ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತುಬಾಕೆ
Team Udayavani, Jun 8, 2020, 6:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೂಡ್ಲಿಗಿ: ಪ್ರಕೃತಿ ನಮಗೆ ಎಲ್ಲವನ್ನು ನೀಡಿದೆ. ಅದನ್ನು ಸಂರಕ್ಷಿಸಿಕೊಂಡು ಹೋಗುವುದು ಮಾನವ ಧರ್ಮ ಎಂದು ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರಗೇಂದ್ರ ತುಬಾಕೆ ಹೇಳಿದರು.
ಅರಣ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಬಸವೇಶ್ವರ ನಗರದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರವನ್ನು ಉಳಿಸಿ, ಬೆಳೆಸುವುದು ಪ್ರತಿ ಮನುಷ್ಯನ ಕರ್ತವ್ಯ. ಪರಿಸರವು ಮಾನವನ ಏಳ್ಗೆಗೆ ಸಕರಾತ್ಮಕವಾಗಿ ಕೊಡುಗೆ ನೀಡಿದೆ ಎಂದರು. ತಹಶೀಲ್ದಾರ್ ಎಸ್. ಮಹಾಬಲೇಶ್ವರ ಮಾತನಾಡಿ, ಸಮಾಜದಲ್ಲಿ ಬದುಕುವ ಪ್ರತಿಯೊಬ್ಬ ವ್ಯಕ್ತಿ ತಮ್ಮ ತಮ್ಮ ಮನೆಗಳ ಮುಂದೆ ಸಸಿಯನ್ನು ನೆಟ್ಟು ಪೋಷಣೆ ಮಾಡಬೇಕು. ತನ್ನ ಉದ್ದಾರಕ್ಕಾಗಿ ಸಮತೋಲನವಾದ ಪರಿಸರ ಹುಡುಕುವತ್ತ ಮಾನವ ದಾಪುಗಾಲು ಹಾಕುತ್ತಿದ್ದಾನೆ. ಈಗಲಾದರೂ ಪರಿಸರದ ಕಾಳಜಿ ನಮ್ಮೆಲ್ಲರ ಹೊಣೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ನ್ಯಾಯಾಧಿಧೀಶರಾದ ಕೆ.ಎ. ನಾಗೇಶ, ಇ.ಒ. ಬಸಣ್ಣ, ವಲಯ ಅರಣ್ಯಾಧಿಕಾರಿ ರೇಣುಕ, ಪ.ಪಂ. ಮುಖ್ಯಾಧಿಕಾರಿ ಪಕೃದ್ದೀನ್ ಮತ್ತು ಕಿರಿಯ ಆರೋಗ್ಯ ನಿರೀಕ್ಷಕಿ ಲತಾ, ಶಾಸಕರ ಆಪ್ತ ಸಹಾಯಕ ಶ್ರೀಕಾಂತ ಮತ್ತು ಭೀಮಣ್ಣ ಗಜಾಪುರ, ಬಿ.ನಾಗರಾಜ, ಸೋಮಶೇಖರ್ ಆರಾಧ್ಯ, ಅಂಗಡಿ ವೀರೇಶ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.