ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ: ಶಾಸಕ
Team Udayavani, Jun 11, 2020, 4:48 AM IST
ಗುಂಡ್ಲುಪೇಟೆ: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ ಎಂದು ಶಾಸಕ ನಿರಂಜನಕುಮಾರ್ ಹೇಳಿದರು. ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲನೇ ವರ್ಷವನ್ನು ಯಶಸ್ವಿ ಯಾಗಿ ಪೂರೈಸಿ ಎರಡನೇ ವರ್ಷಕ್ಕೆ ಹತ್ತು ಹಲವು ಜನ ಪ್ರಿಯ ಯೋಜನೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕರಪತ್ರ ವಿತರಿಸಿ ಮಾತನಾಡಿದರು.
ಅಭಿವೃದ್ಧಿ ಕಾರ್ಯ: ಪ್ರಧಾನಿ ಮೋದಿಯವರು ಈಗಾಗಲೇ ಹತ್ತು ಹಲವು ಕ್ಷೇತ್ರದಲ್ಲಿ ತನ್ನದೇ ಆದ ಯಶಸ್ಸು ಕಂಡಿದ್ದು, ಶಿಕ್ಷಣ ಹಾಗೂ ಆರೋಗ್ಯ ವಿಚಾರದಲ್ಲಿ ಅತ್ಯಂತ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ. ಒಂದು ವರ್ಷ ದಲ್ಲಿ ಡಿರುವ ಅಭಿವೃದ್ಧಿ ಕಾರ್ಯ ಹಾಗೂ ಯೋಜ ನೆಗಳನ್ನು ಜನತೆಗೆ ತಿಳಿಸಲು ಮನೆ ಮನೆಗೂ ಕರಪತ್ರ ದೊಂದಿಗೆ ಮಾಹಿತಿ ನೀಡುತ್ತಿರುವುದಾಗಿ ತಿಳಿಸಿದರು.
ಅಭಿನಂದನೆ: ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿ ಯಿಂದ ಆಯ್ಕೆಯಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರಿಗೆ ಶಾಸಕ ನಿರಂಜನಕುಮಾರ್ ಅಭಿನಂದನೆ ತಿಳಿಸಿದರು. ನಮ್ಮ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸಮಾನ ಅವಕಾಶವಿದೆ ಎಂಬುದಕ್ಕೆ ಇವರ ಆಯ್ಕೆ ನಿದರ್ಶನವಾಗಿದೆ. ಅಶೋಕಗಸ್ತಿ ಅವರನ್ನು ಆಯ್ಕೆ ಮಾಡುವುದರೊಂದಿಗೆ ಸಣ್ಣ ಸಮುದಾಯಗಳ ಪರವಾಗಿದ್ದೇವೆ. ಎಲ್ಲಾ ವರ್ಗದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತೇವೆ ಎಂಬುದನ್ನು ತಿಳಿಯಬಹುದು ಎಂದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ದೊಡ್ಡಹುಂಡಿ ಜಗದೀಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹಂಗಳಪ್ರಣಯ್, ಮುಖಂಡರಾದ ಗೋವಿಂದ ರಾಜನ್, ನಾರಾಯಣ ಸ್ವಾಮಿ, ರಾಜಶೇಖರಪ್ಪ, ಮಂಜುನಾಥ್, ಬಸವಣ್ಣ, ಮಲ್ಲಿಕಾರ್ಜುನ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Gundlupet: ಬಂಡೆ ಮೇಲೆ ಹುಲಿ; ಆತಂಕ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.