ರೈತರಲ್ಲಿ ಮಂದಹಾಸ ತಂದ ಮುಂಗಾರು
Team Udayavani, Jun 11, 2020, 12:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಸದಾ ಪ್ರಕೃತಿ ವಿಕೋಪದಿಂದ ನಲುಗಿ ಹೋಗುತ್ತಿರುವ ಗಡಿನಾಡು ಬೀದರನಲ್ಲಿ ಮುಂಗಾರು ಮಳೆ ಆಗಮನ ನೊಂದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲಾದ್ಯಂತ ಬುಧವಾರ ಉತ್ತಮ ಮಳೆ ಸುರಿದಿದ್ದು, ರೈತರನ್ನು ಕೃಷಿ ಚಟುವಟಿಕೆಗೆ ಅಣಿಗೊಳಿಸುವಂತೆ ಮಾಡಿದೆ.
ಮುಂಗಾರು ಪೂರ್ವ ಮಳೆ ಕೊರತೆ ಎದುರಿಸಿದ್ದ ಜಿಲ್ಲೆಯಲ್ಲಿ ಎರಡು ದಿನ ತಡವಾದರೂ ಬುಧವಾರ ಉತ್ತಮವಾಗಿ ಮುಂಗಾರು ಮಳೆ ಸುರಿದಿದೆ. ಬೀದರ ನಗರ ಸೇರಿದಂತೆ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಮಧ್ಯಾಹ್ನದ ವೇಳೆ ಗುಡುಗು, ಗಾಳಿ ಆರ್ಭಟದೊಂದಿಗೆ ವರ್ಷಧಾರೆ ಆಗಿದ್ದು, ಅನ್ನದಾತರು ನಿಟ್ಟಿಸಿರು ಬಿಡುವಂತಾಗಿದೆ.
ಮುಂಗಾರು ಮಾರುತ ಪ್ರವೇಶಿಸಿದ್ದರೆ, ಇನ್ನೊಂದೆಡೆ ರೈತರು ಈಗಾಗಲೇ ಮುಂಗಾರು ಬಿತ್ತನೆಗೆ ಹೊಲ ಸಜ್ಜುಗೊಳಿಸಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ. ಹೀಗೆ ಇನ್ನೆರಡು ದಿನ ಮಳೆ ಸುರಿದು ಕೊಂಚ ಬಿಡುವು ನೀಡಿದರೆ ಬಿತ್ತನೆ ಚಟುವಟಿಕೆ ಶುರು ಮಾಡಿಕೊಳ್ಳಬಹುದು.
ಇನ್ನು ಭಾರೀ ಮಳೆಗೆ ನಗರದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದವು. ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ಕೆಲ ಕಾಲ ಕಿರಿಕಿರಿ ಅನುಭವಿಸುವಂತಾಯಿತು. ಇಲ್ಲಿನ ಹರಳಯ್ಯ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ ಸೇರಿ ಇನ್ನಿತರ ಕಡೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ಚರಂಡಿ ನೀರು ರಸ್ತೆಯಲ್ಲೇ ಹರಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.