ಪಿಯು ಇಂಗ್ಲಿಷ್ ಪರೀಕ್ಷೆ : ನಿಷೇಧಾಜ್ಞೆ
Team Udayavani, Jun 13, 2020, 4:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಜೂನ್ 18 ರಂದು ಜಿಲ್ಲೆಯ 33 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 7.30ರಿಂದ ಸಂಜೆ 4 ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ, ಮೊಬೈಲ್ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ನೀಡಿದ್ದಾರೆ.
ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯೊಳಗೆ ಯಾರಾದರೂ ಪ್ರವೇಶಿಸಿದರೆ ಅಥವಾ ಪ್ರವೇಶಿಸಲು ಯತ್ನಿಸಿದರೆ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಪೊಲೀಸರ ವಶಕ್ಕೆ ಒಪ್ಪಿಸಿ, ಕೂಡಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.