ಬಿಳಿಗಿರಿರಂಗನ ದರ್ಶನಕ್ಕೆ ಅವಕಾಶ ಇಲ್ಲ


Team Udayavani, Jun 9, 2020, 5:47 AM IST

biligiri

ಯಳಂದೂರು: ಸೋಮವಾರದಿಂದ ಬಹುತೇಕ ಎಲ್ಲಾ ದೇಗುಲ ಬಾಗಿಲು ತೆರೆದಿದ್ದರೂ ಬಿಳಿಗಿರಿರಂಗನಾಥಸ್ವಾಮಿ ದೇಗುಲ ಮಾತ್ರ ಬಾಗಿಲು ತೆರೆದಿಲ್ಲ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇಗುಲ ಬಾಗಿಲು ತೆರೆಯಲು  ಸೂಚನೆ ನೀಡಲಾಗಿದೆ. ಆದರೆ ಇಲ್ಲಿನ ಅರ್ಚಕರು ಹಾಗೂ ಸಿಬ್ಬಂದಿ ಬಾಗಿಲು ತೆರೆಯಲು ಹಿಂದೇಟು ಹಾಕಿದ್ದರಿಂದ ಸೋಮವಾರ ಎಂದಿನಂತೆ ನಿತ್ಯ ಪೂಜೆ ಮಾಡಿ ಬಾಗಿಲು ಬಂದ್‌ ಮಾಡಲಾಗಿದೆ.

ಕೋವಿಡ್‌ 19 ಭಯ: ರಾಜ್ಯದಲ್ಲಿ ಕೋವಿಡ್‌ 19 ಭೀತಿ ಇನ್ನೂ ಹೆಚ್ಚಾ ಗಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇಲ್ಲಿಗೆ ಬಸ್‌ಗಳ ನಿಷೇಧವೂ ಇತ್ತು. ಈಗ ಕೆಎಸ್‌ ಆರ್‌ಟಿಸಿ ಬಸ್‌ ಬಿಡಲಾಗಿದೆ. ಬಿಳಿಗಿರಿರಂಗನಾಥಸ್ವಾಮಿಗೆ ಬೇರೆ ರಾಜ್ಯ, ಜಿಲ್ಲೆಗಳ  ಭಕ್ತರೇ ಅಧಿಕವಾಗಿರುತ್ತಾ ರೆ. ಹಾಗಾಗಿ ಅವರಿಂದ ಸೋಂಕು ಹರಡುವ ಭಯವಿದೆ. ಅಲ್ಲದೆ ಇಲ್ಲಿ ಶೀತ ಹೆಚ್ಚಾಗಿರುತ್ತದೆ. ಸೂಕ್ತ ಜೀವರಕ್ಷಕ ಸಾಮಗ್ರಿಗಳೂ ಇಲ್ಲ.

ಚಿಕ್ಕ ದೇಗುಲವೂ ಅಪಾಯ: ದೇಗುಲದ ಜೀರ್ಣೋದ್ಧಾರ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ಬಾಲಾಲಯದಲ್ಲಿರುವ ಮೂರ್ತಿ ಸ್ಥಳವೂ ಚಿಕ್ಕದಾಗಿದೆ. ಇಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಸ್ಥಳ ಚಿಕ್ಕದಿರುವುದರಿಂದ ಭಕ್ತರ ನಿಯಂತ್ರಣವೂ ಕಷ್ಟವಾಗುತ್ತದೆ. ಜೊತೆಗೆ ತೀರ್ಥ, ಪ್ರಸಾದಗಳ ವಿತರಣೆ ನಿಷೇಧಿಸಲಾಗಿದೆ. ಇನ್ನೂ ಕೆಲ ದಿನ ಬಾಗಿಲು ತೆರೆಯದಿರಲು ಇಲ್ಲಿನ ಅರ್ಚಕರು ತೀರ್ಮಾನಿಸಿದ್ದಾರೆ.

ದೇಗುಲ ತರೆಯಲು ಸೂಚನೆ ಬಂದಿದೆ. ಪ್ರತಿನಿತ್ಯ ಪೂಜೆ ನಡೆಯುತ್ತಿದೆ. ಆದರೆ ಇದು ಶೀತ ಪ್ರದೇಶ. ನಮ್ಮ ದೇಗುಲಕ್ಕೆ ಹೊರ ರಾಜ್ಯ, ಜಿಲ್ಲೆ ಭಕ್ತರೇ ಹೆಚ್ಚಾಗಿದ್ದಾರೆ. ಸೋಂಕಿತರು ಇಲ್ಲಿಗೆ ಬಂದರೆ ಅಪಾಯ. ಹಾಗಾಗಿ ಅರ್ಚಕರು, ನೌಕರರು  ಇನ್ನಷ್ಟು ದಿನ ದೇಗುಲ ಬಾಗಿಲು ತೆರೆಯದಂತೆ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. 
-ವೆಂಕಟೇಶ್‌ಪ್ರಸಾದ್‌, ಇಒ, ಬಿಳಿಗಿರಿ ರಂಗನಾಥಸ್ವಾಮಿ ದೇಗುಲ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.