ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸಿ
Team Udayavani, Jun 12, 2020, 8:33 AM IST
ಹೊಳಲ್ಕೆರೆ: ಅಭಿವೃದ್ಧಿ ಹೆಸರಲ್ಲಿ ತಾಲೂಕಿನ ಕೃಷಿ ಭೂಮಿ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ನೀಡಿರುವ ಪರವಾನಗಿಯನ್ನು ತಕ್ಷಣ ರದ್ದುಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ರೈತ ಸಂಘದ ವಿವಿಧ ಬಣಗಳ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ತಾಲೂಕು ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಹಮ್ಮಿಕೊಂಡಿದ್ದ ಜಿಲ್ಲಾ ಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಪಾದಯಾತ್ರೆಯನ್ನು ತಾಲೂಕು ಆಡಳಿತ ತಡೆಯಿತು. ಹಾಗಾಗಿ ಪಟ್ಟಣದ ಗಣಪತಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲಾಯಿತು. ಟಿ. ಎಮ್ಮಿಗನೂರು, ಆಡನೂರು, ಮೇಕೆನಹಟ್ಟಿ, ಅರಸನಘಟ್ಟ, ಪಾಡಿಗಟ್ಟೆ, ಮದ್ದೆನಹಳ್ಳಿ, ಅಪ್ಪರಸನಹಳ್ಳಿ, ದಾಸರಹಳ್ಳಿ, ಚನ್ನಪಟ್ಟಣ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಕೃಷಿ ಕ್ಷೇತ್ರದ ಮೇಲೆ ವ್ಯತಿರಿಕ್ತ ಪ್ರಭಾವ ಬೀರುತ್ತಿದೆ. ಸ್ಫೋಟಕದಿಂದ ಕೆರೆ ಕಟ್ಟೆ ಏರಿಗಳು, ಮನೆಗಳ ಗೋಡೆಗಳು ಶಿಥಿಲಗೊಳ್ಳುತ್ತಿವೆ. ಹಾಗಾಗಿ ಕಲ್ಲು ಗಣಿಗಾರಿಕೆಯನ್ನು ರದ್ದು ಗೊಳಿಸಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಕೆ. ನಾಗರಾಜ್ ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಕೂಡಲೇ ತಹಶೀಲ್ದಾರರನ್ನು ಅಮಾನತು ಮಾಡಬೇಕೆಂ+ದು ಆಗ್ರಹಿಸಿದರು.
ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಬಣದ ರಾಜ್ಯ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ, ತಾಲೂಕು ಅಧ್ಯಕ್ಷ ಬಸವರಾಜಪ್ಪ, ನಗರ ಘಟಕದ ಅಧ್ಯಕ್ಷ ಲೋಕೇಶ್, ಕಾರ್ಯದರ್ಶಿ ಅಜಯ್ ಇದ್ದರು. ರೈತ ಸಂಘದ ಪುಟ್ಟಣ್ಣಯ್ಯ ಬಣದ ತಾಲೂಕು ಅಧ್ಯಕ್ಷ ಡಿ. ಮಲ್ಲಿಕಾರ್ಜುನ್, ಗೌರವಾಧ್ಯಕ್ಷ ಕೆ. ರೇವಣಸಿದ್ದಪ್ಪ, ಕಾರ್ಯದರ್ಶಿ ಕೆ. ಮೋಹನ್‌ಕುಮಾರ್ ಪ್ರತ್ಯೇಕವಾಗಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.