ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ದರ್ಶನಕ್ಕೆ ಮುಕ್ತ ಅವಕಾಶ
Team Udayavani, Jun 8, 2020, 2:49 PM IST
ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್ 19 ವೈರಸ್ ತಡೆಗಟ್ಟಲು ಇಡೀ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳುಗಳ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು , ಕುಂದಾಪುರ ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮುಂಜಾನೆಯಿಂದಲೇ ನಂಬಿದ ಭಗವದ್ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದರು.
ದೇವರ ದರ್ಶನಕ್ಕೂ ಮುನ್ನ ಸರಕಾರ ಆದೇಶದಂತೆ ಥರ್ಮಲ್ ಸ್ಕ್ಯಾನ್ ಮಾಡಿಸಿ ನಂತರ ಸರತಿ ಸಾಲಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜತೆಗೆ ಸ್ಯಾನಿಟೈಸರ್‌ನಿಂದ ಕೈಗಳನ್ನು ಉಜ್ಜಿಕೊಂಡು ಕಡ್ಡಾಯ ವಾಗಿ ಮಾಸ್ಕ್ ಅಥವಾ ಕರವಸ್ತ್ರವನ್ನು ಧರಿಸಿ ಒಳಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ತಿಳಿಸಿದ್ದಾರೆ.
ಚಿತ್ರ/ ವರದಿ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.