ತುಳಸಿಗೇರಿ ಹನಮಂತದೇವರ ದರ್ಶನ
Team Udayavani, Jun 9, 2020, 10:23 AM IST
ಕಲಾದಗಿ: ಕೋವಿಡ್-19 ಹರಡುವಿಕೆ ತಡೆಗಟ್ಟಲು ಲಾಕ್ ಡೌನ್ ಹಾಗೂ ಸರಕಾರದ ಆದೇಶದಂತೆ ಕಳೆದ 81 ದಿನದಿಂದ ಭಕ್ತರ ದರ್ಶನಕ್ಕೆ ಬಂದ್ ಆಗಿದ್ದ ತುಳಸಿಗೇರಿ ಶ್ರೀ ಮಾರುತೇಶ್ವರ ದೇವಾಲಯ ಸೋಮವಾರ ಬೆಳಗ್ಗೆಯಿಂದ ಸಾರ್ವಜನಿಕ ಭಕ್ತರ ದರ್ಶನಕ್ಕೆ ಬಾಗಿಲು ತೆರೆದಿದ್ದು ನೂರಾರು ಭಕ್ತರು ದೇವರ ದರ್ಶನ ಪಡೆದರು.
ಭಕ್ತ ಗಣಕ್ಕೆ ದೇವರ ದರ್ಶನಕ್ಕೆ ತಾಲೂಕಾಡಳಿತ ಸರ್ವ ಸಿದ್ಧತೆಯನ್ನು ಮಾಡಿಕೊಂಡು ದರ್ಶನ ಭಾಗ್ಯ ಕಲ್ಪಿಸಿದಕ್ಕೆ ಭಕ್ತ ಸಮುದಾಯ ಸಂತಸ ವ್ಯಕ್ತ ಪಡಿಸಿದೆ. ಕಂದಾಯ ಇಲಾಖೆ ಸಿಬ್ಬಂದಿ ಭಕ್ತರಿಗೆ ಸ್ಯಾನಿಟೈಸರ್‌ಹಾಕಿ, ಸರಿಯಾಗಿ ಮಾಸ್ಕ್ ಧರಿಸಲು ಹೇಳಿ, ಥರ್ಮಲ್ ಸ್ಕ್ರೀನಿಂಗ್ ಹಾಗೂ ಹೆಸರು, ಮೊಬೈಲ್ ನಂಬರ್ ನೋಂದಣಿ ಮಾಡಿಕೊಂಡು ಒಳ ಪ್ರವೇಶಿಸಲು ಅನುಮತಿ ನೀಡಿದರು. ವೃತ್ತಾಕಾರದಲ್ಲಿಯೇ ಸರದಿ ಸಾಲಿನಲ್ಲಿ ಮುಂದೆ ಸಾಗಿ ದೇವರ ದರ್ಶನ ಪಡೆದು ಬರಲು ಸೂಚನೆಗಳನ್ನು ನೀಡಿದರು. ಭಕ್ತರು ಮಾರ್ಗಸೂಚಿ ಪಾಲನೆ ಮಾಡುತ್ತಾ ದೇವರ ದರ್ಶನ ಪಡೆದರು, ಬೆಳಿಗ್ಗೆ 7ರಿಂದ ಸಂಜೆ 7ರವರೆಗೂ 459 ಜನ ಭಕ್ತರು ಹನಮಪ್ಪನ ದರ್ಶನ ಪಡೆದಿದ್ದಾರೆ ಎಂದು ಕಂದಾಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಬೆಳಗ್ಗೆ ದೇವಾಲಯಕ್ಕೆ ಭೇಟಿ ನೀಡಿದ ಉಪತಹಶೀಲ್ದಾರ್ ಪಿ.ಬಿ.ಸಿಂಗ್ರಿ ಮತ್ತು ಕಂದಾಯ ನಿರೀಕ್ಷಕ ಆರ್.ಆರ್.ಕುಲಕರ್ಣಿ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂದಾಯ ಇಲಾಖೆ ಸಿಬ್ಬಂದಿಗೆ ಕೆಲವು ಅಗತ್ಯ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.