ಸಾಂಕ್ರಾಮಿಕ ರೋಗಗಳ‌ ಬಗ್ಗೆಯೂ ಇರಲಿ ಕಟ್ಟೆಚ್ಚರ

ಕೋವಿಡ್-19  ಸೋಂಕಿಗೆ ಸೀಮಿತವಾಗದಿರಲಿ ಸಮರ

Team Udayavani, Jun 9, 2020, 5:14 AM IST

ಸಾಂಕ್ರಾಮಿಕ ರೋಗಗಳ‌ ಬಗ್ಗೆಯೂ ಇರಲಿ ಕಟ್ಟೆಚ್ಚರ

ಉಡುಪಿ: ಮಳೆಗಾಲ ಆರಂಭಗೊಂಡಿದೆ. ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾವಳಿ ಈ ಸಮಯದಲ್ಲಿ ಹೆಚ್ಚು ಕಾಡುತ್ತದೆ. ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದರಿಂದ ಈ ರೋಗದ‌ ಹಾವಳಿ ತಡೆಯಬಹುದು.ಜೂನ್‌ನಿಂದ ನವೆಂಬರ್‌ವರೆಗೆ ಮಲೇರಿಯಾ, ಡೆಂಗ್ಯೂ ಅತಿ ಹೆಚ್ಚು ಬಾಧಿ ಸುವ ಸಮಯವಾಗಿದೆ.

ಮುಂಜಾಗ್ರತೆ ಅಗತ್ಯ
ಮಳೆಗಾಲದಲ್ಲಿ ಹರಡುವ ಇತರ ಸಾಂಕ್ರಾಮಿಕ ರೋಗಗಳು ತಗಲದಂತೆ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅತ್ಯಗತ್ಯ.

ಪರಿಸರ ಸ್ವಚ್ಛವಾಗಿಟ್ಟು ಕೊಳ್ಳಿ
ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಲಿ, ಮುಚ್ಚಳವಿಲ್ಲದ ಒವರ್‌ಹೆಡ್‌, ಸಿಮೆಂಟ್‌ ಟ್ಯಾಂಕ್‌ಗಳು, ತೆಂಗಿನ ಚಿಪ್ಪು, ಕುಡಿದು ಬಿಸಾಡಿದ ಎಳನೀರು ಚಿಪ್ಪು, ಮನೆಯ ಸುತ್ತಮುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌ ಸಹಿತ ನೀರುನಿಲ್ಲುವ ಅವಕಾಶವಿರುವ ಎಲ್ಲ ಪರಿಕರ ಗಳು ಸೊಳ್ಳೆಗಳ ಉತ್ಪತ್ತಿ ತಾಣಗಳು. ಮನೆ, ಪರಿಸರದಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಾಗದಂತೆ ಎಚ್ಚರ ವಹಿಸುವುದು ಅಗತ್ಯ.

ವೈದ್ಯರ ಸಲಹೆ ಪಡೆಯಿರಿ
ಜ್ವರ ಯಾವುದೇ ಇರಲಿ. ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಖಾತ್ರಿ ಪಡಿಸಿಕೊಳ್ಳುವುದು ಒಳ್ಳೆಯದು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರಕಾರಿ ಆಸ್ಪತ್ರೆಗಳಲ್ಲಿ ರಕ್ತ ತಪಾಸಣೆಯನ್ನು ಮಾಡಿಸಿಕೊಳ್ಳಬಹುದು.

ಸೊಳ್ಳೆಗಳಿಂದ ರಕ್ಷಣೆ ಹೇಗೆ?
ಡೆಂಗ್ಯೂ ಹರಡುವ ಈಡಿಸ್‌ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಅನಾಫೆಲಿಸ್‌ ಸೊಳ್ಳೆ ರಾತ್ರಿ ಸಮಯದಲ್ಲಿ ಕಚ್ಚುತ್ತದೆ. ಹೀಗಾಗಿ ಸೊಳ್ಳೆಗ ಳಿಂದ ನಮ್ಮನ್ನು ರಕ್ಷಿಸಿ ಕೊಳ್ಳಲು ಕೆಲವು ಕ್ರಮ ಪಾಲಿಸು ವುದು ಅಗತ್ಯ. ಸಂಜೆ ಹೊತ್ತು ಕಿಟಿಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು, ಔಷಧ ಲೇಪನ ಮುಂತಾದ ಕ್ರಮಗಳನ್ನು ಅನುಸರಿಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು. ಮನೆಯ ಸುತ್ತ ಫಾಗಿಂಗ್‌ ಮಾಡಿಸುವುದು, ಸೊಳ್ಳೆ ನಿರೋಧಕ ಔಷಧ ಸಿಂಪಡಣೆ, ಸೊಳ್ಳೆ ಪರದೆಗಳ ಬಳಕೆ ಮಾಡುವುದು ಒಳಿತು.

ಇದನ್ನೆಲ್ಲ ಈಗಲೇ ಮಾಡಿ
ಓವರ್‌ಹೆಡ್‌ ಟ್ಯಾಂಕ್‌, ಸಿಮೆಂಟ್‌ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಿ. ಮನೆ ಸುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌, ತೆಂಗಿನ ಚಿಪ್ಪು ಗಳನ್ನು ತತ್‌ಕ್ಷಣ ವಿಲೇವಾರಿ ಮಾಡಿ, ಪಾತ್ರೆಗಳನ್ನು ಕವುಚಿ ಹಾಕಬೇಕು.ಮನೆ ಒಳಗೆ, ಹೊರಗೆ ಇರುವ ಹೂವಿನ ಕುಂಡ, ಮನಿಪ್ಲಾಂಟ್‌ ಚಟ್ಟಿಗಳು, ಏರ್‌ಕೂಲರ್‌ಗಳಲ್ಲೂ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಇವುಗಳ ನೀರನ್ನು ಪ್ರತಿ ವಾರ ಖಾಲಿ ಮಾಡುತ್ತಿರಬೇಕು.

ಮನೆ ಮನೆಗೆ ತೆರಳಿ ಜಾಗೃತಿ
ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಮಲೇರಿಯಾ ಸಹಿತ ಸಾಂಕ್ರಾಮಿಕ ರೋಗಗಳ ಬಗ್ಗೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಪ್ರಾ. ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು.
– ಡಾ| ಪ್ರಶಾಂತ್‌, ಜಿಲ್ಲಾ ಮಲೇರಿಯಾ ಅಧಿಕಾರಿ

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.