ಬಸವ ಭವನಕ್ಕೆ 25 ಲಕ್ಷ ಮಂಜೂರು
Team Udayavani, Jun 11, 2020, 10:36 AM IST
ಚಿತ್ತಾಪುರ: ಜಿ.ಪಂ ಸದಸ್ಯ ಶಿವರುದ್ರ ಭೀಣಿ ದಿಗ್ಗಾಂವ ಗ್ರಾಮದಲ್ಲಿ ಬಸವ ಭವನ ನಿರ್ಮಾಣ ಕಾಮಗಾರಿಗಾಗಿ ನಿವೇಶನ ಪರಿಶೀಲನೆ ನಡೆಸಿದರು
ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದಲ್ಲಿ ಬಸವ ಭವನ ನಿರ್ಮಾಣಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ 25 ಲಕ್ಷ ರೂ. ಮಂಜೂರು ಮಾಡಿಸಿದ್ದಾರೆ ಎಂದು ಜಿ.ಪಂ ಸದಸ್ಯ ಶಿವರುದ್ರ ಭೀಣಿ ಹೇಳಿದರು.
ತಾಲೂಕಿನ ದಿಗ್ಗಾಂವ ಗ್ರಾಮದಲ್ಲಿ ಬಸವ ಭವನ ನಿರ್ಮಾಣಕ್ಕೆ ಶಂಭು ಲಿಂಗೇಶ್ವರ ದೇವಸ್ಥಾನದ ಸಮೀಪವಿರುವ ನಿವೇಶನ ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಸುಸಜ್ಜಿತವಾತ ಬಸವ ಭವನ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಭವನ ನಿರ್ಮಾಣಕ್ಕೆ 15 ಲಕ್ಷ ರೂ., ಮುಸ್ಲಿಂ ಜನರಿಗಾಗಿ ಶಾದಿಖಾನಾ ನಿರ್ಮಾಣಕ್ಕೆ 15 ಲಕ್ಷ ರೂ.ಗಳನ್ನು ಶಾಸಕರು ಮಂಜೂರು ಮಾಡಿಸಿದ್ದಾರೆ. ಕೂಡಲೇ ಈ ಭವನಗಳ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು. ಶಾಸಕ ಪ್ರಿಯಾಂಕ್ ಖರ್ಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಹೊಳೆ ಯನ್ನೇ ಹರಿಸುತ್ತಿದ್ದಾರೆ ಎಂದರು.
ಶಂಭುಲಿಂಗೇಶ್ವರ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಸಿದ್ಧಣ್ಣಗೌಡ ಮಾಲಿಪಾಟೀಲ, ಮುಖಂಡ ಸಿದ್ಧಣ್ಣಗೌಡ ಆರ್.ಡಿ, ಶರಣಪ್ಪ ಪಲ್ಲೇದ, ಶರಣು ಬುಳ್ಳಾ, ಜೆಇ ಉಮೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.