ವಿದ್ಯಾರ್ಥಿಗಳಿಗೆ ಮಾಸ್ಕ್-ಸ್ಯಾನಿಟೈಸರ್‌ ಕಡ್ಡಾಯ

Team Udayavani, Jun 9, 2020, 10:11 AM IST

ವಿದ್ಯಾರ್ಥಿಗಳಿಗೆ ಮಾಸ್ಕ್-ಸ್ಯಾನಿಟೈಸರ್‌ ಕಡ್ಡಾಯ

ಗುಳೇದಗುಡ್ಡ: ಪರೀಕ್ಷೆಗೆ ಹಾಜರಾಗುವಾಗ ಎಲ್ಲ ವಿದ್ಯಾರ್ಥಿಗಳು ಪ್ರವೇಶದ್ವಾರದಲ್ಲಿ ಸಿದ್ಧಪಡಿಸುವ ಬಾಕ್ಸ್‌ ಮೂಲಕ ಬರಬೇಕು. ಇಲಾಖೆ ಒದಗಿಸುವ ಥರ್ಮಲ್‌ ಸ್ಕ್ಯಾನಿಂಗ್‌ ಒಳಗಾಗಿ, ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಹುರಳಿ ಹೇಳಿದರು.

ಪಟ್ಟಣದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ತಿಳಿಸಬೇಕು. ಎಲ್ಲ ವಿದ್ಯಾರ್ಥಿಗಳು ಪರೀಕ್ಷಾ ಸಾಮಗ್ರಿ ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ತರಬೇಕು ಎಂದು ಹೇಳಿದರು.

ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಬೆ. 9:00ಗಂಟೆ ಒಳಗಾಗಿ ಹಾಜರಿದ್ದು, ಕಡ್ಡಾಯವಾಗಿ ಸ್ಕ್ರೀನಿಂಗ್‌ ಒಳಪಟ್ಟು ಪರೀಕ್ಷೆ ಬರೆಯಲು ಅಣಿಯಾಗಬೇಕು. ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿಗೆ 3 ಅಡಿಗಳ ಅಂತರದಲ್ಲಿ ಆಸನಗಳ ವ್ಯವಸ್ಥೆಗೊಳಿಸಬೇಕು. ಪರೀಕ್ಷೆ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್‌ ಮತ್ತು ಮಾಸ್ಕ್ ಧರಿಸಬೇಕು. ಎಸ್‌ಒಪಿ ಅನುಸಾರವಾಗಿ ಪರೀಕ್ಷಾ ಕಾರ್ಯ ಕಟ್ಟು ನಿಟ್ಟಾಗಿ ನಡೆಸಲು ಬಿಇಒ ರುದ್ರಪ್ಪ ಹುರಳಿ ಸೂಚಿಸಿದರು.

ಅಗತ್ಯ ಬಿದ್ದಲ್ಲಿ ಎರಡು ಕಾಯ್ದಿರಿಸಿದ ಕೊಠಡಿಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಷ್ಟೇ ಅಲ್ಲದೇ ಪರೀಕ್ಷೆ ಸಮಯದಲ್ಲಿ ತೊಂದರೆಗಳಾದರೆ ಮುನ್ನೆಚ್ಚರಿಕೆ ಕ್ರಮವಾಗಿ ಸರಸ್ವತಿ ವಿದ್ಯಾ ಮಂದಿರವನ್ನು ಹೆಚ್ಚುವರಿ ಕೇಂದ್ರವನ್ನಾಗಿ ಕಾಯ್ದಿರಿಸಲಾಗಿದೆ ಎಂದು ಬಿಇಒ ರುದ್ರಪ್ಪ ಹುರಳಿ ಹೇಳಿದರು. 98 ಶಿಕ್ಷಕರು ಸಭೆಯಲ್ಲಿ ಹಾಜರಿದ್ದರು. ಹನುಮಂತರಾಜು, ದೈಹಿಕ ಶಿಕ್ಷಣಾ ಧಿಕಾರಿ ವಿವೇಕಾನಂದ ಮೇಟಿ ಪರೀಕ್ಷಾ ಸಿದ್ದತೆ ಬಗ್ಗೆ ವಿವರಿಸಿದರು.

ಉಪಪ್ರಾಚಾರ್ಯ ಎಂ.ಎಂ. ಚಲವಾದಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ ಪಟ್ಟಣಶೆಟ್ಟಿ, ಬಾಲಕರ ಪ್ರೌಢಶಾಲೆ ಉಪಪ್ರಾಚಾರ್ಯ ರಾಜು ಪಾಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.