ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ನೂಕುನುಗ್ಗಲು

ಚಾಲನಾ ಪರವಾನಗಿ-ವಾಹನ ಪಾಸಿಂಗ್‌-ರಿನಿವಲ್‌ಗೆ ಓಡಾಟ

Team Udayavani, Jun 9, 2020, 10:35 AM IST

ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ನೂಕುನುಗ್ಗಲು

ಬಾಗಲಕೋಟೆ: ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಜನಜಂಗುಳಿಯೇ ಏರ್ಪಟ್ಟಿದೆ. ಕೋವಿಡ್ ಭೀತಿಯ ಮಧ್ಯೆಯೂ ಜನರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಇಲ್ಲದೇ ತಮ್ಮ ಕೆಲಸಕ್ಕಾಗಿ ಕಚೇರಿಗೆ ಧಾವಿಸುತ್ತಿದ್ದಾರೆ.

ಹೌದು, ನವನಗರದ ಆರ್‌ಟಿಒ ಕಚೇರಿಯಲ್ಲಿ ಸೋಮವಾರ ಜನಜಾತ್ರೆಯೇ ಕಂಡುಬಂತು. ಬಾಗಲಕೋಟೆ, ಬಾದಾಮಿ ಹಾಗೂ ಹುನಗುಂದ, ಇಳಕಲ್ಲ ತಾಲೂಕು ವ್ಯಾಪ್ತಿಯ ಜನರು, ಕಚೇರಿಗೆ ಧಾವಿಸಿ, ತಮ್ಮ ವಾಹನ-ಕೆಲಸ ಕಾರ್ಯಗಳಿಗಾಗಿ ದುಂಬಾಲು ಬಿದ್ದಿದ್ದರು.

ಮರೆತ ಸಾಮಾಜಿಕ ಅಂತರ: ಆರ್‌ಟಿಒ ಕಚೇರಿಯಲ್ಲಿ ಸಾಮಾಜಿಕ ಅಂತರ ಎಂಬುದೇ ಮರೆತು ಹೋಗಿದೆ. ಎಲ್‌ಎಲ್‌ಆರ್‌, ಡಿಎಲ್‌, ವಾಹನ ಪಾಸಿಂಗ್‌ ರಿನಿವಲ್‌, ಹೊಸ ವಾಹನ ನೋಂದಣಿ ಹೀಗೆ ವಿವಿಧ ಕೆಲಸಕ್ಕಾಗಿ ಜನರು ಬರುತ್ತಿದ್ದು, ಸರತಿ ಸಾಲಿನಲ್ಲಿ ನಿಲ್ಲುವ ಜನರು ಸಾಮಾಜಿಕ ಅಂತರ ಮೆರೆತಿದ್ದರು. ಇನ್ನೂ ಕೆಲವರು ಮಾಸ್ಕ್ ಕೂಡ ಧರಿಸದೇ ಸಾಲಿನಲ್ಲಿ ನಿಂತಿದ್ದರೆ, ಕೆಲವರು ಕರವಸ್ತ್ರವನ್ನೇ ಮಾಸ್ಕ್ ಅನ್ನಾಗಿ ಮಾಡಿಕೊಂಡಿದ್ದರು.

ಆರ್‌ಟಿಒ ಕಚೇರಿಯಲ್ಲಿನ ಈ ಜನಜಂಗುಳಿ ಕಂಡು, ಹಲವರು ಮರಳಿ ಮನೆಗೆ ಹೋಗುತ್ತಿರುವುದು ಕಂಡು ಬಂತು. ಮೊದಲೇ ಎಲ್ಲೆಡೆ ಕೋವಿಡ್ ಹಬ್ಬುತ್ತಿದೆ. ಆರ್‌ಟಿಒ ಕಚೇರಿಯಲ್ಲಿ ಯಾರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಸಾವಧಾನದಿಂದ ವರ್ತಿಸುತ್ತಿಲ್ಲ. ಜನಜಂಗುಳಿ ಕಂಡು, ಕಚೇರಿಯ ಸಿಬ್ಬಂದಿಗೂ ಭೀತಿ ಶುರುವಾಗಿದೆ. ದೂರ ದೂರ ನಿಲ್ಲಿ ಎಂದು ಎಷ್ಟೇ ಸೂಚಿಸಿದರೂ ಯಾರೂ ಕೇಳುತ್ತಿಲ್ಲ. ಇನ್ನು ಇಡೀ ಕಚೇರಿಯ ಮುಖ್ಯಸ್ಥರಾಗಿರುವ ಆರ್‌ಟಿಒ ಕೂಡ, ಇದನ್ನು ನಿಯಂತ್ರಿಸಲು ಪ್ರಯಾಸವೇ ಪಡುತ್ತಿದ್ದಾರೆ ಎನ್ನಲಾಗಿದೆ.

