ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತಿ ಸಾವಿನ ಆಡಿಟ್: ಸಚಿವ ಸುಧಾಕರ್
Team Udayavani, Jun 13, 2020, 3:44 PM IST
ರಾಯಚೂರು: ರಾಜ್ಯದಲ್ಲಿ ಕೋವಿಡ್-19 ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರತಿ ಸಾವಿನ ಆಡಿಟ್ ಮಾಡಲಾಗುತ್ತಿದೆ ಎಂದು ವೇದ್ಯಕೀಯ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಕ್ಕೆಂದೆ ತಜ್ಞ ವೈದ್ಯರ ತಂಡ ರಚಿಸಲಾಗಿದೆ. ಯಾವುದೇ ಕಾರಣಕ್ಕೂ ಸಾವು ಸಂಭವಿಸಿದರೂ ಅದರ ತನಿಖೆ ನಡೆಸಿ ವರದಿ ನೀಡುವಂತೆ ತಿಳಿಸಲಾಗಿದೆ ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್-19 ನಿಯಂತ್ರಣದಲ್ಲಿದ್ದು ಭಯ ಪಡುವ ಅಗತ್ಯವಿಲ್ಲ. ಈವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳಲ್ಲಿ ಶೇ.42ರಷ್ಟು ಗುಣಮುಖವಾಗಿದೆ. ಶೇ.95ರಷ್ಟು ರೋಗಿಗಳಿಗೆ ಕಾಯಿಲೆ ಲಕ್ಷಣಗಳೇ ಇಲ್ಲ. ಶೇ.5 ರಷ್ಟು ರೋಗಿಗಳು ಮಾತ್ರ ತೀವ್ರತರ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.
ವೈದ್ಯರು ಸ್ವಪ್ರೇರಣೆಯಿಂದ ಕೋವಿಡ್ 19 ಕೆಲಸಕ್ಕೆ ಹಾಜರಾಗಬೇಕು. ಸೇವೆಯಿಂದ ಉದ್ದೇಶ ಪೂರಕವಾಗಿ ವಿಮುಖರಾದರೆ ಮಾತ್ರ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ರಾಜ್ಯದಲ್ಲಿ ಎಲ್ಲಿಯೂ ಕೋವಿಡ್-19 ಕೆಲಸಕ್ಕೆ ನಿಯೋಜನೆಗೊಂಡವರಿಗೆ ಸೋಂಕು ತಗುಲಿಲ್ಲ. ಆದರೆ, ರಿಮ್ಸ್ ನಲ್ಲಿ ನಾಲ್ವರು ನರ್ಸ್ ಗಳಿಗೆ ಹೇಗೆ ಬಂತು ಎಂಬ ವಿವರ ನೀಡುವಂತೆ ರಿಮ್ಸ್ ನಿರ್ದೇಶಕರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.