ಜಿಲ್ಲೆಯಲ್ಲಿ 3.03 ಲಕ್ಷ ಜನರ ಸ್ಕ್ರೀನಿಂಗ್

ಗುಳೆ ಹೋಗಿದ್ದ 51,994 ಜನ ಜಿಲ್ಲೆಗೆ ವಾಪಾಸ್

Team Udayavani, Jun 11, 2020, 5:12 PM IST

ಜಿಲ್ಲೆಯಲ್ಲಿ 3.03 ಲಕ್ಷ ಜನರ ಸ್ಕ್ರೀನಿಂಗ್

ಸಾಂದರ್ಭಿಕ ಚಿತ್ರ

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾಡಳಿತ ಲಾಕ್‌ಡೌನ್‌ ಜಾರಿಯಾದ ದಿನದಿಂದ ಈ ವರೆಗೂ ಬರೊಬ್ಬರಿ 3,03,675 ಜನರನ್ನು ಸ್ಕ್ರೀನಿಂಗ್‌ ಮಾಡಿದೆ. ಅನ್ಯ ಜಿಲ್ಲೆ, ರಾಜ್ಯ ಸೇರಿದಂತೆ ವಿದೇಶದಿಂದ ಬಂದವರ ಮೇಲೂ ನಿಗಾ ಇರಿಸಿ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನಿಸಿದೆ.

ಕೊಪ್ಪಳ ಜಿಲ್ಲೆ ಮೊದಲೇ ಬರಪೀಡಿತ ಪ್ರದೇಶ. ಈ ಭಾಗದಲ್ಲಿ ಮಳೆಯಾಗುವುದೇ ಕಡಿಮೆ ಎನ್ನುವ ಸ್ಥಿತಿಗೆ ಬಂದಿದೆ. ಹಾಗಾಗಿ ಜಿಲ್ಲೆಯ ಸಾವಿರಾರು ಜನರು ತುತ್ತಿನ ಬದುಕಿಗಾಗಿ ದೂರದ ಊರುಗಳಿಗೆ ಗುಳೆ ಹೋಗಿ ಜೀವನ ನಡೆಸುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಮಹಾಮಾರಿ ಕೋವಿಡ್ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಜನರ ನೆಮ್ಮದಿಯನ್ನೇ ಕಿತ್ತುಕೊಂಡಿದೆ.

ಭಾರತಕ್ಕೆ ಕೋವಿಡ್ ಕಾಲಿಡುತ್ತಿದ್ದಂತೆ ಕೇಂದ್ರ ಸರ್ಕಾರವು ದಿಟ್ಟ ನಿರ್ಧಾರ ಕೈಗೊಳ್ಳುತ್ತಲೇ ಬಂದಿತು. ಬಳಿಕ ರಾಜ್ಯ ಸರ್ಕಾರವೂ ಲಾಕ್‌ಡೌನ್‌ ಘೋಷಣೆಯ ನಿರ್ಧಾರ ಮಾಡಿತು. ಅಲ್ಲದೇ ಕೋವಿಡ್ ನಿಯಂತ್ರಣಕ್ಕೆ ಗುಳೆ ಹೋಗಿದ್ದವರು ಪುನಃ ತವರು ಜಿಲ್ಲೆ, ಊರುಗಳಿಗೆ ತೆರಳಿ ಎನ್ನುವ ಸಂದೇಶ ನೀಡಿತು. ಬರೊಬ್ಬರಿ ಎರಡು ತಿಂಗಳ ಲಾಕ್‌ ಡೌನ್‌ ಜಾರಿಯಾದ ಬಳಿ ಜಿಲ್ಲೆಯಿಂದ ದೂರದ ಊರುಗಳಿಗೆ ಗುಳೆ ಹೋಗಿದ್ದ ಸಾವಿರಾರು ಜನರು ಸಂಕಷ್ಟ ಎದುರಿಸಿ ಪುನಃ ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಕೆಲವು ಕಾರ್ಮಿಕರಿಗೆ ಸರ್ಕಾರ ಬಸ್‌ ವ್ಯವಸ್ಥೆ ಮಾಡಿದರೆ, ಇನ್ನೂ ಕೆಲ ಕಾರ್ಮಿಕರ ಬಗ್ಗೆ ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಅವರು ನಿಗಾ ವಹಿಸಿ ಆಯಾ ಜಿಲ್ಲೆಗಳಲ್ಲಿಯೇ ವಸತಿ ವ್ಯವಸ್ಥೆ ಮಾಡಿದ್ದರು. ಆದರೂ ಜನತೆ ಅನ್ಯ ಮಾರ್ಗಗಳ ಮೂಲಕ ಜಿಲ್ಲೆಗೆ ಆಗಮಿಸಿದ್ದಾರೆ.

