ನೆರೆ ರಾಜ್ಯದ ಡ್ಯಾಂಗಳಿಗೆ ನೀರು: ವಿವರ ಕೇಳಿದ ಹೈಕೋರ್ಟ್
Team Udayavani, Jun 10, 2020, 5:49 AM IST
ಬೆಂಗಳೂರು: ಮಳೆಗಾಲ ಅಥವಾ ಪ್ರವಾಹದ ವೇಳೆ ಒಂದು ರಾಜ್ಯದ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ನೆರೆ ರಾಜ್ಯದ ಜಲಾಶಯಗಳಿಗೆ ಹರಿಸುವಾಗ ನೀರು ಹರಿದು ಹೋಗುವ ರಾಜ್ಯಗಳಿಗೆ ಕಡ್ಡಾಯವಾಗಿ ಮೊದಲೇ ಮಾಹಿತಿ ನೀಡುವ ವ್ಯವಸ್ಥೆ ಇದೆಯೇ ಎಂಬ ಬಗ್ಗೆ ವಿವರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಚೇಳೂರಿನ ಎ. ಮಲ್ಲಿಕಾರ್ಜುನ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ. ಇ.ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ, ರಾಜ್ಯಗಳು ಪ್ರವಾಹ ಎದುರಿಸಲು ಸಿದತೆಗಳನ್ನು ಮಾಡಿಕೊಳ್ಳ ಬೇಕೆಂದರೆ ಆ ರಾಜ್ಯಗಳಿಗೆ ಮೊದಲೇ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡುತ್ತಿರುವ ಬಗ್ಗೆ ಮಾಹಿತಿ ನೀಡಬೇಕಾಗುತ್ತದೆ.
ಸದ್ಯ ಅಂತಹ ವ್ಯವಸ್ಥೆ ಇದೆಯೇ ಎಂದು ಕೇಳಿದ ನ್ಯಾಯಪೀಠ, ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು. ಅಲ್ಲದೇ, ಅರ್ಜಿ ಸಂಬಂಧ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ, ಜಲ ಶಕ್ತಿ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.