ಜನ ಜಾಗೃತರಾದಾಗ ಕೋವಿಡ್ ನಿಂದ ಮುಕ್ತಿ


Team Udayavani, Jun 13, 2020, 6:32 AM IST

ಜನ ಜಾಗೃತರಾದಾಗ ಕೋವಿಡ್ ನಿಂದ ಮುಕ್ತಿ

ಭಟ್ಕಳ: ಕೋವಿಡ್ ನಿಂದ ಮುಕ್ತಿ ಪಡೆಯಲು ಲಾಕ್‌ಡೌನ್‌ ಮಾತ್ರ ಪರಿಹಾರವಾಗಲಾರದು, ಜನತೆ ಸ್ವಯಂ ಪ್ರೇರಿತರಾಗಿ ಜಾಗೃತರಾದಾಗ ಮಾತ್ರ ನಿಯಂತ್ರಣ ಸಾಧ್ಯ ಎಂದು ಡಿಸಿ ಡಾ| ಹರೀಶಕುಮಾರ್‌ ಹೇಳಿದರು.

ಅವರು ಇಲ್ಲಿನ ನ್ಯೂ ಇಂಗ್ಲಿಷ್‌ ಶಾಲಾ ಆವರಣದ ರಾಮನಾಥ ಶ್ಯಾನುಭಾಗ ಸಭಾ ಭವನದಲ್ಲಿ ಕೋವಿಡ್ ವಾರಿಯರ್ಸ್ ಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ನಾವು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದೇವೆ. ಎಲ್ಲಾ ಸೋಂಕಿತರನ್ನು ಗುಣಮುಖರಾಗಿ ಮರಳುವಂತೆ ಮಾಡಿದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣರಾದವರು ಜಿಲ್ಲೆಯ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಇತರರ ಸಹಕಾರ. ಮುಂದಿನ ದಿನಗಳಲ್ಲಿಯೂ ಕೂಡಾ ಕೋವಿಡ್ ಸೋಂಕು ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ ಎಂದರು.

ಕೋವಿಡ್ ಸೋಂಕಿನ ವಿಷಯದಲ್ಲಿ ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡಬೇಕಾಗುತ್ತದೆ. ನಿಯಮ ಪಾಲನೆ ಮಾಡದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಅನಿವಾರ್ಯ ಎಂದುbಹೇಳಿದರು.

ಸಹಾಯಕ ಆಯುಕ್ತ ಭರತ್‌ ಎಸ್‌., ಕೋವಿಡ್‌ -19 ಸಂದರ್ಭದಲ್ಲಿ ತಾಲೂಕಿನ ಗಲ್ಲಿಗಲ್ಲಿಗಳಲ್ಲಿ ಹೋಗಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಕೂಡಾ ಎಲ್ಲರ ಸಹಕಾರ ಅಗತ್ಯ ಎಂದೂ ಅವರು ಕರೆ ನೀಡಿದರು. ಎಎಸ್‌ಪಿ ನಿಖೀಲ್‌ ಬಿ. ಮಾತನಾಡಿ, ಸಾರ್ವಜನಿಕವಾಗಿ ನಿಯಮ ಪಾಲನೆಯಲ್ಲಿ ಲೋಪ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಳಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲಾ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಹೇಳಿದರು.

ತಹಶೀಲ್ದಾರ್‌ ರವಿಚಂದ್ರ, ಸಿಪಿಐ ದಿವಾಕರ್‌, ತಾಲೂಕು ಆರೋಗ್ಯಾಧಿಕಾರಿ ಮೂರ್ತಿರಾಜ್‌ ಭಟ್ಟ, ಪುರಸಭಾ ಮುಖ್ಯಾಧಿಕಾರಿ ದೇವರಾಜು, ತಾಪಂ ಇಒ ಪ್ರಭಾಕರ ಚಿಕ್ಕನಮನೆ, ಆಶಾ, ಆರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.