಪರೀಕ್ಷೆಗಳು ಲಾಕ್‌ಡೌನ್‌ ಕಾರಣ ಮುಂದೂಡಲ್ಪಟ್ಟಿವೆ. ಕೇಂದ್ರ ಗೃಹ ಸಚಿವಾಲಯ ಪರೀಕ್ಷೆ ನಡೆಸಲು ಸಮ್ಮತಿ ತೋರಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸುವುದಾಗಿ ತಿಳಿಸಿದರು.

ರಾಜ್ಯದಲ್ಲಿ 8,48,203 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಪರೀಕ್ಷಾರ್ಥಿಗಳಿಗೆ ಮಾಸ್ಕ್ ನೀಡಲಾಗುವುದು. ಅದಕ್ಕಾಗಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನವರು 8.5 ಲಕ್ಷ ಮಾಸ್ಕ್ ನೀಡಿದ್ದಾರೆ. ಸ್ವಯಂ ಸೇವಾ ಸಂಘ-ಸಂಸ್ಥೆಗಳು, ದಾನಿಗಳು, ಜನಪ್ರತಿನಿಧಿಗಳು ಮಾಸ್ಕ್ ನೀಡಲು ಮುಂದೆ ಬಂದಿದ್ದಾರೆ ಎಂದು ವಿವರಿಸಿದರು. ರಾಜ್ಯದ ಪ್ರಮುಖ ಸಂಸ್ಥೆ 75 ಲಕ್ಷ ರೂ. ಮೌಲ್ಯದ ಸ್ಯಾನಿಟೈಸರ್‌ ಪೂರೈಸುತ್ತಿದೆ. ಪ್ರತಿ ಡೆಸ್ಕ್ನಿಂದ ಡೆಸ್ಕ್ಗೆ 3.5 ಅಡಿ ಅಂತರ ಪಾಲಿಸಲಾಗುತ್ತಿದೆ. ಪರೀಕ್ಷೆ ವೇಳೆ ಅನಾರೋಗ್ಯ ಕಂಡು ಬಂದರೆ ಆ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಸಿ ಪರೀಕ್ಷೆ ಬರೆಸುವುದಾಗಿ ತಿಳಿಸಿದರು.

ಪರೀಕ್ಷಾ ಮೇಲ್ವಿಚಾರಕರು ಕೂಡ ಕಡ್ಡಾಯವಾಗಿ ಹ್ಯಾಂಡ್‌ ಗ್ಲೌಸ್‌ ಧರಿಸಬೇಕು. ಪೋಷಕರಿಗೆ ಶಾಲಾ ಆವರಣ ಪ್ರವೇಶವಿಲ್ಲ. ಆದರೆ, ನಕಲು ಮಾಡಿದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವರು ಎಂದರು. ಪರೀಕ್ಷೆ ಬರೆಯಲು ಬರುವ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು ಜೂ.10 ರೊಳಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷಾರ್ಥಿಗಳು ಮನೆಯಿಂದಲೇ ನೀರು, ಊಟ, ಉಪಹಾರ ತರಬೇಕು ಎಂದರು.

ಡಿಡಿಪಿಐ ಎಚ್‌.ಬಿ.ಗೋನಾಳ ಮಾತನಾಡಿ, ಜಿಲ್ಲಾದ್ಯಂತ 30,413 ಮಕ್ಕಳು ಪರೀಕ್ಷೆ ಬರೆಯುವರು. 77 ಕೇಂದ್ರಗಳು, 9 ಉಪ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 757 ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರ ಬದಲಿಸಿಕೊಂಡಿದ್ದಾರೆ. ಆರೋಗ್ಯ ಇಲಾಖೆ 70 ಸಾವಿರ ಮಾಸ್ಕ್ ನೀಡಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಮಾತನಾಡಿದರು.ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸರನ್ನು ನಿಯೋಜಿಸಲಾಗುವುದು ಎಂದರು.

ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಕೆ.ಶಿವನಗೌಡ ನಾಯಕ, ಡಾ| ಶಿವರಾಜ ಪಾಟೀಲ, ವೆಂಕಟರಾವ್‌ ನಾಡಗೌಡ, ದದ್ದಲ್‌ ಬಸನಗೌಡ, ಎಂಎಲ್‌ಸಿ ಎನ್‌.ಎಸ್‌.ಬೋಸರಾಜು, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಕಲಬುರಗಿ ಶಿಕ್ಷಣ ಇಲಾಖೆ ಅಪರ ಆಯುಕ್ತ ನಲಿನ್‌ ಅತುಲ್‌, ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಸಮುದ್ರದ ಮಧ್ಯೆ ಮೀನುಗಾರ ನಾಪತ್ತೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.