ಮೀಸಲಾತಿ ಕೈ ಬಿಡದಂತೆ ಪತ್ರ ಚಳವಳಿ


Team Udayavani, Jun 11, 2020, 7:44 AM IST

ಮೀಸಲಾತಿ ಕೈ ಬಿಡದಂತೆ ಪತ್ರ ಚಳವಳಿ

ವಿಜಯಪುರ: ತಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿ ಮಿಸಲು ಪಟ್ಟಿಯಿಂದ ಕೈ ಬಿಡದಂತೆ ಜಿಲ್ಲೆಯಲ್ಲಿ ಬಂಜಾರಾ ಸಮುದಾಯದವರು ಪತ್ರ ಚಳವಳಿ ಆರಂಭಿಸಿದ್ದಾರೆ.

ಬುಧವಾರ ಲಂಬಾಣಿ ಸಮುದಾಯದ ಅಬಾಲವೃದ್ಧರು ಪತ್ರ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಅಸ್ಪೃಶ್ಯತೆ ಸೇರಿದಂತೆ ಎಲ್ಲ ರೀತಿಯ ಅಪಮಾನ, ಅಸಮಾನತೆ, ತಾರತಮ್ಯ ಹಾಗೂ ಸಾಮಾಜಿಕ ಕಳಂಕಕ್ಕೆ ಗುರಿಯಾಗಿ ಇಂದಿಗೂ ತಬ್ಬಲಿ ಜಾತಿಗಳಾಗಿಯೇ ಉಳಿದಿವೆ. ಈ ಜಾತಿಗಳನ್ನು ಎಸ್‌ಸಿ ಪಟ್ಟಿಯಲ್ಲಿ ಯಥಾಸ್ಥಿತಿಯಲ್ಲೇ ಮುಂದುವರಿಸುವಂತೆ ಸರ್ಕಾರಕ್ಕೆ ಒತ್ತಾಯಿದರು.

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುವ ಲಂಬಾಣಿ, ಭೋವಿ, ಕೊರಚ ಹಾಗೂ ಕೋರಮ ಜಾತಿಗಳನ್ನು  ಪರಿಶಿಷ್ಟ ಜಾತಿ ಮೀಸಲು ಪಟ್ಟಿಯಿಂದ ಕೈ ಬಿಡುವ ಕುರಿತು ಕೆಲವರು ಕುತಂತ್ರ ನಡೆಸಿದ್ದಾರೆ. ಹೀಗಾಗಿ ಬಂಜಾರ ಸಮುದಾಯ ಮುಖ್ಯಮಂತ್ರಿಗಳಿಗೆ ಅಂಚೆ ಪತ್ರ ರವಾನಿಸುವ ಮೂಲಕ ಪತ್ರ ಚಳವಳಿ ಆರಂಭಿಸಿದೆ ಎಂದು ದೂರಿದ್ದಾರೆ. ಜಿಲ್ಲೆಯಾದ್ಯಂತ ಬಹುತೇಕ ಎಲ್ಲ ತಾಂಡಾದಲ್ಲಿ ಬಂಜಾರ-ಲಂಬಾಣಿ ಸಮುದಾಯದ ಹಿರಿಯರು, ಯುವಕರು, ಮಹಿಳೆಯರು ಮುಖ್ಯಮಂತ್ರಿಗೆ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆ ಹಾಕುವ ಮೂಲಕ ಪತ್ರ ಚಳವಳಿ ನಡೆಸಿದರು.

ತಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿ ಮಿಸಲಾತಿಯಿಂದ ಕೈ ಬಿಡುವಂತೆ ಕೆಲವರು ಸಂಚು ರೂಪಿಸುತ್ತಿದ್ದಾರೆ. ಸರ್ಕಾರ ಕೂಡಲೇ ಈ ಸಂಚು ರೂಪಿಸಿರುವ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ನಮ್ಮ ಸಮುದಾಯಗಳಿಗೆ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರ್ಪಡೆಯಾಗಿ ಮಿಸಲು ಸೌಲಭ್ಯ ಸಿಕ್ಕಿರುವುದು ಯಾವುದೇ ಸಮುದಾಯ ನಮಗೆ ಕೊಟ್ಟಿರುವ ಭಿಕ್ಷೆ ಅಲ್ಲ, ಇದು ಡಾ| ಬಾಬಾಸಾಹೇಬ ಅಂಬೇಡ್ಕರ್‌ ಸಂವಿಧಾನಿಕವಾಗಿ ಕೊಟ್ಟಿರುವ ಸಂವಿಧಾನ ಬದ್ಧವಾದ ಮೀಸಲು ಹಕ್ಕು. ಬಂಜಾರ, ಭೋವಿ, ಕೊರಚ, ಕೊರಮ ಸಮಾಜಗಳನ್ನು ಪರಿಶಿಷ್ಟ ಜಾತಿ ಮಿಸಲಾತಿ ಪಟ್ಟಿಯಿಂದ ತೆಗೆಯುವಂತೆ ಒತ್ತಾಯಿಸುವುದು ಕಾನೂನು ವಿರೋಧಿ ಕ್ರಮ ಎಂದು ಹರಿಹಾಯ್ದರು.

ಸರ್ಕಾರ ಕೂಡಲೇ ಸಂವಿಧಾನ ವಿರುದ್ಧವಾಗಿ ಪರಿಶಿಷ್ಟ ಜಾತಿ ಸಮುದಾಯ ಪಟ್ಟಿಯಿಂದ ನಮ್ಮ ಸಮಾಜವನ್ನು ಕೈಬಿಡುವ ಕುರಿತು ಕುತಂತ್ರ ನಡೆಸಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅತಿ ಹಿಂದುಳಿದಿರುವ ನಮ್ಮ ಸಮುದಾಯವನ್ನು ಸರ್ಕಾರ ಪರಿಶಿಷ್ಟ ಜಾತಿ ಮೀಸಲು ಪಟ್ಟಿಯಿಂದ ಕೈ ಬಿಡಬಾರದು ಎಂದು ಆಗ್ರಹಿಸಿದರು.

ಘೋಣಸಗಿ ಗ್ರಾಮದ ಪತ್ರ ಚಳವಳಿಯಲ್ಲಿ ಸುರೇಶ ಪವಾರ, ಶಂಕರ ಪವಾರ, ರಾಜು ರಾಠೊಡ, ಸಂಜೀವ ರಾಠೊಡ, ಬಬನ ರಾಠೊಡ, ಪ್ರಭು ಚವ್ಹಾಣ, ಬಾಸು ರಾಠೊಡ, ರುಕಾ¾ಬಾಯಿ ಜಾಧವ, ಅನೂಸೂಯಾ ಚವ್ಹಾಣ, ಅಂಜನಾ ಪವಾರ, ಅರ್ಜುನ ಪವಾರ, ಶಿವಾಜಿ ಪವಾರ, ಅಶೋಕ ರಾಠೊಡ ಇತರಿದ್ದರು. ನಗರದಲ್ಲಿ ಬಿ.ಡಿ.ರಾಠೊಡ್‌, ಸುರೇಶ ಬಿಜಾಪುರ, ಮೋತಿಲಾಲ್‌ ರಾಠೊಡ, ವಿ.ಏಲ್‌. ಚವ್ಹಾಣ, ಈರಪ್ಪ ಕೊಂಚಿಕೋರ್ವರ, ಕೆಂಚಪ್ಪ ಕೊಂಚಿಕೊರವರ, ರಮೇಶ ಹಿಪ್ಪರಗಿ, ಶ್ರೀಕಾಂತ್‌ ರಾಠೊಡ, ಪಿ.ಏನ್‌.ರಾಠೊಡ, ವಿಜಯಶ್ರೀ ಬಿಜಾಪುರ, ರುಕ್ಮಿಣಿ ರಾಠೊಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.