ಎಸ್ಸೆಸ್ಸೆಲ್ಸಿ ಪರೀಕ್ಷೆ, ನಿರೀಕ್ಷೆಗೆ ತಕ್ಕ ಸುರಕ್ಷತೆ
Team Udayavani, Jun 11, 2020, 5:12 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳು ಹಾಗೂ ಪಾಲಕ, ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಬುಧವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಯಶಸ್ವಿಯಾಗಿ ಪರೀಕ್ಷೆ ನಿರ್ವಹಿಸಬೇಕೆಂದರು. ಉತ್ಛ ನ್ಯಾಯಾಲಯದ ನಿರ್ದೇಶನದ ಅನುಸಾರ ನಡೆಯುವ ಈ ಪರೀಕ್ಷೆ, ಸಮಾಜಕ್ಕೆ ಭರವಸೆ ಮೂಡಿಸುವ ರೀತಿಯಲ್ಲಿ ಅಚ್ಚುಕಟ್ಟಾಗಿ ನಿರ್ವಹಣೆಯಾಗಬೇಕು. ಇದು ನಮ್ಮ ಸಾಮಾಜಿಕ ಬದ್ಧತೆಗೆ ಸವಾಲು ಎಂದು ಪರಿಗಣಿಸಿ, ಕ್ರಿಯಾಶೀಲವಾಗಿ ಸೇವೆ ಸಲ್ಲಿಸಲು ನಿರ್ದೇಶಿಸಿದರು.
ಪರೀಕ್ಷೆಗೆ ಮುಂಚೆಯೇ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್ ಮಾಡಬೇಕು. ಅಲ್ಲದೇ, ಪ್ರತಿ ದಿನದ ಪರೀಕ್ಷೆ ಬಳಿಕವೂ ಸ್ಯಾನಿಟೈಜ್ ಕ್ರಮ ಅನುಸರಿಸಬೇಕೆಂದರು. ಶಿಕ್ಷಣ ಇಲಾಖೆ ಆಯುಕ್ತ ಡಾ.ಜಗದೀಶ್, ಬೆಂಗಳೂರು ನಗರ, ಗ್ರಾಮಾಂತರ ಜಿಪಂ ಸಿಇಒಗಳು, ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಶೇಷ ಪುನರ್ ಮನನ ತರಗತಿ: ಪ್ರಶ್ನೆ ಪತ್ರಿಕೆ ಆಧಾರಿತ ವಿಶೇಷ ಪುನರ್‌ಮನನ ತರಗತಿಗಳನ್ನು ಜೂ.12ರಿಂದ 17ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುವುದು. ಎಲ್ಲಾ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಆಧಾರಿತ ವಿಶೇಷ ಪುನರ್‌ಮನನ ತರಗತಿ ಇದಾಗಲಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.