ಬಾಂಬ್ ಪ್ರಕರಣ : ಆರೋಪ ಪಟ್ಟಿ ಸಲ್ಲಿಕೆ
Team Udayavani, Jun 12, 2020, 11:21 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದ ಜನವರಿಯಲ್ಲಿ ಆರೋಪಿ ಆದಿತ್ಯ ರಾವ್ ಬಾಂಬ್ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಯನ್ನು ಗುರುವಾರ ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ತನಿಖಾ ಪ್ರಕ್ರಿಯೆ ಎಪ್ರಿಲ್‌ನಲ್ಲಿ ಮುಕ್ತಾಯಗೊಂಡು 700 ಪುಟಗಳ ಆರೋಪ ಪಟ್ಟಿಯನ್ನು ರಾಜ್ಯ ಸರಕಾರದ ಅನುಮತಿ ಗಾಗಿ ಕಳುಹಿಸಲಾಗಿತ್ತು. ಇದೀಗ ರಾಜ್ಯ ಸರಕಾರದ ಗೃಹ ಇಲಾಖೆಯ ಕಾರ್ಯದರ್ಶಿಗಳಿಂದ ಪೂರ್ವಾನುಮತಿ ಪತ್ರ ಬಂದಿದ್ದು, ಅದರಂತೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತನಿಖಾಧಿಕಾರಿ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ ಮಾಹಿತಿ ನೀಡಿದ್ದಾರೆ.
ಆದಿತ್ಯ ರಾವ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಯನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಆರೋಪಿಯು ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಆತ ಇರಿಸಿದ್ದ ಬ್ಯಾಗಿನಲ್ಲಿದ್ದ ವಸ್ತುಗಳು ಸ್ಫೋಟಕಗಳೇ ಆಗಿವೆ ಎನ್ನುವುದು ಎಫ್‌ಎಸ್‌ಎಲ್ ಟೆಸ್ಟ್‌ನಿಂದ ಸಾಬೀತಾಗಿದೆ ಎಂಬಿತ್ಯಾದಿ ಪ್ರಮುಖ ಸಂಗತಿಗಳು ಆರೋಪ ಪಟ್ಟಿಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.