3,03,675 ಜನರಿಗೆ ಸ್ಕ್ರೀನಿಂಗ್‌: ಜಿಲ್ಲಾಡಳಿತವು ವಿವಿಧ ಮಾರ್ಗಗಳ ಮೂಲಕ ಜಿಲ್ಲೆ ಪ್ರವೇಶಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸಿ ಕೋವಿಡ್ ಬಾರದಂತೆ ನೋಡಿಕೊಳ್ಳಲು ಪ್ರತಿಯೊಬ್ಬರನ್ನೂ ಸ್ಕ್ರೀನಿಂಗ್‌ ಮಾಡಿದೆ. ಲಾಕ್‌ ಡೌನ್‌ಯಿಂದ ಈ ವರೆಗೂ 3,03,675 ಜನರ ಸ್ಕ್ರೀನಿಂಗ್‌ ಮಾಡಿದೆ. ಈ ಪೈಕಿ ರೈಲ್ವೇ ನಿಲ್ದಾಣದಲ್ಲಿ 894 ಜನ, ಬಸ್‌ ನಿಲ್ದಾಣದಲ್ಲಿ 7279 ಜನ, ಚೆಕ್‌ಪೋಸ್ಟ್ ನಲ್ಲಿ 1,31,329 ಜನ, ಕಂಟೇನ್ಮೆಂಟ್‌ ಝೋನ್‌ನಿಂದ ಬಂದವರ 9760 ಜನ, ಇತರೆ ಏರಿಯಾದಿಂದ ಬಂದ 1,02,419 ಜನ, ವಲಸೆ ಕಾರ್ಮಿಕರು 51,994 ಜನರು ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಅವರೆಲ್ಲರನ್ನೂ ಜಿಲ್ಲಾಡಳಿತವು ಸ್ಕ್ರೀನಿಂಗ್‌ ಮಾಡಿದೆಯಲ್ಲದೇ ಅವರೆಲ್ಲರನ್ನೂ ಕ್ವಾರಂಟೈನ್‌ ವ್ಯವಸ್ಥೆ ಮಾಡಿದೆ. ಬಹುಪಾಲು ಇವರಲ್ಲಿ ಕ್ವಾರಂಟೈನ್‌ ಅವಧಿಯನ್ನೂ ಪೂರೈಸಿದ್ದಾರೆ.

5,281 ಜನರ ವರದಿ ನೆಗಟಿವ್‌: ಇನ್ನೂ ಗುಳೆ ಹೋಗಿ ಜಿಲ್ಲೆಗೆ ವಾಪಸ್ಸಾದ, ಅನ್ಯ ಜಿಲ್ಲೆ, ರಾಜ್ಯಗಳಿಂದ ಬಂದ ಜನರ ಪೈಕಿ 5449 ಜನರ ಗಂಟಲು ದ್ರವ ಸಂಗ್ರಹ ಮಾಡಿರುವ ಜಿಲ್ಲಾಡಳಿತವು ಪ್ರಯೋಗಾಲಯಕ್ಕೆ ರವಾನೆ ಮಾಡಿದೆ. ಇವರಲ್ಲಿ 5,281 ಜನರ ವರದಿ ನೆಗೆಟಿವ್‌ ಬಂದಿವೆ. ಇನ್ನೂ 12 ಜನರಿಗೆ ಪಾಸಿಟಿವ್‌ ಕೇಸ್‌ ಬಂದಿದ್ದು, ಇವರಲ್ಲಿ 4 ಜನ ಈಗಾಗಲೇ ಗುಣಮುಖರಾಗಿ ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 156 ಜನರ ವರದಿ ಬರುವುದು ಬಾಕಿಯಿದೆ.

ಒಟ್ಟಿನಲ್ಲಿ ಜಿಲ್ಲಾಡಳಿತವು ಪ್ರತಿಯೊಬ್ಬರ ಮೇಲೂ ನಿಗಾ ವಹಿಸಿದ್ದು, ಆರೋಗ್ಯ ಇಲಾಖೆಯಂತೂ ಹಗಲು-ರಾತ್ರಿ ಕೆಲಸದಲ್ಲಿ ತಲ್ಲೀನವಾಗಿವೆ. ಕೋವಿಡ್ ಸೋಂಕು ದೃಢಪಡುತ್ತಿದ್ದಂತೆ ಆ ಕ್ಷೇತ್ರವನ್ನು ಸೀಲ್‌ ಡೌನ್‌ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಆಸ್ಪತ್ರೆಯಲ್ಲಿ ವೈದ್ಯರ ತಂಡವೂ ಸೋಂಕಿತರಿಗೆ ಚಿಕಿತ್ಸೆ ನೀಡಿ ಅವರನ್ನು ಗುಣಮುಖರನ್ನಾಗಿ ಮಾಡುತ್ತಿದೆ.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.