ಆಸ್ತಿ ಕರ ಹೆಚ್ಚಳಕ್ಕೆ ವಿರೋಧ
Team Udayavani, Jun 13, 2020, 9:35 AM IST
ಹುಬ್ಬಳ್ಳಿ: ಮಹಾನಗರ ಪಾಲಿಕೆ ಆಸ್ತಿಕರ ಹೆಚ್ಚಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು ಶುಕ್ರವಾರ ಪಾಲಿಕೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಸರಕಾರ ಕರ ಹೆಚ್ಚಿಸಿರುವುದು ಸರಿಯಾದ ಕ್ರಮವಲ್ಲ. ಈ ನಿರ್ಧಾರ ಹಿಂಪಡೆಯುವಂತೆ ಸರಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮೂಲಕ ಒತ್ತಾಯಿಸಲಾಗಿತ್ತು. ಆದರೆ ಜನರ ಸಂಕಷ್ಟ ಅರಿಯುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಸರಕಾರದ ಖಜಾನೆ ತುಂಬಿಸಿಕೊಳ್ಳಲು ಜನರ ಮೇಲೆ ಹೆಚ್ಚುವರಿ ತೆರಿಗೆ ಹೆಚ್ಚಿಸಿದ್ದು, ಇದೊಂದು ಜನ ವಿರೋಧಿ ಕ್ರಮ. ಬಿಜೆಪಿ ಸರಕಾರ ಘೋಷಿಸಿರುವ 20 ಸಾವಿರ ಕೋಟಿ ರೂ. ಪ್ಯಾಕೇಜ್ ಇಲ್ಲಿನ ಜನರಿಗೆ ತಲುಪಿಲ್ಲ. ಕೇವಲ ಆಶ್ವಾಸನೆಗಳ ಮೂಲಕ ಜನರನ್ನು ವಂಚಿಸುವ ಕೆಲಸವನ್ನು ಬಿಜೆಪಿ ಸರಕಾರದಿಂದ ನಡೆಯುತ್ತಿದೆ. ಕೂಡಲೇ ತೆರಿಗೆ ಹೆಚ್ಚಳ ವಾಪಸ್ ಪಡೆಯಬೇಕು, ವಿಶೇಷ ಪ್ಯಾಕೇಜ್ ಜನರಿಗೆ ತಲುಪಬೇಕೆಂದು ಒತ್ತಾಯಿಸಿ ಸರಕಾರಗಳ ವಿರುದ್ಧ ಘೋಷಣೆ ಕೂಗಿದರು.
ಆಪ್ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಮಾತನಾಡಿ, ತೆರಿಗೆ ಹೆಚ್ಚಳದಿಂದ ಪಾಲಿಕೆಗೆ ಸುಮಾರು 12 ಕೋಟಿ ರೂ. ಹೆಚ್ಚಳವಾಗಲಿದೆ. ಆದರೆ ಇದು ಜನಸಾಮಾನ್ಯರಿಗೆ ಹೊರೆಯಾಗಲಿದೆ ಎನ್ನುವ ಕಾಳಜಿ ಸರಕಾರಕ್ಕಿಲ್ಲ. ಸರಕಾರ ಕೂಡಲೇ ಎಚ್ಚೆತ್ತುಕೊಂಡು ತೆರಿಗೆ ಕಡಿಮೆ ಮಾಡದಿದ್ದರೆ ಜನಾಂದೋಲನ ರೂಪಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದರು.
ಮುಖಂಡ ವಿಕಾಸ ಸೊಪ್ಪಿನ ಮಾತನಾಡಿ, ಲಾಕ್ ಡೌನ್ ಸಂದರ್ಭದಲ್ಲಿ ಜನರು ಹೋರಾಟಕ್ಕೆ ಬರಲ್ಲ ಎನ್ನುವ ಕಾರಣಕ್ಕೆ ಹಲವು ಜನ ವಿರೋಧಿ ಕ್ರಮ ಹೇರುವ ಕೆಲಸ ಸರಕಾರಗಳಿಂದ ನಡೆಯುತ್ತಿವೆ. ಕೂಡಲೇ ತೆರಿಗೆ ಹೆಚ್ಚಳ ಕ್ರಮವನ್ನು ಸರಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಮುಖಂಡರಾದ ಶಶಿಕುಮಾರ ಸುಳ್ಳದ, ವಿವೇಕಾನಂದ ಸಾಲಿನ್ಸ್, ಶಿವಲಿಂಗಪ್ಪ ಜಡೆಣ್ಣವರ, ವಿಜಯ ಸಾಯಿ, ತ್ಯಾಗರಾಜ ಅಲ್ಲಂಪಟ್ಟಿ, ಅನಂತಕುಮಾರ ಭಾರತೀಯ, ಲಕ್ಷ್ಮಣ ರಾಠೊಡ, ಪ್ರತಿಭಾ ದಿವಾಕರ, ಹರಿಕೃಷ್ಣ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.