ಕೋವಿಡ್‌-19 ನಿಯಂತ್ರಣದಲ್ಲಿ ಕೊಡಗು ಮಾದರಿ: ಶ್ರೀರಾಮುಲು

 ಮಡಿಕೇರಿ: ಕೋವಿಡ್‌ 19 ತಡೆ ಚಟುವಟಿಕೆ ಪರಿಶೀಲನೆ ಸಭೆ

Team Udayavani, Jun 11, 2020, 5:01 AM IST

ಕೋವಿಡ್‌-19 ನಿಯಂತ್ರಣದಲ್ಲಿ ಕೊಡಗು ಮಾದರಿ: ಶ್ರೀರಾಮುಲು

ಮಡಿಕೇರಿ: ಕೋವಿಡ್‌ 19 ಸೋಂಕು ವ್ಯಾಪಿಸದಂತೆ ಪರಿಣಾ ಮಕಾರಿ ಕ್ರಮಗಳನ್ನು ಕೈಗೊಂಡು ಯಶಸ್ವಿ ಯಾಗಿರುವ ಕೊಡಗು ಇತರ ಜಿಲ್ಲೆಗಳಿಗೆ ಮಾದರಿ. ಉಳಿದ ಜಿಲ್ಲೆಗಳಲ್ಲೂ ಇದೇ ಮಾದರಿಯ ಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಕೋವಿಡ್‌ 19ತಡೆ ಚvಟುವಟಿಕೆ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, ಇಡೀ ರಾಜ್ಯದಲ್ಲಿ ಕೊರೊನಾ ಸಾಕಷ್ಟು ಸಂಕಷ್ಟಗಳನ್ನು ತಂದೊಡ್ಡಿದೆ. ಇತರ ಜಿಲ್ಲೆಗಳಲ್ಲಿ ಕೋವಿಡ್‌ 19 ಪ್ರಕರಣ ಗಳು ಹೆಚ್ಚುತ್ತಿರುವುದರ ನಡುವೆಯೂ ಕೊಡಗು ಕೋವಿಡ್‌ 19 ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಯಶಸ್ವಿ ಯಾಗಿದೆ ಎಂದರು.

ರಾಜ್ಯದಲ್ಲಿ 5,760 ಕೋವಿಡ್‌ ಪ್ರಕರಣಗಳಲ್ಲಿ 2,514 ಮಂದಿ ಗುಣ ಮುಖರಾಗಿದ್ದಾರೆ. ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರ ದಿಂದ ಬರುವವರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗುವುದು. ಮನೆಗೆ ಆಹಾರ, ತರಕಾರಿ ಪೂರೈಕೆ ಮಾಡಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆಗಳನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮಕೈಗೊಂಡಿದ್ದು, ತಜ್ಞ ವೈದ್ಯರು, ಪ್ರಯೋಗಾಲಯ ತಜ್ಞರನ್ನು ನೇಮಕ ಮಾಡಲಾಗುವುದು ಎಂದರು.

ಪರೀಕ್ಷೆಗಳಿಲ್ಲದೆ
ಹೆರಿಗೆ ಮಾಡಿಸಿ
ಕೋವಿಡ್‌ 19 ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರ್ಭಿಣಿ ಯೊಬ್ಬರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರೆಡ್‌ ಝೊàನ್‌, ಕಂಟೈನ್‌ಮೆಂಟ್‌ ಝೊàನ್‌ ಹೊರತುಪಡಿಸಿ ಉಳಿದ ಪ್ರದೇಶಗಳಿಂದ ಆಸ್ಪತ್ರೆಗಳಿಗೆ ಬರುವ ಗರ್ಭಿಣಿಯರಿಗೆ ಕೊರೊನಾ ಸಂಬಂಧಿತ ಪರೀಕ್ಷೆಗಳಿಲ್ಲದೆ ಹೆರಿಗೆ ಮಾಡಿಸಲು ನಿರ್ಧಾರ ಕೈಗೊಂಡಿ ರುವುದಾಗಿ ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಇದುವರೆಗೆ 3 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಡಿಸಾcರ್ಜ್‌ ಆಗಿದ್ದಾರೆ. ಇಬ್ಬರು ಜಿಲ್ಲಾ ಕೋವಿಡ್‌ 19 ಆಸ್ಪತ್ರೆಯಲ್ಲಿ ಇದ್ದಾರೆ ಎಂದರು. ವಿಧಾನ ಪರಿಷತ್‌ ಸದಸ್ಯ ಎಂ.ಪಿ. ಸುನಿಲ್‌ ಸುಬ್ರಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾಣ ಕೆ. ಮೋಹನ್‌, ಕೊಡಗು ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾಣ ಕಾರ್ಯಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಪಿ. ಸುಮನ್‌, ಅಪರ ಜಿಲ್ಲಾಧಿಕಾರಿ ಡಾಣ ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಅಶ್ವಿ‌ನಿ ಆಸ್ಪತ್ರೆಗೆ ಭೇಟಿ
ಸಚಿವ ಬಿ. ಶ್ರೀರಾಮುಲು ಅವರು ನಗರದ ಅಶ್ವಿ‌ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ವೈದ್ಯಾಧಿಕಾರಿಗಳಿಂದ ಹಲವು ಮಾಹಿತಿಗಳನ್ನು ಪಡೆದರು. ವಿಧಾನ ಪರಿಷತ್‌ ಸದಸ್ಯ ಸುನಿಲ್‌ ಸುಬ್ರಮಣಿ ಮತ್ತಿತರರಿದ್ದರು.

ಮಕ್ಕಳು ಆತಂಕಕ್ಕೆ ಒಳಗಾಗದಿರಲಿ
ಇದೇ ತಿಂಗಳು ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ಮಕ್ಕಳು ಆತಂಕಕ್ಕೆ ಒಳಗಾಗದಂತೆ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ, ಶಿಕ್ಷಣ ಇಲಾಖೆಯ ತಲಾ ಇಬ್ಬ ರಂತೆ ಮಕ್ಕಳನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ ಪರೀಕ್ಷೆಗೆ ಹಾಜರಾಗಲು ಅನುಕೂಲ ಒದಗಿಸಬೇಕು ಎಂದು ಶ್ರೀರಾಮುಲು ಹೇಳಿದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.