ಮುಂಬೈ ನಿವಾಸಿಗೆ ಚಾಮರಾಜನಗರದಲ್ಲಿ ಕೋವಿಡ್‍ ದೃಢ: ಹಸಿರು ವಲಯದಲ್ಲಿ ಮುಂದುವರಿದ ಜಿಲ್ಲೆ


Team Udayavani, Jun 9, 2020, 12:29 PM IST

ಮುಂಬೈ ನಿವಾಸಿಗೆ ಚಾಮರಾಜನಗರದಲ್ಲಿ ಕೋವಿಡ್‍ ದೃಢ: ಹಸಿರು ವಲಯದಲ್ಲಿ ಮುಂದುವರಿದ ಜಿಲ್ಲೆ

ಚಾಮರಾಜನಗರ: ಮಹಾರಾಷ್ಟ್ರದ ಮುಂಬೈಯ ನಿವಾಸಿಯಾದ ವೈದ್ಯಕೀಯ ವಿದ್ಯಾರ್ಥಿಯೋರ್ವ ಜಿಲ್ಲೆಗೆ ಬಂದಿದ್ದು, ಆತನಿಗೆ ಕೋವಿಡ್‍19 ಪಾಸಿಟಿವ್‍ ದೃಢಪಟ್ಟಿದೆ. ಆದರೆ ಆತ ಮುಂಬೈ ನಿವಾಸಿಯಾದ್ದರಿಂದ ಜಿಲ್ಲೆಯವನು ಎಂದು ಪರಿಗಣಿಸಲಾಗುವುದಿಲ್ಲ. ರಾಜ್ಯದಲ್ಲಿರುವ ಜಿಲ್ಲಾವಾರು ಕೋವಿಡ್‍ ಪ್ರಕರಣಗಳ ಪಟ್ಟಿಯಲ್ಲಿ ಇದು ‘ಇತರೆ’ ವರ್ಗಕ್ಕೆ ಸೇರುತ್ತದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಈಗಲೂ ಹಸಿರು ವಲಯವಾಗಿಯೇ ಉಳಿದಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‍. ರವಿ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮಾಹಿತಿಯನ್ನು ನೀಡಿದರು.

ಮಹಾರಾಷ್ಟ್ರದಲ್ಲಿ ಕೋವಿಡ್‍ ಪ್ರಕರಣ ಹೆಚ್ಚಿರುವುದರಿಂದ, ಜಿಲ್ಲೆಯ ಮಾರ್ಟಳ್ಳಿಯ ಪಾಲಿಮೇಡು ಗ್ರಾಮಕ್ಕೆ ಈ ವೈದ್ಯಕೀಯ ವಿದ್ಯಾರ್ಥಿ ಬಂದಿದ್ದ.

ಮುಂಬೈನಿಂದ ಬೆಂಗಳೂರು ಮಾರ್ಗವಾಗಿ ಹೊರಟು ಶುಕ್ರವಾರ ರಾತ್ರಿ ಮಾರ್ಟಳ್ಳಿಯ ಪಾಲಿಮೇಡು ಗ್ರಾಮಕ್ಕೆ ತಾಯಿ ಮತ್ತು ಇಬ್ಬರು ಗಂಡು  ಮಕ್ಕಳು ಬಂದಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಮುಂಬೈಯಲ್ಲಿ, ಇವರು ನಮ್ಮ ಜಿಲ್ಲೆಯವರಲ್ಲ. ಮುಂಬೈಯ ಆಧಾರ್‍ ಕೂಡ  ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇವರು ಜಿಲ್ಲೆಗೆ ಬರುವಾಗ ಸರ್ಕಾರದ ನಿಯಮದ ಪ್ರಕಾರ ಸೇವಾ ಸಿಂಧುವಿನಲ್ಲಿ ರಿಜಿಸ್ಟರ್‍ ಮಾಡಿಕೊಳ್ಳಬೇಕು. ಹಾಗೆ ಮಾಡದೇ ರೈಲಿನಲ್ಲಿ ಬಂದಿದ್ದಾರೆ. ರೈಲ್ವೆಯಿಂದಲೂ ಜಿಲ್ಲೆಗೆ ಮಾಹಿತಿ ನೀಡಿಲ್ಲ.

