ಉಪನಗರ ರೈಲು ಸೇವೆ ಆರಂಭಿಸಿ: ಠಾಕ್ರೆ ಆಗ್ರಹ

Team Udayavani, Jun 12, 2020, 8:52 AM IST

ಉಪನಗರ ರೈಲು ಸೇವೆ ಆರಂಭಿಸಿ: ಠಾಕ್ರೆ ಆಗ್ರಹ

ಮುಂಬಯಿ, ಜೂ. 11: ಅಗತ್ಯ ಸೇವೆಗಳ ಕರ್ತವ್ಯದಲ್ಲಿರುವ ಸಿಬಂದಿ ಸಂಚಾರಕ್ಕಾಗಿ ಮುಂಬಯಿಯಲ್ಲಿ ಉಪನಗರ ರೈಲು ಸೇವೆಗಳನ್ನು ಅರಂಭಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಒತ್ತಾಯಿಸಿದ್ದಾರೆ.

ಪ್ರಸ್ತುತ ಲಾಕ್‌ಡೌನ್‌ನ ಹಂತವು ಜೂನ್‌ 30ಕ್ಕೆ ಕೊನೆಗೊಳ್ಳುತ್ತದೆ. ಮುಂಬಯಿಯಲ್ಲಿ ಉಪನಗರ ರೈಲು ಸೇವೆಗಳು ಪುನರಾರಂಭಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ. ಈಗಲೂ ಸಹ ಅನೇಕರಿಗೆ ಸಾರಿಗೆ ಕೊರತೆಯಿಂದಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ರೈಲು ಸೇವೆಗಳನ್ನು ಕೇಂದ್ರದಿಂದ ಪುನರಾರಂಭಿಸುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಆಸ್ಪತ್ರೆಯ ಸಿಬಂದಿ ಮತ್ತು ಅಗತ್ಯ ಮತ್ತು ತುರ್ತು ಸೇವೆಗಳಲ್ಲಿ ತೊಡಗಿರುವ ಇತರ ಕಾರ್ಮಿಕರು ದೂರದ ಪ್ರದೇಶಗಳಿಂದ ಮುಂಬಯಿಗೆ ಪ್ರಯಾಣಿಸುವುದು ಕಷ್ಟಕರ ವಾಗಿದೆ. ಅವರಲ್ಲಿ ಕೆಲವರು ಕರ್ತವ್ಯಕ್ಕೆ ವರದಿ ಮಾಡಲು ಸಹ ಸಾಧ್ಯವಾಗುವುದಿಲ್ಲ. ಆದ್ದರಿಂದ ಲೋಕಲ್‌ ರೈಲುಗಳನ್ನು ಪ್ರಾರಂಭಿಸುವುದು ಬಹಳ ಮುಖ್ಯವಾಗಿದೆ ಎಂದು ಠಾಕ್ರೆ ಹೇಳಿದರು.

ಸುಮಾರು ಒಂದು ತಿಂಗಳ ಹಿಂದೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಉಪನಗರ ರೈಲು ಸೇವೆಗಳನ್ನು ಪುನರಾರಂಭಿಸುವ ವಿಷಯವನ್ನು ಮೊದಲು ಎತ್ತಿದ್ದೇನೆ ಎಂದು ಸಿಎಂ ಉದ್ಧವ್‌ ಹೇಳಿದರು.

ಮುಂಬಯಿ ಜನತೆಯ ಉತ್ತಮ ಆರೋಗ್ಯಕ್ಕಾಗಿ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಅನುಮತಿಸಲಾಗಿದೆ. ಅದನ್ನು ಹಾಳು ಮಾಡಿಕೊಳ್ಳಬಾರದು ಎಂದು ಸಿಎಂ ಕಿವಿ ಮಾತು ಹೇಳಿದರು, ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನರು ರಸ್ತೆಗಳಲ್ಲಿ ಜನಸಂದಣಿಯನ್ನು ವರದಿ ಮಾಡಿದ್ದಾರೆ. ಜನರು ಸರಕಾರದ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಆಲಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದರು.

ಸ್ಥಳೀಯರಿಗೆ ಉದ್ಯೋಗ ಖಾತ್ರಿ ಮೂಲಸೌಕರ್ಯ ಯೋಜನೆಗಳಲ್ಲಿ ಸ್ಥಳೀಯರಿಗೆ ಕೌಶಲ ಆಧಾರಿತ ತರಬೇತಿ ಮತ್ತು ಉದ್ಯೋಗವನ್ನು ಖಾತ್ರಿಪಡಿಸಿಕೊಳ್ಳಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಮಿಕರ ಕೊರತೆಯಿಂದಾಗಿ ಮೆಟ್ರೊ ರೈಲಿನಂತಹ ಮೂಲಸೌಕರ್ಯ ಯೋಜನೆಗಳನ್ನು ನಿಲ್ಲಿಸ ಬಾರದು. ಮಣ್ಣಿನ ಮಕ್ಕಳಿಗೆ ಈ ಕೆಲಸಗಳಿಗೆ ಅಗತ್ಯವಾದ ತರಬೇತಿ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಮುಂಬಯಿ, ಪುಣೆ ಮತ್ತು ನಾಗಪುರ ಮೆಟ್ರೋ ಯೋಜನೆಗಳು, ಮುಂಬಯಿ ಟ್ರಾನ್ಸ್‌ ಹಾರ್ಬರ್‌ ಲಿಂಕ್‌ ಮತ್ತು ಇತರ ದೊಡ್ಡ ಉದ್ಯಮಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಂಎಂಆರ್‌ ಹೊರತುಪಡಿಸಿ ರಾಜ್ಯದ ಹಲವಾರು ಸ್ಥಳಗಳಲ್ಲಿ ಕೋವಿಡ್ ವೈರಸ್‌ ಪ್ರೇರಿತ ಲಾಕ್‌ಡೌನ್‌ ಅನ್ನು ಸರಾಗಗೊಳಿಸಲಾಗಿದೆ ಮತ್ತು ಕೈಗಾರಿಕಾ ಚಟುವಟಿಕೆಗಳು ಪುನರಾರಂಭ ಗೊಂಡಿದೆ. ಆದರೆ ಕಾರ್ಮಿಕರ ಕೊರತೆಯಿದೆ ಎಂದು ಅವರು ಹೇಳಿದರು. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ಸ್ಥಳಗಳಿಗೆ ಹಿಂದಿರುಗಿದ್ದಾರೆ. ಅವರು ಹಿಂತಿರುಗುವವರೆಗೂ ಯೋಜನೆಗಳು ತೊಂದರೆ ಅನುಭವಿಸಬಾರದು ಎಂದು ಮುಖ್ಯಮಂತ್ರಿ ಹೇಳಿದರು, ಉದ್ಯೋಗಗಳಲ್ಲಿ ಸ್ಥಳೀಯ ಕಾರ್ಮಿಕರನ್ನು ನಿಯೋಜಿಸಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.