ಮೆರಿಟ್‌ ನೋಡಿ ಟಿಕೆಟ್‌ ಕೊಡಿ: ಕೈನಲ್ಲಿ ಹೊಸಬರ ವರಸೆ

ಬಿಜೆಪಿಯಂತೆ ಕಾಂಗ್ರೆಸ್‌ ಪಕ್ಷದಲ್ಲೂ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಒತ್ತಡ

Team Udayavani, Jun 11, 2020, 12:51 PM IST

ಮೆರಿಟ್‌ ನೋಡಿ ಟಿಕೆಟ್‌ ಕೊಡಿ: ಕೈನಲ್ಲಿ ಹೊಸಬರ ವರಸೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆ ಕಸರತ್ತು ಮುಗಿಯುವ ಬೆನ್ನಲ್ಲೇ ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ. ಬಿಜೆಪಿಯಲ್ಲಿ ಅನೇಕ ವರ್ಷಗಳಿಂದ ಪಕ್ಷ ನಿಷ್ಠರಾಗಿದ್ದ ಕಾರ್ಯಕರ್ತರನ್ನು ಗುರುತಿಸಿ ರಾಜ್ಯಸಭೆ ಚುನಾವಣೆಗೆ ಅವಕಾಶ ಕಲ್ಪಿಸಿರುವಂತೆ ಯೇ ಕಾಂಗ್ರೆಸ್‌ನಲ್ಲೂ ಪಕ್ಷ ನಿಷ್ಠ ಕಾರ್ಯಕರ್ತರಿಗೂ ಅವಕಾಶ ನೀಡಬೇಕು. ಅದು ಈ ಬಾರಿಯ ವಿಧಾನಪರಿಷತ್‌ ಚುನಾವಣೆಯಲ್ಲಿ ಸಾಬೀತಾಗಬೇಕೆಂಬ ಒತ್ತಡಕ್ಕೆ ಕಾರಣವಾಗಿದೆ. ಜತೆಗೆ, ಸೋತವರಿಗೆ ಮತ್ತು ಅಸಮಾಧಾನಿತರಿಗೆ ಅಥವಾ ಜಾತಿ, ಹಣ ಉಳ್ಳವರಿಗೆ ಅವಕಾಶ ಕಲ್ಪಿಸಬಾರದು. ಬಿಜೆಪಿಯಿಂದ ಪಾಠ ಕಲಿತು ಪಕ್ಷವನ್ನು ಗಟ್ಟಿಗೊಳಿಸಬೇಕೆಂಬ ಒತ್ತಡ ಕಾಂಗ್ರೆಸ್‌ ನಿಷ್ಠರಿಂದ ಬಂದಿದೆ.

ಕಾರ್ಯಕರ್ತರ ಪಕ್ಷವಾಗಿ ಬಿಜೆಪಿ ಬೆಳೆದಂತೆ, ಕಾಂಗ್ರೆಸ್‌ ಕೂಡಾ ಕಾರ್ಯಕರ್ತರ ಮೂಲಕ ಪಕ್ಷವನ್ನು ಗಟ್ಟಿಗೊಳಿಸಿ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸಬೇಕೆಂಬ ಒತ್ತಡ ಹೆಚ್ಚಾಗಿದೆ. ಈ ಬಾರಿ ಹಳಬರಿಗೆ ಅವಕಾಶ ನೀಡದೇ ಹೊಸಬರನ್ನು ಪರಿಗಣಿಸುವಂತೆ ಯುವ ಮುಖಂಡರು
ಹಾಗೂ ಟಿಕೆಟ್‌ ಆಕಾಂಕ್ಷಿಗಳು ಪಕ್ಷದ ನಾಯಕರ ಮುಂದೆ ಬೇಡಿಕೆ ಜೊತೆಗೆ ಹಳಬರ ಸಾಧನೆ ಪಟ್ಟಿಯನ್ನೂ ನೀಡುವಂತೆ ನಾಯಕರಿಗೆ ಒತ್ತಡ ಹೇರಲು ಮುಂದಾಗಿದ್ದಾರೆ.

