ಲಾಕ್‌ಡೌನ್ ವೇಳೆ 22 ರಸ್ತೆ ಅಪಘಾತ
Team Udayavani, Jun 12, 2020, 1:04 PM IST
ಬಾಗಲಕೋಟೆ: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಸಮಯದಲ್ಲಿಯೂ ಜಿಲ್ಲೆಯಾದ್ಯಂತ 22 ಮಾರಣಾಂತಿಕ ಅಪಘಾತ ಪ್ರಕರಣ ದಾಖಲಾಗಿದ್ದು, ಪೊಲೀಸ್, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳು ಸ್ವಯಂ ಪ್ರೇರಿತವಾಗಿ ಅಪಘಾತ ತಡೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ರಸ್ತೆ ಸರಕ್ಷತಾ ಸಪ್ತಾಹ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜನವರಿ 20ರಿಂದ ಮಾ. 20ರವರೆಗೆ 97 ಮಾರಣಾಂತಿಕ ಅಪಘಾತ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಏಪ್ರಿಲ್ ಮತ್ತು ಮೇ ಮಾಹೆಗಳ ಲಾಕ್‌ಡೌನ್ ಸಮಯದಲ್ಲಿಯೂ ಸಹ 22 ಮಾರಣಾಂತಿಕ ಅಪಘಾತ ಪ್ರಕರಣಗಳು ದಾಖಲಾಗಿರುವುದು ವಿಷಾದಕರ ಎಂದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಚರಿಸುವ ಭಾರಿ ಗಾತ್ರದ ವಾಹನಗಳು ಮರಳು, ಜೆಲ್ಲಿಕಲ್ಲು ಹಾಗೂ ಅದಿರು ಸಾಗಿಸುತ್ತಿರುವ ವಾಹನಗಳು ಕಡ್ಡಾಯವಾಗಿ ರಿಪ್ಲೇಕ್ಟರ್ ಅಳವಡಿಸಬೇಕು. ಸ್ಪೀಡ್ ಗವರ್ನರ್ ಹೊಂದಿರತಕ್ಕದ್ದು. ಟಾರ್ಪಾಲ್ ಹೊದಿಕೆ ಹೊಂದಿರುವ ಬಗ್ಗೆ ವಿಶೇಷ ತನಿಖಾ ಕಾರ್ಯ ಕೈಗೊಳ್ಳಬೇಕು. ರಾಜ್ಯ ರಸ್ತೆ ಪ್ರಾಧಿಕಾರದ ನಿರ್ದೇಶನದಂತೆ ಗಂಭೀರ ಗಾಯ, ಮರಣಗಳು ಸಂಭವಿಸಿರುವ ಪ್ರತಿ ರಸ್ತೆ ಅಪಘಾತಗಳನ್ನು ವೈಜ್ಞಾನಿಕ ವಾಗಿ ತನಿಖೆ ನಡೆಸಲು ತಿಳಿಸಿದರು. ವೈಜ್ಞಾನಿಕ ತನಿಖೆಗೆ ಲೋಕೋಪಯೋಗಿ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳನ್ನು ಒಳಗೊಂಡ ತಾಲೂಕುವಾರು ತಂಡ ರಚಿಸಲು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಕಳೆದ ಸಭೆಯ ನಡಾವಳಿಗೆ ಅನುಸರಣಾ ವರದಿ ಮಂಡಿಸಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಸಂಚಾರಿ ನಿಯಂತ್ರಣಾಧಿಕಾರಿ ಪಡಿಯಪ್ಪ ಮೈತ್ರಿ, ಬಾಗಲಕೋಟೆ ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ, ರಬಕವಿ-ಬನಹಟ್ಟಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ಮುಂತಾದವರು ಉಪಸ್ಥಿತರಿದ್ದರು.
ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮಾತ್ರ ಮೃತಪಟ್ಟಿದ್ದು ನೋಡಿದರೆ ಕೋವಿಡ್‌ಕ್ಕಿಂತ ಹೆಚ್ಚುವಾಹನಗಳ ಅಪಘಾತಗಳೇ ಹೆಚ್ಚಿನ ಪ್ರಮಾಣದಲ್ಲಿ ಆಗಿರುವುದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಸ್ವಯಂ ಪ್ರೇರಿತರಾಗಿ ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳುವ ಅಗತ್ಯವಿದೆ. – ಕ್ಯಾಪ್ಟನ್ ಡಾ|ಕೆ. ರಾಜೇಂದ್ರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.