ಆಶ್ರಯ ಫಲಾನುಭವಿ ಆಯ್ಕೆ ಪಟ್ಟಿ ರದ್ದುಗೊಳಿಸಲು ಮನವಿ
Team Udayavani, Jun 11, 2020, 3:00 PM IST
ಮುಂಡರಗಿ ನಿವೇಶನ ಹಂಚಿಕೆಯ ಫಲಾನುಭವಿಗಳ ಆಯ್ಕೆಯ ಪ್ರಕ್ರಿಯೆ:ಯಲ್ಲಿ ತಾರತಮ್ಯ ಎಸಗಲಾಗಿದೆ. ಆದ್ದರಿಂದ ಪುರಸಭೆ ಆಡಳಿತ ಮಂಡಳಿ ರಚನೆಯಾಗುವರೆಗೂ ನಿವೇಶನ ಹಂಚಿಕೆಯ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸರಕಾರ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಪುರಸಭೆ ಸದಸ್ಯರು ಹಾಗೂ ನಿವೇಶನ ವಂಚಿತ ಫಲಾನುಭವಿಗಳು ತಹಶೀಲ್ದಾರ ಕಾರ್ಯಾಲಯದಲ್ಲಿ ಮನವಿ ಸಲ್ಲಿಸಿದರು.
ಪುರಸಭೆ ವ್ಯಾಪ್ತಿಯ ನಿವೇಶನ ರಹಿತ ಸುಮಾರು 3000ಕ್ಕೂ ಹೆಚ್ಚು ಫಲಾನುಭವಿಗಳು ಆಶ್ರಯ ನಿವೇಶನ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸರಕಾರವು 25 ಎಕರೆ ಭೂಮಿ ನೀಡಿದ್ದು, ಆ ಭೂಮಿಯಲ್ಲಿ ಕೇವಲ 1050 ನಿವೇಶನ ಮಾಡಲು ಸಾಧ್ಯವಾಗುತ್ತದೆ. ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿವೇಶನ ನೀಡಬೇಕು. ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದರ ಬದಲಾಗಿ ತಮಗೆ ಬೇಕಾಗಿರುವ, ಶ್ರೀಮಂತರನ್ನು ಸೇರಿಸಿ ಏಕ ಪಕ್ಷೀಯವಾಗಿ 844 ಜನ ಯಾದಿ ಪ್ರಕಟಿಸಲಾಗಿದೆ. ಈ ಯಾದಿಯು ಕಾನೂನು ಬಾಹಿರ್ ಮತ್ತು ಅವೈಜ್ಞಾನಿಕವಾಗಿದೆ. ಅದರಲ್ಲಿಯೂ ಒಂದೇ ಕುಟುಂಬದ ಮೂರ್‍ನಾಲ್ಕು ಜನರಿಗೆ, ರಾಜಕೀಯ ಹಿಂಬಾಲಕರಿಗೆ, ಮನೆ ಇದ್ದವರಿಗೆ, ಆಸ್ತಿ ಇದ್ದವರಿಗೆ ಫಲಾನುಭವಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಿದರು.
ತಾಲೂಕು ಶಿರಸ್ತೇದಾರ್ ಎಸ್.ಎಸ್. ಬಿಚ್ಚಾಲಿ ಮನವಿ ಸ್ವೀಕರಿಸಿದರು. ಪುರಸಭೆ ಸದಸ್ಯರಾದ ನಾಗರಾಜ ಹೊಂಬಳಗಟ್ಟಿ, ಮಹ್ಮದ ರಫೀಕ್ ಮುಲ್ಲಾ, ಸಂತೋಷ ಹಿರೇಮನಿ, ರಾಜಾಭಕ್ಷಿ ಬೆಟಗೇರಿ, ರೆಹಮಾನಸಾಬ್ ಮಲ್ಲನಕೇರಿ, ನಬಿಸಾಬ್ ಕೆಲೂರ, ಮಂಜಪ್ಪ ದಂಡಿನ, ಅಮೀರ ಭಾಷಾ ಚೌಕಾಸಿ, ಎಂ.ಕೆ. ತಳಗಡೆ, ಮೈನುದ್ದಿನ್ ರಾಟಿ, ಮಹಮ್ಮದ ರಫಿ ವಡ್ಡಟ್ಟಿ, ರಾಜಾಬಿ ಹಾತಲಗೇರಿ, ಬೀಬಿಜಾನ್ ಹಲಗೇರಿ, ಮಂಜುಳಾ ಬಗರಿಕಾರ, ಶಾಂತವ್ವ ಕಲ್ಲಕುಟಗರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.