ಪ್ರಸ್ತುತ ಸ್ಥಿತಿ: ಕಾಂಗ್ರೆಸ್‌ಗೆ ದೊರೆಯುವ ಎರಡು ಸ್ಥಾನಕ್ಕೆ ಡಜನ್‌ಗಟ್ಟಲೆ ಆಕಾಂಕ್ಷಿಗಳು ಅವಕಾಶಕ್ಕಾಗಿ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಹಿರಿಯ ನಾಯಕರು, ಮಾಜಿ ಸಚಿವರು, ಹಾಲಿ ನಿವೃತ್ತರಾಗುವವರು ಎಲ್ಲರೂ ಪರಿಷತ್‌ ಪ್ರವೇಶಿಸಲು ತಮ್ಮದೇ ಮಾನದಂಡ ಮುಂದಿಟ್ಟುಕೊಂಡು ನಾಯಕರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ. ವಿಧಾನ ಸಭೆಯಿಂದ ಪರಿಷತ್ತಿಗೆ ಖಾಲಿಯಾಗುವ ಏಳು ಸ್ಥಾನಗಳಲ್ಲಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್‌ಗೆ ಎರಡು ಹಾಗೂ ಜೆಡಿಎಸ್‌ಗೆ ಒಂದು ಸ್ಥಾನ ದೊರೆಯಲಿದೆ. ಅಲ್ಲದೆ ಪಕ್ಷ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೆಚ್ಚಿನ ಮತಗಳನ್ನು ಜೆಡಿಎಸ್‌ ಗೆ ನೀಡಲು ತೀರ್ಮಾನಿಸಿರುವುದರಿಂದ ಅದಕ್ಕೆ ಪ್ರತಿಯಾಗಿ ಜೆಡಿಎಸ್‌ನಿಂದ ಒಂದು ವಿಧಾನ ಪರಿಷತ್‌ ಸ್ಥಾನ ಪಡೆಯುವಂತೆಯೂ ಕೆಲವು ಆಕಾಂಕ್ಷಿಗಳು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೇಲೆ ಒತ್ತಡ ಹೇರುತ್ತಿದ್ದಾರೆ.

ಸಾಧನೆ ಪಟ್ಟಿ ಕೊಡಿ: ಈ ನಡುವೆ ಅನೇಕ ವರ್ಷಗಳಿಂದ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಪದಾಧಿಕಾರಿಗಳಾಗಿ, ಪಕ್ಷದ ವಕ್ತಾರರಾಗಿ ಸೇವೆ ಸಲ್ಲಿಸಿದವರು ತಮ್ಮನ್ನು ಪರಿಷತ್‌ ಸ್ಥಾನಕ್ಕೆ ಪರಿಗಣಿಸುವಂತೆ ರಾಜ್ಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಜತೆಗೆ ಕೆಲವು ಆಕಾಂಕ್ಷಿಗಳು ಈಗ ಮಾಜಿಗಳಾಗುತ್ತಿರುವ ಜಯಮ್ಮ, ಇಕ್ಬಾಲ್‌ ಅಹಮದ್‌ ಸರಡಗಿ, ಅಬ್ದುಲ್‌ ಜಬ್ಟಾರ್‌, ನಜೀರ್‌ ಅಹಮದ್‌ ಅವರ ಸಾಧನೆಯನ್ನು ಬಹಿರಂಗ ಪಡಿಸುವಂತೆ ಪಕ್ಷದ ನಾಯಕರ ಮುಂದೆ ಆಗ್ರಹಿಸುತ್ತಿದ್ದಾರೆ. ಎನ್‌ಆರ್‌ಸಿ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಪರಿಷತ್‌ ಸದಸ್ಯರು ಮಾಡಿದ್ದೇನು? ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಷ್ಟಕ್ಕೆ ಸಿಲುಕಿದವರಿಗಾಗಿ ಹಾಗೂ ಅವರು ಪ್ರತಿನಿಧಿಸುವ ಸಮುದಾಯಗಳಿಗೆ ಮಾಡಿರುವ ಸಹಾಯ ಏನು ಎಂಬ ಹಲವಾರು ಪ್ರಶ್ನೆಗಳನ್ನು ನಾಯಕರ ಮುಂದಿಟ್ಟು ಟಿಕೆಟ್‌ ಆಕಾಂಕ್ಷಿ ಹಿರಿಯ ನಾಯಕರಿಗೆ ಸವಾಲೊಡ್ಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಜೂ.12 ರಂದು ಕಾಂಗ್ರೆಸ್‌ ಹಿರಿಯ ನಾಯಕರ ಸಭೆ ನಡೆಯುವ ಸಾಧ್ಯತೆ ಇದ್ದು, ಆ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವ ಸಾಧ್ಯತೆ ಇದೆ.

● ಶಂಕರ ಪಾಗೋಜಿ

ಟಾಪ್ ನ್ಯೂಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

12-cancer

Breast Cancer: ಸ್ತನಗಳ ಕ್ಯಾನ್ಸರ್‌ ನಿಗಾ ಇರಿಸಬೇಕಾದ ಆರಂಭಿಕ ಲಕ್ಷಣಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Chikkamagaluru: ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ

Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…

1-cc

ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Congress-Symbol

CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

6

Ajekar: ಎಷ್ಟು ದಿನ ಟವರ್‌ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್‌ ಕೊಡಿ ಸ್ವಾಮಿ!

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

5

Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!

4(1

Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್‌ ಅಳವಡಿಕೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.