ಎಲ್ಲರಲ್ಲೂ ಪರಿಸರ ಕಾಳಜಿ ಅಗತ್ಯ
Team Udayavani, Jun 11, 2020, 1:16 PM IST
ಬಾಳೆಹೊನ್ನೂರು: ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಿದರು.
ಬಾಳೆಹೊನ್ನೂರು: ಪ್ರತಿಯೊಬ್ಬರಲ್ಲಿ ಪರಿಸರ ಕಾಳಜಿ ಮೂಡಿಸುವ ಕೆಲಸವಾಗಬೇಕು. ಅಲ್ಲದೆ ಗಿಡಗಳನ್ನು ಬೆಳೆಸಿ ಸಂರಕ್ಷಿಸಿ ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬಾಳೆಹೊನ್ನೂರು ಅರಣ್ಯ ಇಲಾಖೆ ವತಿಯಿಂದ ವಿವಿಧ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ವರ್ಷ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು, ಈ ವರ್ಷ ಗಿಡ ಬೆಳೆಸಿ ಜೀವ ವೈವಿಧ್ಯತೆ ಉಳಿಸಲು ಆದ್ಯತೆ ನೀಡಲಾಗಿದೆ. ಗಿಡಗಳನ್ನು ನೆಡುವುದು ಬೆಳೆಸುವುದು ಹಾಗೂ ಅರಣ್ಯ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಬಹಳ ಪ್ರಮುಖವಾಗಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಪರಿಸರ ಬೆಳೆಸುವುದರ ಬಗ್ಗೆ ಅರಿವು ಮೂಡಿಸಬೇಕು. ಪರಿಸರ ಉಳಿಸಿ ಬೆಳೆಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಹಗಲಿರುಳೆನ್ನದೆ ಕಾರ್ಯನಿರ್ವ ಹಿಸಿದ ವೈದ್ಯರು, ಆರೋಗ್ಯ ಸಹಾಯಕಿಯರು, ಪೊಲೀಸ್ ಸಿಬ್ಬಂದಿ, ಗ್ರಾಪಂ, ತಾಪಂ, ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ಸಿಬ್ಬಂದಿಯನ್ನು ಅಭಿನಂದಿಸಿದರು. ಅರಣ್ಯ ಇಲಾಖೆಯ ಎ.ಸಿ.ಎಫ್. ಸತೀಶ್, ಅರಣ್ಯಾಧಿಕಾರಿ ನಿರಂಜನ್, ಜಿ.ಪಂ. ಸದಸ್ಯೆ ಚಂದ್ರಮ್ಮ, ತಾ.ಪಂ. ಸದಸ್ಯ ಟಿ.ಎಂ.ನಾಗೇಶ್, ಗ್ರಾ.ಪಂ. ಅಧ್ಯಕ್ಷೆ ಹೂವಮ್ಮ, ಉಪಾಧ್ಯಕ್ಷೆ ಫೈರೋಜಾಬಾನು, ಗ್ರಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಎಂ.ಎಸ್.ಅರುಣೇಶ್, ರವಿಚಂದ್ರ, ಕೇಶವತ್ತಿ ರಾಜೇಶ್, ವೈದ್ಯಾಧಿಕಾರಿ ಡಾ| ಎಲ್ದೋಸ್, ಡಾ| ಪ್ರವೀಣ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.