ವಾಲ್ಮೀಕಿ ಭವನಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿ
Team Udayavani, Jun 10, 2020, 6:38 AM IST
ಹಿರೇಕೆರೂರ: ಇಲ್ಲಿನ ವಾಲ್ಮೀಕಿ ಭವನದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಅವರನ್ನು ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು.
ಸಾನ್ನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಪಟ್ಟಣದಲ್ಲಿ ವಾಲ್ಮೀಕಿ ಭವನ ಕಟ್ಟಡ ಮೊದಲ ಹಂತದ ರೂ 1 ಕೋಟಿ ವೆಚ್ಚದಲ್ಲಿ ಕಾಮಗಾರಿ ಮುಗಿದಿದ್ದು, ಈಗ ಮತ್ತೆ ರೂ. 1 ಕೋಟಿ ಮಂಜೂರಾಗಿದೆ. ಇದಕ್ಕೆ ಇನ್ನೂ ರೂ. 1.50 ಕೋಟಿ ಹೆಚ್ಚಿನ ಅನುದಾನ ನೀಡಿ ರೂ. 3.50 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲಿಯೇ ಮಾದರಿ ವಾಲ್ಮೀಕಿ ಭವನ ನಿರ್ಮಿಸಲು ಸಂಬಂಧಪಟ್ಟ ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಇದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಸಹಮತ ಸೂಚಿಸಿದ್ದಾರೆ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಜಿ.ಎಚ್. ತಳವಾರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಎನ್.ಎಂ. ಈಟೇರ, ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ವೈ.ಪಿ. ಜಿಗಳೂರ, ಕಾರ್ಯದರ್ಶಿ ಪಿ.ಎಸ್. ಸಾಲಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಹುಲ್ಯಾಳ, ರಟ್ಟಿàಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ತಳವಾರ, ಲಕ್ಷ್ಮಣ ನಾಯ್ಕರ್, ಹನುಮಂತಪ್ಪ ಮೇಗಳಮನಿ, ಆರ್.ಎಫ್.ಹುಲ್ಲತ್ತಿ, ರಮೇಶ ಚಿಕ್ಕೇರೂರ, ಲಿಂಗರಾಜ ನಾಯ್ಕರ್ ಜಿ.ಎಚ್.ಅಗಸಿಬಾಗಿಲ, ಐ.ಬಿ. ಕಡೇಮನಿ, ಜಿ.ಕೆ. ಸುಳಗನ್ನಿ, ಜಗದೀಶ ಗೋಣಗೇರಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.