“ಚೀನದಿಂದ ಕೋವಿಡ್ ಬಗ್ಗೆ ಸುಳ್ಳು ಮಾಹಿತಿ ಪ್ರಚಾರ’
Team Udayavani, Jun 12, 2020, 2:27 PM IST
ಸಾಂದರ್ಭಿಕ ಚಿತ್ರ
ಬ್ರಸೆಲ್ಸ್: ಚೀನ ದೇಶ ಕೋವಿಡ್ ಬಗ್ಗೆ ಮಾಹಿತಿಗಳನ್ನು ಮುಚ್ಚಿಡುತ್ತಿದೆ ಎಂದು ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ದೂಷಿಸಿದ್ದರು. ಜತೆಗೆ ಹಲವು ದೇಶಗಳೂ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲೀಗ ಐರೋಪ್ಯ ಒಕ್ಕೂಟವೇ ಚೀನವನ್ನು ದೂಷಿಸಿದ್ದು, ತಪ್ಪು ಮಾಹಿತಿಗಳದ್ದೇ ಅಲೆಯನ್ನು ತೇಲಿಬಿಟ್ಟಿದೆ ಎಂದು ಹೇಳಿದೆ.
ಇದರೊಂದಿಗೆ ಚೀನವು ಕೋವಿಡ್ ಸಾಂಕ್ರಾಮಿಕ ಕಾಯಿಲೆ ಹರಡಿದ ಸಂದರ್ಭದಲ್ಲಿ ಸುಳ್ಳು ಮಾಹಿತಿಯ ವ್ಯವಸ್ಥಿತ ಪ್ರಚಾರ ಮತ್ತು ಇನ್ನೊಬ್ಬರ ಮೇಲೆ ಪ್ರಭಾವ ಬೀರುವ ಕಾರ್ಯಾಚರಣೆಗಳನ್ನು ನಡೆಸಿದೆ ಎಂದು ದೂರಿದೆ. ಐರೋಪ್ಯ ಒಕ್ಕೂಟದ ಈ ಬಹಿರಂಗ ಅಸಮಾಧಾನದ ಬಗ್ಗೆ ದಿ ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ. ಎಪ್ರಿಲ್ ತಿಂಗಳಲ್ಲಿ ಫ್ರಾನ್ಸ್‌ನ ರಾಜಕಾರಣಿಗಳು ಚೀನದ ವರ್ತನೆ ಬಗ್ಗೆ ಆಕ್ಷೇಪಿಸಿದ್ದು , ಇದಕ್ಕೆ ಚೀನದ ರಾಯಭಾರ ಕಚೇರಿಯೂ ಆಕ್ಷೇಪಾರ್ಹವಾಗಿ ವರ್ತಿಸಿದ್ದನ್ನು ಪತ್ರಿಕೆ ವರದಿ ಮಾಡಿದೆ.
ಅಲ್ಲದೇ ದೊಡ್ಡ ಮಟ್ಟದಲ್ಲಿ ಮಾಹಿತಿಗಳನ್ನು ನೀಡದೆ ಮುಚ್ಚಿಡಲಾಗಿತ್ತು. ಮಾಹಿತಿ ನೀಡದೆ ಬೀಜಿಂಗ್ ಕೂಡ ಆಕ್ರಮಣಕಾರಿಯಾಗಿ ನಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಸಾಮಾಜಿಕ ಜಾಲತಾಣಗಳಲ್ಲೂ ಸುಳ್ಳು ಮಾಹಿತಿಗಳೇ ತುಂಬಿದ್ದರಿಂದ ನೈಜ ವಿಚಾರ ಜನರು ತಿಳಿಯುವಲ್ಲಿ ಕಷ್ಟವಾಗಿದೆ ಎಂದು ಹೇಳಲಾಗಿದೆ.
3 ವರ್ಷದಲ್ಲೇ ಈ ಬಾರಿ ರಷ್ಯಾದಲ್ಲಿ ಹೆಚ್ಚು ಸಾವು ಹಿಂದಿನ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ರಷ್ಯಾದಲ್ಲಿ ಕಳೆದ ಮೇ ತಿಂಗಳಲ್ಲಿ ಶೇ. 57ರಷ್ಟು ಹೆಚ್ಚು ಸಾವು ಸಂಭವಿಸಿದೆ ಎಂದು ಅಲ್ಲಿನ ರೇಡಿಯೋವೊಂದು ವರದಿ ಮಾಡಿದೆ.
ಈ ನಗರದಲ್ಲಿ ಮೇ ತಿಂಗಳಲ್ಲಿ ಕೋವಿಡ್ ದಿಂದಾಗಿ ಸಾವಿಗೀಡಾದರೆಂದು ಸರಕಾರ ಅಧಿಕೃತವಾಗಿ ಘೋಷಿಸಿದ್ದಕ್ಕಿಂತ ಎರಡು ಪಟ್ಟು ಸಾವು ಸಂಭವಿಸಿರಬಹುದು ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.