ಹರಪನಹಳ್ಳಿ ಶಿರಸ್ತೇದಾರ್ಗೆ ಕ್ವಾರಂಟೈನ್
Team Udayavani, Jun 11, 2020, 8:19 AM IST
ಹರಪನಹಳ್ಳಿ: ಪಟ್ಟಣದ ಮಿನಿ ವಿಧಾನಸೌಧ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೇದಾರ್ ಅವರ ಪುತ್ರನಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಿರಸ್ತೇದಾರರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿದೆ.
ಸ್ಥಳೀಯ ಶಿರಸ್ತೇದಾರ್ ಅವರ ಪುತ್ರ ಬಳ್ಳಾರಿಯ ಜಿಂದಾಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿರುವ ಎಲ್ಲಾ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಿದ ವೇಳೆ ಶಿರಸ್ತೇದಾರ್ ಅವರ ಪುತ್ರನ ವರದಿ ಪಾಸಿಟಿವ್ ಬಂದಿದೆ. ಶಿರಸ್ತೇದಾರರು ವಾರಕೊಮ್ಮೆ ತಮ್ಮ ಬಳ್ಳಾರಿ ನಿವಾಸಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ರವಾನಿಸಲಾಗಿದೆ.
ಪಟ್ಟಣದ ಮಿನಿ ವಿಧಾನಸೌಧ ತಹಶೀಲ್ದಾರ್ ಕಚೇರಿಯಲ್ಲಿ ಶಿರಸ್ತೇದಾರ್ ಅವರು ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತವಾಗಿ ಬುಧವಾರ ಸೋಂಕು ನಿವಾರಕ ಔಷಧ ಸಿಂಪಡಣೆ ಮಾಡಲಾಗಿದೆ. ಶಿರಸ್ತೇದಾರ ಪರೀಕ್ಷಾ ವರದಿ 5 ದಿನಕ್ಕೆ ಬರಲಿದ್ದು, ಒಂದು ವೇಳೆ ಅವರ ವರದಿ ಪಾಸಿಟಿವ್ ಎಂದು ಬಂದರೆ ಮಾತ್ರ ನಮ್ಮ ಕಚೇರಿಯ ಎಲ್ಲಾ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಹಶೀಲ್ದಾರ್ ಡಾ|ನಾಗವೇಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.