ತಳ್ಳುಗಾಡಿ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯ ಮೃತದೇಹ ಸರಕಾರಿ ಬಾವಿಯಲ್ಲಿ ಪತ್ತೆ
Team Udayavani, Jun 11, 2020, 12:04 PM IST
ಪುತ್ತೂರು: ಬೀದಿ ಬದಿ ತಳ್ಳುಗಾಡಿಯಲ್ಲಿ ಕಬಾಬ್ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತ ದೇಹ ಇಂದು ಪುತ್ತೂರು – ಉಪ್ಪಿನಂಗಡಿ ರಸ್ತೆಯ ಪಡೀಲು ಸರಕಾರಿ ಬಾವಿಯಲ್ಲಿ ಪತ್ತೆಯಾಗಿದೆ.
ಪಡೀಲು ಸಮೀಪ ಹಲವಾರು ಸಮಯಗಳಿಂದ ತಳ್ಳುಗಾಡಿಯಲ್ಲಿ ಚಿಕನ್ ಕಬಾಬ್ ವ್ಯಾಪಾರ ನಡೆಸುತ್ತಿದ್ದ ನಂದಿಲ ನಿವಾಸಿ ವಿಠಲ ನಾಯ್ಕ್ (63ವ) ರವರು ಮೃತಪಟ್ಟವರು.
ಕೋವಿಡ್-19 ವೈರಸ್ ಹರಡದಂತೆ ಲಾಕ್‌ಡೌನ್ ಬಳಿಕ ಸಂಕಷ್ಟಕ್ಕೆ ಒಳಗಾದ ಅವರು ಲಾಕ್‌ಡೌನ್ ಸಡಿಲಿಕೆ ಬಳಿಕ ಮತ್ತೆ ತನ್ನ ವ್ಯವಹಾರ ಆರಂಭಿಸಿದ್ದರೂ ನಡುವೆ ಅನಾರೋಗ್ಯ ಅವರನ್ನು ಕಾಡಿತ್ತೆನ್ನಲಾಗಿದೆ. ಜೂ.10ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಹೊರಗೆ ಹೋದವರು ಮತ್ತೆ ನಾಪತ್ತೆಯಾಗಿದ್ದರು. ಈ ಕುರಿತು ಮನೆ ಮಂದಿ ಪರಿಸರದಲ್ಲಿ ಹಡುಕಾಡಿದರೂ ಪತ್ತೆಯಾಗಿರಲಿಲ್ಲ.
ಜೂ. 11ರಂದು ಪಡೀಲು ಸರಕಾರಿ ಬಾವಿಯ ಕಟ್ಟೆಯಲ್ಲಿ ಚಪ್ಪಲಿ ಮತ್ತು ವೇಸ್ಟಿಯೊಂದನ್ನು ಕಂಡ ಕೆಲವರು ಸಂಶಯ ವ್ಯಕ್ತಪಡಿಸಿ ಬಾವಿಯನ್ನು ನೋಡಿದಾಗ ವ್ಯಕ್ತಿಯೊಬ್ಬರ ಮೃತ ದೇಹ ಬಾವಿಯಲ್ಲಿರುವುದು ಪತ್ತೆಯಾಗಿತ್ತು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.