ರೈತರ ಆದಾಯ ದ್ವಿಗುಣಕ್ಕೆ ಒಪ್ಪಂದ
Team Udayavani, Jun 12, 2020, 6:53 AM IST
ಕೋಲಾರ: ಪ್ರಧಾನಿ ಮೋದಿ 2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ರಮಕ್ಕೆ ಪೂರಕವಾಗಿ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ-ಆಪರೇಟಿವ್ ಲಿಮಿಟೆಡ್ ಮತ್ತು ಭಾರತೀಯ ಕೃಷಿ ಅನುಸಂಧಾನ ಪರಿಷತ್ ಪರಸ್ಪರ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಇಫ್ಕೋ ಮಾರಾಟ ವಸ್ಥಾಪಕ ಡಾ.ಸಿ.ನಾರಾಯಣಸ್ವಾಮಿ ತಿಳಿಸಿದರು.
ನಗರದ ಟಿಎಪಿಸಿಎಂಎಸ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಫ್ಕೋ ಸಂಸ್ಥೆಯು ನ್ಯಾನೋ ಕೃಷಿ ಪರಿಕರಗಳ ಪರಸ್ಪರ ಸಂಶೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನವನ್ನು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ನಡೆಸುವುದು ಇದರ ಪ್ರಮುಖ ಅಂಶವಾಗಿದೆ ಎಂದು ತಿಳಿಸಿದರು.
ರೈತರಿಗೆ ಅನುಕೂಲ: ಈ ಒಪ್ಪಂದದಿಂದಾಗಿ ಕೃಷಿ ವಿಜ್ಞಾನ ಕೇಂದ್ರಗಳಿಗೆ ಸುಧಾರಿತ ಕೃಷಿ ತಂತ್ರಜ್ಞಾನವನ್ನು ತರಬೇತಿ, ಕೇತ್ರ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣಗಳ ಮೂಲಕ ರೈತರಿಗೆ ತಲುಪಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಹತ್ವದ ಕೊಡುಗೆ: ಈ ಒಪ್ಪಂದದ ಕುರಿತು ನಮ್ಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಎಸ್. ಆವಸ್ತಿ, ಸಂಶೋಧನೆ ಕೃಷಿ ಉದ್ಯಮಕ್ಕೆ ಪೂರಕವಾಗಿದ್ದು, ಇದು ಸುಧಾರಿತ ಕೃಷಿ ತಂತ್ರಜ್ಞಾನವನ್ನು ಪರೀಕ್ಷಾ ಪ್ರಯೋಗಾಲಯದಿಂದ ರೈತರ ಹೊಲಗಳಿಗೆ ತಲುಪಿಸಲು ಎರಡು ಸಂಸ್ಥೆಗಳ ಮಹತ್ವದ ಕೊಡುಗೆ ಎಂದು ಬಣ್ಣಿಸಿದ್ದಾರೆ ಎಂದು ತಿಳಿಸಿದರು.
ದ್ವಿಪಕ್ಷೀಯ ಒಪ್ಪಂದದಿಂದ ಅನುಕೂಲ: ಅತಿ ಹೆಚ್ಚು ರಸಾಯನಿಕಗಳ ಬಳಕೆಯಿಂದ ಆಗುತ್ತಿರುವ ತೊಂದರೆ ತಪ್ಪಿಸಲು ಇಫ್ಕೋ ಸಂಸ್ಥೆ ಮಣ್ಣಿನಲ್ಲಿರುವ ರಸಾಯನಿ ಕವನ್ನು ನಿರ್ಮೂಲನೆ ಮಾಡಲು ಪಣತೊಟ್ಟಿದೆ, ಈ ದ್ವಿಪಕ್ಷೀಯ ಒಪ್ಪಂದದಿಂದಾಗಿ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.
ಐತಿಹಾಸಿಕ ಕ್ಷಣ: ಈ ಒಪ್ಪಂದ ಪ್ರಧಾನಿ ಮೋದಿ ಅವರ 2022ರ ರೈತರ ಆದಾಯ ದ್ವಿಗುಣ ಕಾರ್ಯಕ್ರಮಕ್ಕೆ ಪೂರಕವಾಗಿದ್ದು, ಈ ಒಪ್ಪಂದ ಒಂದು ಐತಿಹಾಸಿಕ ಕ್ಷಣ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಮಹಾನಿರ್ದೇಶಕ ಡಾ.ಮೊಹಪಾತ್ರ ತಿಳಿಸಿದರು ಎಂದು ವಿವರಿಸಿದರು.
ಈ ದ್ವಿಪಕ್ಷೀಯ ಒಪ್ಪಂದದಿಂದಾಗಿ ಕೃಷಿ ರಾಸಾಯನಿಕ ರಸಗೊಬ್ಬರಗಳ ಬಳಕೆಯನ್ನು ಶೇ.15 ರಷ್ಟು ಕಡಿಮೆ ಮಾಡುವುದರಿಂದ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ತಿಳಿಸಿ, ಇಫ್ಕೋ ಸಂಸ್ಥೆಯ ಮಾರಾಟ ನಿರ್ದೇಶಕ ಯೋಗೇಂದ್ರ ಕುಮಾರ್, ಅನುಸಂಧಾನ ಪರಿಷತ್‌ನ ಉಪಮಹಾ ನಿರ್ದೇಶಕ ಡಾ.ಎ.ಕೆ.ಸಿಂಗ್, ಭಾರತ ಸರ್ಕಾರದ ಕೃಷಿ ನಿರ್ದೇಶಕ ಡಾ.ಮಲ್ಹೋತ್ರ ಮತ್ತಿತರರು ಸಹಿ ಹಾಕಿದ್ದಾರೆ ಎಂದರು. ಈ ಸಂದರ್ಭದಲ್ಲಿ ಇಫ್ಕೋ ಸಂಸ್ಥೆಯ ಬೆಂಗಳೂರು ವಿಭಾಗದ ಎಚ್.ಎಂ.ಸತೀಶ್ ಕುಮಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.