ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸಲು ಆಗ್ರಹ
Team Udayavani, Jun 13, 2020, 4:59 AM IST
ಚಾಮರಾಜನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿ ಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ದ್ವಾರದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ, ಶಿಕ್ಷಣ ಸಚಿವರ ವಿರುದಟಛಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತ ನಾಡಿ, ದೇಶ, ರಾಜ್ಯದಲ್ಲಿ ದಿನ ದಿಂದ ದಿನಕ್ಕೆ ಕೋವಿಡ್ 19 ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ, ಶಿಕ್ಷಣ ಸಚಿವರು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಧೋರಣೆ ತಳೆದಿರುವುದು ಸರಿಯಲ್ಲ ಎಂದರು. ಈಗಾಗಲೇ ಒಬ್ಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೋವಿಡ್ 19 ಕಾಣಿಸಿಕೊಂಡಿದೆ.
ರಾಜ್ಯದಲ್ಲಿ 9 ಲಕ್ಷ ವಿದ್ಯಾರ್ಥಿಗಳಿದ್ದಾರೆ. 2 ಲಕ್ಷ ಶಿಕ್ಷಕರು ಹಾಗೂ ಇತರರು ಸೇರಿ ಒಟ್ಟು ಪರೀಕ್ಷೆ ಪಕ್ರಿಯೆಯಲ್ಲಿ 13 ಲಕ್ಷ ಮಂದಿ ಭಾಗವಹಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಕೋವಿಡ್ 19 ಸೋಂಕು ವಿದ್ಯಾರ್ಥಿಗಳಿಗೆ ಹರಡುವ ಸಾಧ್ಯತೆ ಇದ್ದು, ಪರೀಕ್ಷೆ ರದ್ದುಪಡಿಸುವು ದೇ ಸೂಕ್ತ. ಇಲ್ಲದಿದ್ದರೆ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಶಾ. ಮುರಳಿ, ಚಾ. ವೆಂ. ರಾಜ್ಗೊಪಾಲ್, ಚಾ.ಸೋಮನಾಯಕ, ನಿಜಧ್ವನಿ ಗೋವಿಂದ ರಾಜು, ಚಾ.ರಾ.ಕುಮಾರ್, ಆಟೋ ಮಹದೇವಸ್ವಾಮಿ, ದೊರೆ, ತಾಂಡ ವಮೂರ್ತಿ, ರಾಜಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.