ಕರಾವಳಿಯ ವಿವಿಧ ಭಾಗಗಳಲ್ಲಿ ಮಳೆ ಚುರುಕು
Team Udayavani, Jun 11, 2020, 8:01 AM IST
ಮಂಗಳೂರು/ಉಡುಪಿ: ರಾಜ್ಯ ಕರಾವಳಿಯ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆಯ ಬಳಿಕ ಉತ್ತಮ ಮಳೆಯಾಗಿದೆ. ವಾರದ ಹಿಂದೆ ಕರಾವಳಿಗೆ ಕಾಲಿಟ್ಟ ಮುಂಗಾರು ಅನಂತರದಲ್ಲಿ ದುರ್ಬಲಗೊಂಡಿತ್ತು.
ಬುಧವಾರ ಬೆಳಗ್ಗಿನಿಂದ ಸಾಧಾರಣ ಮೋಡವಿದ್ದು, ಸಂಜೆಯ ವೇಳೆ ದಟ್ಟ ಮೋಡ ಕವಿದು ಹೆಚ್ಚಿನ ಕಡೆ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯ ಹೆಚ್ಚಿನೆಡೆ ರಾತ್ರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಕೆಲವೆಡೆ ಸಿಡಿಲಿನ ಆರ್ಭಟವೂ ಜೋರಾಗಿತ್ತು.
ಕುಂದಾಪುರ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ವೇಳೆ ಭಾರೀ ಮಳೆ ಯಾಗಿದೆ. ಕಾರ್ಕಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ವಿವಿಧೆಡೆ ಬುಧವಾರ ಮಳೆಯಾಗಿದೆ. ಬಂಟ್ವಾಳ ದಲ್ಲಿ ಅಪರಾಹ್ನ ಬಳಿಕ ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಕಾಸರಗೋಡು ಜಿಲ್ಲೆಯ ವಿವಿಧೆಡೆ ಕೂಡ ಉತ್ತಮ ಮಳೆಯಾಗಿದೆ.
ಮಳೆ ಸಾಧ್ಯತೆ
ಕೆಲವು ದಿನಗಳಿಂದ ಮುಂಗಾರು ಮಾರುತಗಳು ದುರ್ಬಲವಾಗಿದ್ದವು. ಈಗ ಮತ್ತೆ ಮೋಡಗಳ ಚಲನೆ ಆರಂಭವಾಗಿದೆ. ಈಗಿನ ಸ್ಥಿತಿಯಂತೆ ಮುಂದಿನ ಮೂರು-ನಾಲ್ಕು ದಿನ ಕರಾವಳಿಯಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
– ಡಾ| ರಾಜೇಗೌಡ, ಬೆಂಗಳೂರು ಕೃಷಿ ವಿ.ವಿ. ಹವಾಮಾನ ವಿಜ್ಞಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.