ನೇರವಾಗಿ ಕಚೇರಿಗೆ ಬಂದರೆ ಕೆಲಸಗಳು ನಿಧಾನವಾಗುತ್ತವೆ ಎಂಬ ಕಾರಣಕ್ಕೆ, ಜನರೂ ಏಜೆಂಟರ ಮೂಲಕವೇ ತಮ್ಮ ಕೆಲಸಕ್ಕೆ ಮುಂದಾಗುತ್ತಿದ್ದಾರೆ. ಆದರೂ, ಆರ್‌ಟಿಒ ಕಚೇರಿಯಲ್ಲಿ ಮೊದಲಿನ ಪರಿಸ್ಥಿತಿ ಸಧ್ಯಕ್ಕಿಲ್ಲ. ಕೊಂಚ ಸುಧಾರಣೆಯಾಗಿದೆ ಎಂದು ಕೆಲವರು ಹೇಳುತ್ತಾರೆ. ಕಳೆದ ಮೂರು ತಿಂಗಳಿಂದ ಕಚೇರಿಯ ಎಲ್ಲ ಲಾಕಿಂಗ್‌ ಸಿಸ್ಟಮ್‌ ಬಂದ್‌ ಇದ್ದವು. ಈಗ ಓಪನ್‌ ಆಗಿದ್ದು, ವಾಹನ ಚಾಲನಾ ಪರವಾನಗಿ, ರಿನಿವಲ್‌ಗಾಗಿ ಜನರು ಮುಗಿಬಿದ್ದಿದ್ದಾರೆ. ಜನರೂ, ಸಹಕಾರ ನೀಡಿ, ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.

ಏಜೆಂಟರ ಹಾವಳಿಯೂ ಜೋರು :  ಆರ್‌ಟಿಒ ಕಚೇರಿಯಲ್ಲಿ ಏಜೆಂಟರ ಹಾವಳಿಯೂ ಜೋರಾಗಿದೆ. ಜನರು ನೇರವಾಗಿ ಕಚೇರಿಗೆ ಬಂದು ತಮ್ಮ ಕೆಲಸ ಮಾಡಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂಬಂತಹ ಪರಿಸ್ಥಿತಿ ಇದೆ. ಕಚೇರಿಯ ಸಿಬ್ಬಂದಿಗಿಂತ, ಏಜಂಟರೇ ಎಲ್ಲ ವಿಭಾಗದಲ್ಲಿ ತಿರುಗಾಡಿ, ಕೆಲಸ ಮಾಡುತ್ತಾರೆ. ಏಜಂಟ್‌ರೆಂದರೆ ಅಧಿಕಾರಿಗಳೂ ಅತಿಬೇಗ ಕೆಲಸ ಮಾಡುತ್ತಾರೆ ಎಂಬ ಆರೋಪವಿದೆ.

ಕಳೆದ ಎರಡೂವರೆ ತಿಂಗಳಿಂದ ವಾಹನ ಚಾಲನೆ ಪರವಾನಿಗೆ, ರಿನಿವಲ್‌, ಪಾಸಿಂಗ್‌ ಎಲ್ಲವೂ ಸ್ಥಗಿತಗೊಂಡಿದ್ದವು. ಈಗ ಓಪನ್‌ ಆಗಿದ್ದು, ಜನರು ಒಮ್ಮೆಲೇ ಕಚೇರಿಗೆ ಬಂದಿದ್ದಾರೆ. ಕಚೇರಿಯಲ್ಲಿ ಸ್ಯಾನಿಟೈಜೇಶನ್‌ ಮಾಡಿದ್ದು, ಜನರು ಸರತಿ ಸಾಲಿನಲ್ಲಿ ನಿಲ್ಲಲು ಮಾರ್ಕಿಂಗ್‌ ಕೂಡ ಮಾಡಿದ್ದೇವೆ. ಕೆಲವರು ಧಾವಂತದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಕಂಡು ಬಂದಿದೆ. ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. ಜನರು ಸ್ವಯಂ ಪ್ರೇರಣೆಯಿಂದ ಕೋವಿಡ್ ಕುರಿತು ಜಾಗೃತಿ ವಹಿಸಬೇಕು. ಯಲ್ಲಪ್ಪ ಪಡಸಾಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿ

 

-ವಿಶೇಷ ವರದಿ

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.