ತುರ್ತು ಸ್ಪಂದನೆಗೆ ಕೋಟ ಸೂಚನೆ
ಮಳೆಗಾಲ ಮುನ್ನೆಚ್ಚರಿಕೆ ಕ್ರಮ ಪರಿಶೀಲನ ಸಭೆ
Team Udayavani, Jun 13, 2020, 5:36 AM IST
ಮಹಾನಗರ: ಕಳೆದ ಬಾರಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಆಗಿರುವ ಅನಾಹುತಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೆಚ್ಚಿನ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು. ಅಗತ್ಯ ಸಂದರ್ಭ ತುರ್ತಾಗಿ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ಪ್ರಾಕೃತಿಕ ವಿಕೋಪ ಎದುರಿಸುವ ಸಿದ್ಧತೆಗಳ ಕುರಿತಾಗಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮರ ತೆರವುಗೊಳಿಸಿ
ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಬೆಳ್ತಂಗಡಿ ತಾ|ನಲ್ಲಿ ನೀರಿನ ಪ್ರವಾಹಕ್ಕೆ ಕಿಂಡಿ ಅಣೆಕಟ್ಟು ಸಹಿತ ಸೇತುವೆಗಳಿಗೆ ಪಕ್ಕದ ಮರದ ದಿಮ್ಮಿಗಳು ಅಡ್ಡ ಬಿದ್ದು ಅಲ್ಲಿನ ಪ್ರದೇಶಗಳು ಜಲಾವೃತವಾಗುತ್ತವೆ. ಹಾಗಾಗಿ ಅರಣ್ಯ ಇಲಾಖೆ ಸೇತುವೆ ಪಕ್ಕದಲ್ಲಿರುವ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಭೂಕುಸಿತ ಸಮಸ್ಯೆ
ಶಿರಾಡಿ, ಸಂಪಾಜೆ, ಚಾರ್ಮಾಡಿ ಭಾಗಗಳಲ್ಲಿ ಭೂಕುಸಿತ ಸಂಭವಿಸುವುದರಿಂದ ಅಧಿಕಾರಿಗಳು ಸಿದ್ಧತೆ ಮಾಡಿ ಕೊಂಡಿರಬೇಕು. ನಿರ್ಲಕ್ಷ್ಯದಿಂದ ಅಪಾಯ ಎದುರಾದರೆ ಅಧಿಕಾರಿಗಳೇ ಜವಾಬ್ದಾರಿ ಯಾಗಿರುತ್ತಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಎಚ್ಚರಿಕೆ ನೀಡಿದರು.
ಪರಿಹಾರ ಕೇಂದ್ರ ಸಿದ್ಧತೆ
ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲಿದ್ದು, ಅತಿ ವೃಷ್ಠಿ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ಕೊಡಬೇಕು. ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೇಂದ್ರ ತೆರೆಯಲು ಸಮುದಾಯ ಭವನ, ದೊಡ್ಡ ಕಟ್ಟಡಗಳನ್ನು ಗುರುತಿಸಲಾಗಿದೆ. ಜಾನು ವಾರುಗಳಿಗೆ ಗೋಶಾಲೆ ತೆರೆಯಲು ಸೂಕ್ತ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಕಡಲ ಕಿನಾರೆಗಳಲ್ಲಿ ನಾಮಫಲಕ ಅಳವಡಿಸಿ ಗೃಹ ರಕ್ಷಕ ಸಿಬಂದಿ ನಿಯೋಜಿಸಲಾಗಿದೆ. ಕೃತ ನೆರೆಯುಂಟಾಗುವ ಪ್ರದೇಶ, ನದಿ ತೀರದ ಹಳ್ಳಿಗಳಲ್ಲಿ ತುರ್ತು ಪರಿಸ್ಥಿತಿ ಸಂದರ್ಭ ಜನರ ರಕ್ಷಣೆಗೆ ಬೋಟ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಲೋಕೋಪಯೋಗಿ ಇಲಾಖೆ ಮತ್ತು ಜಿ.ಪಂ. ಎಂಜಿನಿಯರಿಂಗ್ ಇಲಾಖೆಯವರು ಪರಸ್ಪರ ಸಮನ್ವಯದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದರು.
ತಾಲೂಕುವಾರು ನೋಡಲ್ ಅಧಿಕಾರಿಗಳ ನೇಮಕ
ಹವಾಮಾನ ವೈಪರಿತ್ಯದಿಂದಾಗಿ ದೋಣಿ ಮೂಲಕ ರಕ್ಷಣೆ ಮಾಡಲು ಸಾಧ್ಯವಾಗದೆ ಇದ್ದಲ್ಲಿ ಹೆಲಿಕಾಪ್ಟರ್ ಮೂಲಕ ಜನರನ್ನು ಸ್ಥಳಾಂತರಿಸುವ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿ ಯಿಂದ ಮಾಡಲಾಗುತ್ತದೆ. ನೆರೆಪೀಡಿತ ಹಾಗೂ ತಗ್ಗು ಪ್ರದೇಶಗಳ ಮತ್ತು ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ತಾಲೂಕುವಾರು ನೋಡಲ್ ಅಧಿಕಾರಿ ಗಳನ್ನು ನೇಮಿಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ಸಿಂಧೂ ರೂಪೇಶ್ ಅವರು ತಿಳಿಸಿದರು.
ತುರ್ತು ಸಂದರ್ಭ ಜಿಲ್ಲಾ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 1077/ 0824-2442590 ದಿನದ 24 ಗಂಟೆಗಳ ಕಾಲ ಕಾರ್ಯಚರಿಸುತ್ತದೆ.
ಜಿಲ್ಲೆಯ ಉಪ ವಿಭಾಗಾಧಿ ಕಾರಿಗಳ ಹಾಗೂ ಎಲ್ಲ ತಹ ಶೀಲ್ದಾರರ ಕಾರ್ಯಾಲಯದಲ್ಲಿ 24 ಗಂಟೆಗಳ ಕಾಲ ಸಿಬಂದಿ ನೇಮಿಸಲಾಗಿದೆ. ಜಿಲ್ಲಾ ಮಟ್ಟದ, ಉಪವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸಪ್ ಗ್ರೂಪ್ ರಚಿಸಲಾಗಿದೆ ಎಂದರು. ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಉಪಮೇಯರ್ ವೇದಾವತಿ ಉಪಸ್ಥಿತರಿದ್ದರು.
ನಿರ್ಲಕ್ಷಿಸಿ ದರೆ ಕಠಿನ ಕ್ರಮ
ರಾ.ಹೆ.ಯಲ್ಲಿ ಟ್ರಾಫಿಕ್ ಸಮಸ್ಯೆ, ಗುಡ್ಡ ಕುಸಿತ, ಅಪಾಯಕಾರಿ ಮರ ತೆರವು, ಚರಂಡಿ ಸಮಸ್ಯೆ, ವಿದ್ಯುತ್ ವ್ಯತ್ಯಯ ಮೊದಲಾದವುಗಳ ಬಗ್ಗೆ ಗಮನ ಹರಿಸಬೇಕು. ಗ್ರಾ.ಪಂ ಮಟ್ಟದಲ್ಲಿ ಪಿಡಿಒ, ನೋಡಲ್ ಅಧಿಕಾರಿಗಳೂ ಗಮನ ಹರಿಸಬೇಕು. ಅಧಿಕಾರಿಗಳು ಬೇಜವಾªರಿಯಿಂದ ವರ್ತಿಸಿದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು.
-ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.