ಕೋವಿಡ್ 19 ಸೋಂಕಿತ ಬಾಲಕಿ ಡಿಸ್ಚಾರ್ಜ್
Team Udayavani, Jun 12, 2020, 7:13 AM IST
ಚಿಕ್ಕಬಳ್ಳಾಪುರ: ಕೋವಿಡ್ 19 ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದು ವರ್ಷದ ಬಾಲಕಿ ಗುರುವಾರ ಸಂಪೂರ್ಣ ಚೇತರಿಕೆ ಕಂಡು ಡಿಸ್ಚಾರ್ಜ್ ಆದ ಸಂತಸ ಪೋಷಕರಲ್ಲಿ ಒಂದೆಡೆ, ಮತ್ತೂಂದೆಡೆ ತೂಕದಲ್ಲಿ ಹೆಚ್ಚಳವಾಗಿ ಗಮನ ಸೆಳೆದಿದ್ದಾಳೆ.
ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಸೋಂಕಿತ ಬಾಲಕಿಯನ್ನು ಕೋವಿಡ್-19 ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಮೇ 25 ರಂದು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕಿ 7.4 ಕೆ.ಜಿ.ತೂಕ ಇದ್ದಳು. ಇದೀಗ ಕ್ವಾರಂಟೈನ್ ಮುಗಿದು ಎರಡು ಬಾರಿ ನಡೆಸಿದ ಗಂಟಲು ದ್ರವದ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, ಗುರುವಾರ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾದ ಸಂದರ್ಭದಲ್ಲಿ ಬಾಲಕಿಯ ತೂಕ 8.7 ಕೆ.ಜಿ.ಗೆ ಹೆಚ್ಚಳ ಕಂಡಿದೆ. ಸಾಮಾನ್ಯವಾಗಿ ಯಾವುದೇ ವ್ಯಕ್ತಿ ಅಥವಾ ಮಕ್ಕಳು ಸೋಂಕಿಗೆ ತುತ್ತಾದರೆ ಸೊರಗುವುದು ಸಾಮಾನ್ಯ.
ಆದರೆ ಈ ಬಾಲಕಿಯ ತೂಕದಲ್ಲಿ ಹೆಚ್ಚಳ ಆಗಿರುವುದು ಪೋಷಕರ ಸಂತಸಕ್ಕೆ ಕಾರಣವಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆ ಜಿಲ್ಲಾಸ್ಪತ್ರೆಯ ತಜ್ಞರು, ವೈದ್ಯಕೀಯ ಸಿಬ್ಬಂದಿ ಉಪಸ್ಥಿತಿ ಇದ್ದು ಬಾಲಕಿಗೆ ಚಪ್ಪಾಳೆ ತಟ್ಟಿ ಶುಭ ಕೋರಿದರು. ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞರ ಸಲಹೆ, ಸೂಚನೆಯಂತೆ ಬಾಲಕಿಗೆ ಅಗತ್ಯ ಪೌಷ್ಟಿಕ ಆಹಾರ ನೀಡಲಾಗಿದ್ದರಿಂದ ತೂಕದಲ್ಲಿ ಹೆಚ್ಚಳ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.