ಶಿಕ್ಷಣಕ್ಕಿಂತ ಮಕ್ಕಳ ಆರೋಗ್ಯ ಮುಖ್ಯ
Team Udayavani, Jun 11, 2020, 6:28 AM IST
ಚನ್ನಪಟ್ಟಣ: ಕೋವಿಡ್ 19 ಸಂಕಷ್ಟದಲ್ಲಿ ಶಿಕ್ಷಣಕ್ಕಿಂತ ಮಕ್ಕಳ ಆರೋಗ್ಯ ಮುಖ್ಯ ಎಂದು ಬಾಲು ಪಬ್ಲಿಕ್ ಶಾಲೆ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ ಹೇಳಿದರು.ಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪೋಷಕರ ಸಭೆಯಲ್ಲಿ ಮಾತನಾಡಿ, ಆರೋಗ್ಯದಿಂದಿದ್ದರೆ ಶಿಕ್ಷಣ ಪಡೆಯಬಹುದು.
ಸರ್ಕಾರ ನೀಡುವ ಆದೇಶದ ಮೇಲೆ ಕೋವಿಡ್ 19 ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಿ ಪೋಷಕರ ಅಭಿಪ್ರಾಯ ಪಡೆದು ಶಾಲೆ ಪ್ರಾರಂಭಕ್ಕೆ ಸಿದಟಛಿತೆ ಮಾಡಿಕೊಳ್ಳಲಾಗುವುದು ಎಂದರು. ಕೋವಿಡ್ 19 ಹಾವಳಿಯ ಸಂದರ್ಭದಲ್ಲಿ ಶಾಲೆ ಆರಂಭಿಸಬೇಕೋ ಬೇಡವೋ ಎಂಬ ಬಗ್ಗೆ ಪೋಷಕರ ಅಭಿಪ್ರಾಯ ಪಡೆಯಲಾಗುತ್ತಿದೆ.
ಒಬ್ಬರಿಂದ ಒಬ್ಬರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈಗೆ ಪ್ರತಿ ಗಂಟೆಗೊಮ್ಮೆ ಶುಚಿಗೊಳಿಸಬೇಕು. ಮುಖಕ್ಕೆ ಮಾಸ್ಕ್ ಹಾಕುವುದರ ಜೊತೆಗೆ ಅನಾರೋಗ್ಯ ಪೀಡಿತರೊಂದಿಗಿನ ಸಂಪರ್ಕ ಬಿಡಬೇಕು ಎಂದು ತಿಳಿಸಿದರು. ಶಾಲೆ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ಮಾತನಾಡಿ, ಶಾಲೆ ಆರಂಭಿಸುವುದು ಮುಖ್ಯವಲ್ಲ. ಮಕ್ಕಳ ಆರೋಗ್ಯ ಮುಖ್ಯ.
ಭವಿಷ್ಯದ ಮುಂದಿನ ಪ್ರಜೆಗಳಾದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರದಂತೆ ಜಾಗ್ರತೆ ವಹಿಸುವುದು ನಮ್ಮ ಜವಾಬ್ದಾರಿ ಎಂದರು. ಕೆಲ ಪೋಷಕರು ಕೋವಿಡ್ 19 ಹರಡುತ್ತಿರುವಾಗ ಶಾಲೆ ಆರಂಭಿಸುವುದು ಸರಿಯಲ್ಲ ಎಂದರೆ ಕೆಲವರು ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಂಡು ಆರಂಭಿಸಬಹುದು ಎಂದರು. ಶಾಲೆ ಪ್ರಾಂಶುಪಾಲರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.