ಸದ್ಯಕ್ಕೆ ಭಕ್ತರಿಗಿಲ್ಲ ಕಿಷ್ಕಿಂದಾ ಅಂಜನಾದ್ರಿ ದರ್ಶನ ಭಾಗ್ಯ
Team Udayavani, Jun 8, 2020, 1:32 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ದ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇಗುಲದ ಬಾಗಿಲು ತೆಗೆದು ದೇವರ ದರ್ಶನಕ್ಕೆ ಭಕ್ತರಿಗೆ ಸೋಮವಾರದಿಂದ ಅವಕಾಶ ಮಾಡಿಕೊಡಲು ಜಿಲ್ಲಾಡಳಿತ ಸಿದ್ದತೆ ನಡೆಸಿತ್ತು. ಭಕ್ತರ ಒತ್ತಾಯದ ಮೇರೆಗೆ ಇನ್ನೂ ಸ್ವಲ್ಪ ದಿನ ದೇಗುಲವನ್ನು ಬಂದ್ ಮಾಡಲು ಆಡಳಿತ ಮಂಡಳಿ ನಿರ್ಧರಿದೆ.
ಕೋವಿಡ್-19 ರೋಗ ಹರಡದಂತೆ ಜಿಲ್ಲಾಡಳಿತ ದೇಗುಲವನ್ನು ಕಳೆದ ಮಾ. 23ರಂದು ಬಂದ್ ಮಾಡಿತ್ತು ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆಯಾಗಿದ್ದರಿಂದ ಜೂನ್ 08ರಂದು ಸಾಮಾಜಿಕ ಅಂತರ ಕಾಪಾಡುವ ಜತೆ ಹಲವು ನಿಯಮಗಳ ಪಾಲನೆ ಮಾಡುವ ಮೂಲಕ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿತ್ತು.
ತಾಲೂಕಿನ ಚಿಕ್ಕಜಂತಗಲ್ ಸೇರಿ ವಿವಿಧೆಡೆ ಕೋವಿಡ್-19 ಸೋಂಕಿತರು ಕಂಡು ಬಂದ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಸೋಂಕು ಹರಡುವ ಭೀತಿ ಇದೆ. ಇನ್ನೂ ಸ್ವಲ್ಪ ದಿನ ದೇಗುಲ ಮುಚ್ಚುವಂತೆ ಮನವಿಯ ಹಿನ್ನೆಲೆಯಲ್ಲಿ ಬಾಗಿಲು ತೆಗೆಯುವ ನಿರ್ಧಾರವನ್ನು ಕೈ ಬಿಡಲಾಗಿದೆ. ನಿತ್ಯ ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತವೆ ಎಂದು ದೇಗುಲ ಕಮೀಟಿ ಇಒ ಮತ್ತು ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಉದಯವಾಣಿ ಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.