ಯುವಕನ ಸೋದರ ಮಾವ ಮೂವರನ್ನೂ ಬೆಂಗಳೂರಿನಿಂದ ಶುಕ್ರವಾರ ಕರೆತಂದಿದ್ದಾರೆ. ಯುವಕನ ತಾಯಿಯ ಮನೆ ಪಾಲಿಮೇಡುನಲ್ಲಿದ್ದು ಶುಕ್ರವಾರ ರಾತ್ರಿ ಇದ್ದು, ಶನಿವಾರ ಕೊಳ್ಳೇಗಾಲದ ಫೀವರ್ ಕ್ಲಿನಿಕ್‍ ನಲ್ಲಿ ಪರೀಕ್ಷಿಸಿ ನಂತರ ಹನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿದೆ.

ಕೋವಿಡ್‍ ಪರೀಕ್ಷೆಯಲ್ಲಿ ತಾಯಿ ಮತ್ತು ಹಿರಿಯ ಮಗನಿಗೆ ನೆಗೆಟಿವ್‍ ಫಲಿತಾಂಶ ಬಂದಿದ್ದು, 22 ವರ್ಷದ ಕಿರಿಯ ಪುತ್ರನಿಗೆ ಪಾಸಿಟಿವ್‍ ದೃಢಪಟ್ಟಿದೆ. ಈತನಿಗೆ ಪ್ರಸ್ತುತ ಚಾಮರಾಜನಗರದ ಕೋವಿಡ್‍ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಆರಾಮದಿಂದ ಇದ್ದಾನೆ ಎಂದು ಡಿಸಿ ತಿಳಿಸಿದರು.

ಯುವಕನ ತಾಯಿ, ತಮ್ಮ, ಮತ್ತು ಮಾವ ಪ್ರಾಥಮಿಕ ಸಂಪರ್ಕ ಹೊಂದಿದ್ದು   ಇವರನ್ನು ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದೆ. ಮಾವನ ಕುಟುಂಬದವರು ದ್ವಿತೀಯ ಸಂಪರ್ಕದವರಾಗಿದ್ದು ಅವರನ್ನು ಸಹ ಕ್ವಾರಂಟೈನ್‍ ನಲ್ಲಿರಿಸಲಾಗಿದೆ ಎಂದರು.

ಚಾಮರಾಜನಗರ ಈಗಲೂ ಹಸಿರು ವಲಯ: ಬೇರೆ ರಾಜ್ಯದಿಂದ ಮತ್ತು ಹೊರ ದೇಶದಿಂದ ಬಂದವರು ಆ ಜಿಲ್ಲೆಗೆ ಸೇರಿದವರು ಎಂದು ಪರಿಗಣಿಸಲಾಗುವುದಿಲ್ಲ. ತಾಯಿಯನ್ನು ಬಿಟ್ಟು ಹೋಗಲು ಬಂದಾಗ ಈ ರೀತಿಯಾಗಿದೆ. ಈ ಪ್ರಕರಣ ರಾಜ್ಯದ ಪಟ್ಟಿಯಲ್ಲಿ ಚಾಮರಾಜನಗರ ಜಿಲ್ಲೆಗೆ ಸೇರುವುದಿಲ್ಲ ಇತರ ವಿಭಾಗಕ್ಕೆ ಸೇರುತ್ತದೆ ಎಂದು ಡಾ. ರವಿ ಸ್ಪಷ್ಟಪಡಿಸಿದರು.

ನಮ್ಮ ಜಿಲ್ಲೆಯ ಯಾರಿಗೂ ಸೋಂಕು ತಗುಲಿಲ್ಲ. ಈ ರೀತಿಯ ಗಂಡಾಂತರ ಎದುರಿಸುತ್ತಲೇ ಬಂದಿದ್ದೇವೆ. ಈಗಲೂ ನಮ್ಮ ಜಿಲ್ಲೆ ಹಸಿರಾಗಿಯೇ ಉಳಿದಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಅಂತಾರಾಜ್ಯದಿಂದ ಬರುವವರು ಸೇವಾಸಿಂಧು ರಿಜಿಸ್ಟರ್‍ ಮಾಡಬೇಕು. ಇವರು ರಿಜಿಸ್ಟರ್‍ ಮಾಡಿಸದೇ ಬಂದದ್ದರಿಂದ ಈ ಅಚಾತುರ್ಯ ನಡೆದಿದೆ. ಜಿಲ್ಲೆಯಲ್ಲಿ 70 ಜನ ಕ್ವಾರಂಟೈನ್‍ ನಲ್ಲಿದ್ದಾರೆ. ಇದರಲ್ಲಿ ಮಹಾರಾಷ್ಟ್ರ, ತಮಿಳುನಾಡಿನವರಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.