ಪಿಲಿಕುಳ: ನಾಳೆಯಿಂದ ಪ್ರವಾಸಿಗರಿಗೆ ಅವಕಾಶ
Team Udayavani, Jun 9, 2020, 9:13 AM IST
ಮಂಗಳೂರು: ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಮೂರು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಪಿಲಿಕುಳದ ಡಾ| ಶಿವರಾಮ ಕಾರಂತ ನಿಸರ್ಗಧಾಮವನ್ನು ಜೂ. 10ರಿಂದ ಪ್ರವಾಸಿಗರಿಗೆ ಮುಕ್ತಗೊಳಿಸಲಾಗುವುದು.
ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪಿಲಿಕುಳದ ಜೈವಿಕ ಉದ್ಯಾನ, ಲೇಕ್ ಗಾರ್ಡನ್, ಸಂಸ್ಕೃತಿ ಗ್ರಾಮ, ಆಬೋìರೇಟಮ್ ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸಾರ್ವಜನಿಕ ಪ್ರವೇಶ ಸದ್ಯಕ್ಕಿಲ್ಲ.
ಪ್ರವಾಸಿಗರ ಗಮನಕ್ಕೆ
ಸಾರ್ವಜನಿಕರು ನಿಸರ್ಗಧಾಮದ ಆಕರ್ಷಣೆ ಗಳನ್ನು ವೀಕ್ಷಿಸುವಾಗ ಕನಿಷ್ಠ 6 ಅಡಿ ಭೌತಿಕ ಅಂತರ ವನ್ನು ಕಾಯ್ದುಕೊಳ್ಳಬೇಕು. ಮುಖಗವಸು (ಮಾಸ್ಕ್) ಧಾರಣೆ ಕಡ್ಡಾಯ. ಎಲ್ಲರನ್ನೂ ಥರ್ಮಲ್ ಸ್ಕ್ರೀನಿಂಗ್ ಮೂಲಕ ತಪಾಸಣೆ ಮಾಡಲಾಗುವುದು. ದೇಹದ ಉಷ್ಣತೆ ಮಿತಿಗಿಂತ ಹೆಚ್ಚಿದ್ದರೆ, ಜ್ವರ, ಕೆಮ್ಮು, ಶೀತ, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ಅಂತಹ ವ್ಯಕ್ತಿಗಳಿಗೆ ಪ್ರವೇಶ ನಿರಾಕರಿಸಲಾಗುವುದು. ಕೊಳದಲ್ಲಿ ಮಕ್ಕಳ ಆಟಕ್ಕೆ ಅವಕಾಶವಿಲ್ಲ ಎಂದು ಪಿಲಿಕುಳದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.