ಇಬ್ಬರಿಗೆ ಷರತ್ತುಬದ್ಧ ಜಾಮೀನು
Team Udayavani, Jun 11, 2020, 5:14 AM IST
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೈದಿಗಳ ನಡುವೆ ಅಂತರ ಕಾಪಾಡುವುದು ಕಷ್ಟವಾಗುವ ಅಂಶವನ್ನು ಪರಿಗಣಿಸಿದ ಹೈಕೋರ್ಟ್ ಕೊಲೆ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಇಬ್ಬರು ಮಹಿಳೆಯರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಚಿಕ್ಕಬಳ್ಳಾಪುರದ ಅನಸೂಯಮ್ಮ ಹಾಗೂ ದ್ಯಾವಮ್ಮ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯ ನಾಶಪಡಿಸುವ ಯತ್ನ ಮಾಡಬಾರದು,
ಎರಡು ವಾರಕ್ಕೊಮ್ಮೆ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ವಿರುದ್ಧ ಕೊಲೆ ಹಾಗೂ ಸಾಕ್ಷ್ಯ ನಾಶಪಡಿಸಿದ ಪ್ರಕರಣ ದಾಖಲಿಸಲಾಗಿದೆ. ಆದರೆ, ಅವರ ವಿರುದ್ಧ ಕೊಲೆ ನಡೆದ ಸಂದರ್ಭದಲ್ಲಿ ಮನೆಯ ಗೋಡೆ ಹಾಗೂ ನೆಲದ ಲಿದ್ದ ಮೃತರ ರಕ್ತದ ಕಲೆಗಳನ್ನು ತೊಳೆದು ಸಾಕ್ಷ್ಯ ನಾಶಪಡಿಸಿದ್ದಾರೆಂಬ ಆರೋಪ ಮಾಡಲಾಗಿದೆ.
ಈ ಹಂತದಲ್ಲಿ ಅರ್ಜಿದಾರರ ವಿರುದ್ಧ ಸಾಕ್ಷ್ಯ ನಾಶಪಡಿಸಿದ ಆರೋಪ ಮಾತ್ರ ಹೊರಿಸಬಹುದಾಗಿದೆ. ಜಾಮೀನು ಒಂದು ನೂನಾಗಿದ್ದು, ಆರೋಪಿಗಳು ಮಹಿಳೆಯರಾಗಿದ್ದು, ಗೌರವಯುತ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮುಖ್ಯವಾಗಿ ಕೋವಿಡ್-19 ಸಂದರ್ಭದಲ್ಲಿ ಜೈಲಿನಲ್ಲಿರುವ ಸಹ ಕೈದಿಗಳ ಜತೆ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸ್ವಲ್ಪ ಕಷ್ಟ ಎಂದು ಅಭಿಪ್ರಾಯಪಟ್ಟು ಅರ್ಜಿದಾರರಿಗೆ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.